ರಥೋತ್ಸವ ಸಂಭ್ರಮ
Team Udayavani, Mar 10, 2020, 2:39 PM IST
ಕುರುಗೋಡು: ಪಟ್ಟಣದ ಐತಿಹಾಸಿಕ ಶ್ರೀ ದೊಡ್ಡಬಸವೇಶ್ವರ ಜಾತ್ರ ಮಹಾರಥೋತ್ಸವ ವಿಜೃಂಭಣೆಯಿಂದ ಸೋಮವಾರ ಸಂಜೆ ನಡೆಯಿತು.
ರಥೋತ್ಸವದ ನಿಮಿತ್ತ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ದೊಡ್ಡಬಸವೇಶ್ವರ ದೇವರಿಗೆ ವಿಶೇಷ ಅಭಿಷೇಕ ಮತ್ತಿತರೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಉತ್ಸವದ ಮೊದಲಿಗೆ ಕೆರೆಕೆರೆ, ಮುಷ್ಟಗಟ್ಟೆ ಮತ್ತು ಸೋಮಲಾಪುರ ಗ್ರಾಮದಿಂದ ಧೂಳುಗಾಯಿ, ಕಳಸ ಮತ್ತು ಪೂರ್ಣಕುಂಭದ ಮೆರವಣಿಗೆ ನಡೆಯಿತು.
ನಂತರ ಹೂವು ಮತ್ತು ತರವಾರಿ ವಸ್ತ್ರಗಳಿಂದ ಅಲಂಕೃತಗೊಂಡ ದೊಡ್ಡಬಸವೇಸ್ವರ ಗೂಳಿ ಮೆರವಣಿಗೆ ಸಕಲ ವಾಧ್ಯ ಹಾಗೂ ಮುತ್ತೆçದೆಯರ ಕಳಸದೊಂದಿಗೆ ನೀಲಮ್ಮ ಮಠಕ್ಕೆ ತೆರಳಿ ವಿಶೇಷ ಪೂಜೆ ನಡೆಸಿ ಮಠದ ಸ್ವಾಮಿಯನ್ನು ಮೆರವಣಿಗೆ ಮೂಲಕರಥಕ್ಕೆ ಕರೆ ತರಲಾಯಿತು.
ಪ್ರತಿವರ್ಷ 6 ಗಂಟೆಗೆ ಎಳೆಯುವ ರಥೋತ್ಸವವು, ಈ ವರ್ಷ ಸಂಜೆ 5:40ಕ್ಕೆ 60ಅಡಿ ಎತ್ತರದ ರಥೋತ್ಸವ ದೇವಸ್ಥಾನದ ಮುಂಭಾಗದಿಂದ ರಥಬೀದಿಯಲ್ಲಿ ಎದರು ಬಸವಣ್ಣ ದೇವಸ್ಥಾನ ತಲುಪಿ ನಂತರ ಸ್ವಸ್ಥಾನಕ್ಕೆ ಹಿಂತಿರುಗಿತು. ಈ ಬಾರಿ ರಥೋತ್ಸವಕ್ಕೆ ಕಳೆದ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರ ಪಾಲ್ಗೊಂಡಿದ್ದರು. ಕುರುಗೋಡು ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಹೊರ ಜಿಲ್ಲೆ ಹಾಗೂ ರಾಜ್ಯದ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ರಥೋತ್ಸವದ ನಿಮಿತ್ತ ನಾನಾ ಯುವಕರು ನೀರಿನ ಮಜ್ಜಿಗೆ ಅರವಟ್ಟಿಗೆ ತೆರೆದು ಬಿಸಿಲಲ್ಲಿ ಬೆಂದ ಜನರಿಗೆ ತಂಪು ನೀಡಿದರು. ರಥೋತ್ಸವದಲ್ಲಿ ಪಾಲ್ಗೊಂಡ ಜನರಿಗೆ ಇಲಾಖೆ ವತಿಯಿಂದ ರೈತ ಸಮುದಾಯ ಭವನದಲ್ಲಿ ಹಾಗೂ ಖಾಸಗಿ ಮತ್ತು ವಿವಿಧ ಧಾರ್ಮಿಕ ಸಂಘಗಳು ಪಟ್ಟಣದ ಕಂಪ್ಲಿ, ಗೆಣಿಕೆಹಾಳ್, ಮುಷ್ಟಗಟ್ಟೆ ರಸ್ತೆ, ರಾಘವಾಂಕ ಮಠದಲ್ಲಿ ಉಚಿತ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು.
ಬಿಗಿಭದ್ರತೆ: ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ವಿಶೇಷ ಬಂದೋಬಸ್ತ್ ಒದಗಿಸಿತ್ತು. ದೇವಸ್ಥಾನದ ಪ್ರಾಂಗಣದಲ್ಲಿ ತಾತ್ಕಾಲಿಕ ಮಹಿಳಾ ಪೊಲೀಸ್ ಠಾಣೆ ತೆರೆಯಲಾಗಿತ್ತು. ಅಲ್ಲದೆ ದೇವಸ್ಥನದ ಒಳಗೆ ಮತ್ತು ಸುತ್ತಮುತ್ತ 16ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ನಾನಾ ಗ್ರಾಮದಿಂದ ಬರುವ ವಾಹನ ನಿಲುಗಡೆಗೆ 5ರಸ್ತೆಗಳಲ್ಲಿ ವಿಶೇಷ ನಿಲ್ದಾಣ ನಿರ್ಮಿಸಲಾಗಿತ್ತು. ಭಕ್ತರ ಪ್ರಯಾಣಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಟ್ಟಣದ ಪುರಸಭೆ ವತಿಯಿಂದ 6 ಟ್ಯಾಂಕರ್ ಮೂಲಕ ಕುಡಿವ ನೀರನ್ನು ವಿತರಿಸಲಾಯಿತು. ಅಲ್ಲದೆ ಪ್ರತಿ ವಾರ್ಡ್‌ನಲ್ಲೂ ಬೀದಿ ದೀಪ ಅಳವಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.