![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 30, 2021, 4:49 PM IST
ಬಳ್ಳಾರಿ: ಸರ್ಕಾರ ನೀಡುವ ವೇತನಕ್ಕೆ ಸರಿಯಾಗಿ ಕೆಲಸ ಮಾಡಬೇಕು. ಹಣ ಅಥವಾ ಬೇರೆ ಯಾವುದೇ ದುರಾಸೆಗೆ ಬೀಳದೆ ಸಾರ್ವಜನಿಕರಿಗೆ ನಿಸ್ವಾರ್ಥ ಸೇವೆ ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹೇಳಿದರು.
ನಗರದ ಡಿಸಿ ಕಚೇರಿಯ ಕೆಸ್ವಾನ್ ವೀಡಿಯೋ ಸಭಾಂಗಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ವತಿಯಿಂದ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಹ ನ?ಸಪ್ತಾಹದ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ತೊಂದರೆ ಕೊಡುವ ಕೆಲಸ ಮಾಡಬಾರದು. ಸರ್ಕಾರದ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ವಿನಾಕಾರಣ ತಡ ಮಾಡದೆ, ನಿಗದಿತ ಸಮಯದಲ್ಲಿ ಸೇವೆ ಒದಗಿಸಬೇಕು. ನೀವು ತೆಗೆದುಕೊಳ್ಳುವ ಸಂಬಳಕ್ಕೆ ಯೋಗ್ಯವಾದ ಕೆಲಸ ಮಾಡಬೇಕು. ಜೀವನದಲ್ಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೋರಿದರು.
ಎಸಿಬಿ ಬಳ್ಳಾರಿ ವಲಯದ ಪೊಲೀಸ್ ಅಧಿಧೀಕ್ಷಕ ಗುರುನಾಥ ಬ.ಮತ್ತೂರ ಮಾತನಾಡಿ, ಇಂದಿನ ಯುವ ಜನತೆ ಪಣ ತೊಟ್ಟರೆ, ಭಷ್ಟಾಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು. ಆತ್ಮಸಾಕ್ಷಿ, ಮನಸಾಕ್ಷಿಗೆ ಅನುಗುಣವಾಗಿ ಕೆಲಸಮಾಡಬೇಕು ಮತ್ತು ಭಷ್ಟಾಚಾರವನ್ನು ಸಂಪೂರ್ಣವಾಗಿ ತೊಲಗಿಸಲು ಎಲ್ಲರೂಕೈಜೋಡಿಸಬೇಕು. ಪಾರದರ್ಶಕವಾಗಿ, ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ವಿವರಿಸಿದರು. ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪ ಅಧಿಧೀಕ್ಷಕ ಎ.ಸೂರ್ಯನಾರಾಯಣ ರಾವ್ ಮಾತನಾಡಿ, ಸರ್ಕಾರಿ ನೌಕರರು ಸರ್ಕಾರ ನಿಗದಿಪಡಿಸುವ ಕೆಲಸವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಾಡಬೇಕು. ಯಾವುದೇ ಅವ್ಯವಹಾರಕ್ಕೆ ಮುಂದಾಗಬಾರದು. ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದಿಸಿದರೆ ಅಂತವರನ್ನು ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಭ್ರಷ್ಟಾಚಾರನಿಗ್ರಹದಳದ ಆರಕ್ಷಕ ನಿರೀಕ್ಷಕ ಪ್ರಭುಲಿಂಗಯ್ಯ ಹಿರೇಮಠ ಮಾತನಾಡಿದರು.
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.