ಹೈಟೆಕ್‌ ಹಂಪಿ ಬಜಾರ್‌ ನಿರ್ಮಾಣಕ್ಕೆ ಸಿದ್ಧತೆ

ಹಂಪಿ ಬಜಾರ್‌ ಎಂದು ಹೆಸರಿಡಲಾಗಿದ್ದು, ಮುಖಭಾಗದಲ್ಲಿ ಹಂಪಿ ಸ್ಮಾರಕಗಳ ಮಾದರಿಯಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

Team Udayavani, Mar 22, 2022, 6:29 PM IST

ಹೈಟೆಕ್‌ ಹಂಪಿ ಬಜಾರ್‌ ನಿರ್ಮಾಣಕ್ಕೆ ಸಿದ್ಧತೆ

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಹೊಂದಿಕೊಂಡಿರುವ ತಾಲೂಕಿನ ಕಮಲಾಪುರದ ಹೊಸ ಬಸ್‌ ನಿಲ್ದಾಣದಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ ಹಂಪಿ ಬಜಾರ್‌ ನಿರ್ಮಾಣಕ್ಕೆ ಪಟ್ಟಣ ಪಂಚಾಯಿತಿ ಚಿಂತನೆ ನಡೆಸಿದ್ದು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

ಹಂಪಿ ಬಜಾರ್‌ ಹೆಸರಿನಲ್ಲಿ ಹೈಟೆಕ್‌ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಪಪಂ ಮುಂದಾಗಿದ್ದು, ಈಗಾಗಲೇ ನೀಲನಕ್ಷೆ ಸಿದ್ಧಪಡಿಸಿ ಅಗತ್ಯ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಮಲಾಪುರ ಪಟ್ಟಣದ ಹೊಸ ನಿಲ್ದಾಣದಲ್ಲಿ ಪೂರ್ವದಿಂದ ಪಶ್ಚಿಮಕ್ಕೆ 107.2 ಅಡಿ, ಪೂರ್ವದ ಕಡೆ ದಕ್ಷಣದಿಂದ ಉತ್ತರಕ್ಕೆ 316 ಅಡಿ, ಪಶ್ಚಿಮಕ್ಕೆ ದಕ್ಷಣದಿಂದ ಉತ್ತರಕ್ಕೆ 397.6 ಅಡಿಯಲ್ಲಿ ಬೃಹತ್‌ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ವಾಹನಗಳ ಪಾರ್ಕಿಂಗ್‌
ವ್ಯವಸ್ಥೆ ಇದ್ದರೆ, ನೆಲಮಹಡಿಯಲ್ಲಿ 34 ವಾಣಿಜ್ಯ ಮಳಿಗೆಗಳು, ಒಂದು ಹೋಟೆಲ್‌, ಶೌಚಾಲಯ ಹಾಗೂ ಆಹಾರ ಅಂಗಳವನ್ನು ನಿರ್ಮಾಣ ಮಾಡಲಾಗುತ್ತದೆ. ಮೊದಲನೇ ಮಹಡಿಯಲ್ಲಿ 22 ಸಾಮಾನ್ಯ ವಸತಿ ಕೋಣೆಗಳು, 6 ವಸತಿಗೃಹಗಳು.ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ.

ಕಮಲಾಪುರ ಪಟ್ಟಣ ಪಂಚಾಯಿತಿ ಪುರಸಭೆಗೆ ಮೇಲ್ದರ್ಜೆಗೆ ಏರುತ್ತಿದೆ. ಆದರೆ ಇಲ್ಲಿ ಸುಸಜ್ಜಿತವಾದ ವಾಣಿಜ್ಯ ಕಟ್ಟಡಗಳಿಲ್ಲ. ಕೆಲ ಕಟ್ಟಡಗಳಿದ್ದರೂ ಮುಲಸೌಕರ್ಯದ ಕೊರತೆಯಿದೆ. ಬಹುದಿನಗಳಿಂದ ಪಾಳು ಬಿದ್ದಿದ್ದ ಪಟ್ಟಣದ ಹೊಸ ಬಸ್‌ ನಿಲ್ದಾಣದಲ್ಲಿ ಕಳೆದ ವರ್ಷ ವಾಣಿಜ್ಯ ಮಳಿಗೆಗಳನ್ನು ತೆರವು ಗೊಳಿಸಲಾಗಿತ್ತು.

ಹಂಪಿ ವಾಸ್ತುಶಿಲ್ಪ ಮಾದರಿಯಲ್ಲಿ ನಿರ್ಮಾಣ
ನೂತನ ವಿಜಯನಗರ ಜಿಲ್ಲೆಯ ಬಹುತೇಕ ಕಟ್ಟಡಗಳು ಹಂಪಿಯ ವಾಸ್ತುಶಿಲ್ಪದ ಮಾದರಿಯಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಇದರಂತೆ ಕಮಲಾಪುರದ ಹೈಟೆಕ್‌ ವಾಣಿಜ್ಯ ಮಳಿಗೆಯನ್ನು ಹಂಪಿ ಬಜಾರ್‌ ಎಂದು ಹೆಸರಿಡಲಾಗಿದ್ದು, ಮುಖಭಾಗದಲ್ಲಿ ಹಂಪಿ ಸ್ಮಾರಕಗಳ ಮಾದರಿಯಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

ಪ್ರವಾಸಿಗರಿಗೆ ಅನುಕೂಲ
ಹೈಟೆಕ್‌ ಹಂಪಿ ಬಜಾರ್‌ ನಿರ್ಮಾಣವಾದಲ್ಲಿ ಹಂಪಿ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಊಟ, ವಸತಿಗಾಗಿ ಪ್ರವಾಸಿಗರು ಹೊಸಪೇಟೆಗೆ ತೆರಳುವುದು ತಪ್ಪಲಿದೆ. ಇದೀಗ ಕಮಲಾಪುರದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ವಸತಿಗೃಹ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ.

ಕಮಲಾಪುರದಲ್ಲಿ ಗುಣಮಟ್ಟದ ವಾಣಿಜ್ಯ ಮಳಿಗೆ ಹಾಗೂ ವಸತಿಗೃಹಗಳ ನಿರ್ಮಾಣಕ್ಕೆ ಚಿಂತನೆ ನಡೆದಿದ್ದು, ಯೋಜನೆ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಸರ್ಕಾರದಿಂದ ಅನುದಾನ ಜಾರಿಯಾದ ನಂತರ ಯೋಜನೆ ಸಿದ್ಧಪಡಿಸಲಾಗುವುದು.
ನಾಗೇಶ್‌, ಮುಖ್ಯಾಧಿಕಾರಿ,
ಪಪಂ, ಕಮಲಾಪುರ

ಪಟ್ಟಣದ ಹೊಸ ಬಸ್‌ ನಿಲ್ದಾಣದ ಸ್ಥಳದಲ್ಲಿ ಹೈಟೆಕ್‌ ಹಂಪಿ ಬಜಾರ್‌ ನಿರ್ಮಾಣಕ್ಕಾಗಿ ಸರಕಾರಕ್ಕೆ ಅನುಮೋದನೆ ಕಳುಹಿಸಲಾಗಿದೆ. ಸಚಿವ ಆನಂದ್‌ಸಿಂಗ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಿದ್ದಾರೆ.
ಸಯ್ಯದ್‌ ಅಮಾನುಲ್ಲ,
ಅಧ್ಯಕ್ಷರು, ಪಪಂ, ಕಮಲಾಪುರ

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.