ಮಳೆಗೆ ಕೊಳೆತು ಹೋಯ್ತು ಮೆಣಸು

Team Udayavani, Nov 21, 2021, 12:47 PM IST

ಮಳೆಗೆ ಕೊಳೆತು ಹೋಯ್ತು ಮೆಣಸು

ಕಾನಾಹೊಸಹಳ್ಳಿ: ಚಳಿಗಾಲ ಆರಂಭದ ಹೊತ್ತಿಲಲ್ಲಿ ಚಂಡಮಾರುತ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಪ್ರಭಾವ ಬೀರಿದ್ದು ಕಾನಾಹೊಸಹಳ್ಳಿ ಸಮೀಪದ ಜುಟ್ಟಲಿಂಗನಹಟ್ಟಿ ಗ್ರಾಮದ ರೈತ ಮಂಜುನಾಥನ ಪಾಲಿಗೆ ಮಳೆ ಲಕ್ಷಾಂತರ ರೂ. ನಷ್ಟ ಮಾಡಿದೆ.

ಜುಟ್ಟಲಿಂಗನಹಟ್ಟಿಯ ಯುವ ರೈತ ಮಂಜುನಾಥ ಮೂರು ಎಕರೆ ಜಮೀನಿನಲ್ಲಿ ಮೂರು ಲಕ್ಷ ಖರ್ಚು ಮಾಡಿ ಇಪ್ಪತ್ತು ಕ್ವಿಂಟಲ್‌ ಬ್ಯಾಡಗಿ ಮೆಣಸಿನಕಾಯಿ ಬೆಳೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಸಾಗಿಸಿ ಮಾರಾಟ ಮಾಡಬೇಕು ಎನ್ನುವಷ್ಟರಲ್ಲಿ ಒಣ ಮೆಣಸಿನಕಾಯಿಯನ್ನು ಒಣಗಿಸಲೆಂದು ಜಮೀನಿನಲ್ಲಿ ಹಾಕಿದ್ದು ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮೆಣಸಿನಕಾಯಿ ಬೆಳೆ ಸಂಪೂರ್ಣ ಕೊಳೆತುಹೋಗಿದ್ದು ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಜುಟ್ಟಲಿಂಗನಹಟ್ಟಿ ಗ್ರಾಮದಲ್ಲಿ ಯುವ ರೈತ ಮಂಜುನಾಥ ಜೊತೆಗೆ ಇತರೆ ತೋಟದ ಬಸವರಾಜ್‌, ರಾಮಲಿಂಗಪ್ಪ, ಎಸ್‌.ಪಿ. ಬಸವರಾಜ್‌, ಸಣ್ಣಬೊಮ್ಮಣ್ಣ, ಬಸಣ್ಣ ಒಟ್ಟು 6 ಜನ ರೈತರು ಹತ್ತು ಎಕರೆ ಜಮೀನಿನಲ್ಲಿ ಸಸಿ, ಔಷಧ, ಕೂಲಿಗಾರರಿಗೆಂದು ಲಕ್ಷಾಂತರ ರೂ ಖರ್ಚು ಮಾಡಿ ಬೆಳೆ ಬೆಳೆದಿದ್ದಾರೆ. ಎಲ್ಲರದೂ ಇದೇ ಪರಿಸ್ಥಿತಿ. ಇಷ್ಟೆಲ್ಲ ಆದರೂ ಯಾವುದೇ ಅಧಿಕಾರಿಗಳು ಇಲ್ಲಿವರೆಗೂ ಭೇಟಿ ನೀಡಿ ಪರಿಶೀಲಿಸಿಲ್ಲ.

ನಾನು ಕಳೆದ ನಾಲ್ಕು ತಿಂಗಳ ಹಿಂದೆ 25 ಸಾವಿರ ಬ್ಯಾಡಗಿ ಮೆಣಸಿನಕಾಯಿ ಸಸಿ ನಾಟಿ ಮಾಡಿದ್ದು ಒಳ್ಳೆಯ ಬೆಳೆ ಬಂದಿತ್ತು. ಮಾರುಕಟ್ಟೆಯಲ್ಲಿ ಒಳ್ಳೆಯ ರೇಟು ಇದೆ. ಆದರೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜಮೀನಿನಲ್ಲಿ ಒಣಗಿ ಹಾಕಿದ್ದ ಮೆಣಸಿನಕಾಯಿ ಸಂಪೂರ್ಣ ಕೊಳೆತುಹೋಗಿದೆ.

ಇದೇ ರೀತಿಯಲ್ಲಿ ನಮ್ಮ ಜಮೀನಿನಲ್ಲಿ ಸುತ್ತಮುತ್ತಲಿನ ಆರು ಜನ ರೈತರ ಪರಿಸ್ಥಿತಿ ಇದೇ ರೀತಿ ಆಗಿದ್ದು ನಮಗೆ ಸರಕಾರದ ಕಡೆಯಿಂದ ನಷ್ಟವಾಗಿರುವ ಬೆಳೆಗೆ ಪರಿಹಾರ ನೀಡಿ. ಮಂಜುನಾಥ, ಬಸವರಾಜ್‌, ರೈತರು

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.