ರಾಜೇಶ್ವರಿ ಮೇಯರ್-ಮಾಲನ್ ಬೀ ಉಪಮೇಯರ್
ಕೊನೆಗೂ ಮಹಾನಗರ ಪಾಲಿಕೆ ಅಧಿಕಾರದ ಗದ್ದುಗೆ ಏರಿದ ಕೈ ಸದಸ್ಯರು, ಆಪರೇಷನ್ ಕಮಲ ಭೀತಿಯಿಂದ ಮುಕ್ತ
Team Udayavani, Mar 20, 2022, 11:27 AM IST
ಬಳ್ಳಾರಿ: ತೀವ್ರ ಕುತೂಹಲ ಮೂಡಿಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ -ಉಪಮೇಯರ್ ಆಯ್ಕೆಗೆ ಶನಿವಾರ ಚುನಾವಣೆ ನಡೆದಿದ್ದು, 34ನೇ ವಾರ್ಡ್ ಸದಸ್ಯೆ ರಾಜೇಶ್ವರಿ ಸುಬ್ಬರಾಯುಡು, 37ನೇ ವಾರ್ಡ್ ಸದಸ್ಯೆ ಮಾಲನ್ ಬೀ ಮೇಯರ್-ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬಹುಮತ ಹೊಂದಿದ್ದ ಕಾಂಗ್ರೆಸ್ ಕೊನೆಗೂ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಆಪರೇಷನ್ ಕಮಲ ಭೀತಿಯಿಂದಾಗಿ ಚುನಾವಣೆಗೂ ಮೂರು ದಿನಗಳ ಮುನ್ನ ಕಾಂಗ್ರೆಸ್ ಸದಸ್ಯರು ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಪಕ್ಷದ ವೀಕ್ಷಕರು, ಶಾಸಕರು, ಮುಖಂಡರು ಸತತ ಎರಡು ದಿನ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರಾದರೂ, ಮೇಯರ್-ಉಪಮೇಯರ್ ಆಯ್ಕೆಗೆ ಒಮ್ಮತ ಮೂಡಿರಲಿಲ್ಲ. ಬೆಂಗಳೂರಿನಿಂದ ವಾಪಸ್ ಬಳ್ಳಾರಿಗೆ ಬಂದು ನಗರದ ಅಲ್ಲಂಭವನದಲ್ಲಿ ಪುನಃ ಸಭೆ ನಡೆಸಿದ ಮುಖಂಡರು, ಸದಸ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಅಂತಿಮವಾಗಿ ಮೇಯರ್ ಸ್ಥಾನಕ್ಕೆ ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಸ್ಥಾನಕ್ಕೆ ಮಾಲನ್‌ಬೀ ಅವರನ್ನು ಆಯ್ಕೆ ಮಾಡಿದ್ದಾರೆ. ಬಳಿಕ 10 ಗಂಟೆ ಸುಮಾರಿಗೆ ಅಭ್ಯರ್ಥಿಗಳಿಬ್ಬರೂ ನಾಮಪತ್ರ ಸಲ್ಲಿಸಿದರು.
ಈ ವೇಳೆ ಬಿಜೆಪಿಯಿಂದಲೂ ಮೇಯರ್ ಸ್ಥಾನಕ್ಕೆ 21ನೇ ವಾರ್ಡ್ ಸದಸ್ಯೆ ಸುರೇಖಾ ಮಲ್ಲನಗೌಡ, ಉಪಮೇಯರ್ ಸ್ಥಾನಕ್ಕೆ 25ನೇ ವಾರ್ಡ್ ಸದಸ್ಯ ಗೋವಿಂದರಾಜುಲು ನಾಮಪತ್ರ ಸಲ್ಲಿಸಿದ್ದರು. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಚುನಾವಣೆಯಲ್ಲಿ ಪಾಲಿಕೆಯ ಒಟ್ಟು 39 ವಾರ್ಡ್ ಸದಸ್ಯರು ಹಾಗೂ ಇಬ್ಬರು ಶಾಸಕರು, ಇಬ್ಬರು ಸಂಸದರು ಹಾಗೂ ಒಬ್ಬ ವಿಧಾನಪರಿಷತ್ ಸದಸ್ಯರು ಸೇರಿದಂತೆ 44 ಸದಸ್ಯ ಬಲದ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಅಭ್ಯರ್ಥಿ ಎಂ.ರಾಜೇಶ್ವರಿ, ಉಪಮೇಯರ್ ಅಭ್ಯರ್ಥಿ ಮಾಲನ್ ಬೀ ಕ್ರಮವಾಗಿ ತಲಾ 29 ಮತಗಳನ್ನು ಪಡೆಯುವುದರ ಮೂಲಕ ಮೇಯರ್ ಮತ್ತು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಪ್ರಾದೇಶಿಕ ಆಯುಕ್ತ ಡಾ| ಎನ್.ವಿ. ಪ್ರಸಾದ್ ಘೋಷಿಸಿದರು.
ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿ ಸುರೇಖಾ ಮಲ್ಲನಗೌಡ, ಎಂ.ಗೋವಿಂದರಾಜುಲು ಅವರು ಕೇವಲ 15 ಮತಗಳನ್ನಷ್ಟೇ ಪಡೆದಿದ್ದಾರೆ. ಮೇಯರ್ ಮತ್ತು ಉಪಮೇಯರ್ ಕಣದಲ್ಲಿ ತಲಾ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಎರಡು ನಿಮಿಷ ಕಾಲವಕಾಶ ನೀಡಲಾಗಿತ್ತಾದರೂ, ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಯಿತು. ನಂತರ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಯಿತು. ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹಲ್ಲೋಟ್ ಮತ್ತಿತರರು ಇದ್ದರು.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ಖುಷಿಯಾಗಿದೆ. ಮೇಯರ್ ಹುದ್ದೆಯನ್ನು ನಾನು ನಿರೀಕ್ಷಿಸಿರಲಿಲ್ಲ. ಆದರೂ, ಒಲಿದು ಬಂದಿದ್ದು, ಸಮರ್ಥವಾಗಿ ನಿಭಾಯಿಸುವೆ. ಬಳ್ಳಾರಿ ನಗರದಲ್ಲಿ ಪ್ರಮುಖ ಸಮಸ್ಯೆಗಳಾದ ಕುಡಿಯುವ ನೀರು, ಸ್ವತ್ಛತೆ, ಚರಂಡಿ, ಬೀದಿ ದೀಪಗಳು ಸೇರಿ ಇನ್ನಿತರೆ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ – ಎಂ.ರಾಜೇಶ್ವರಿ ಸುಬ್ಬರಾಯುಡು, ಮೇಯರ್, ಮಹಾನಗರ ಪಾಲಿಕೆ, ಬಳ್ಳಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.