ಮಾಸಾಶನ ಮಂಜೂರಾತಿಗೆ ಆಗ್ರಹ
Team Udayavani, Feb 6, 2018, 5:30 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನ ಅಧಿಕಾರಿಗಳ ನಿರ್ಲಕ್ಷತನದಿಂದ ಸತತ ಮೂರು ತಿಂಗಳಿಂದಲೂ ನೂರಾರು ಫಲಾನುಭವಿಗಳ ಮಾಸಾಶನ ಸೌಲಭ್ಯ ರದ್ದಾಗಿರುವುದನ್ನು ಖಂಡಿಸಿ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆ ತಾಲೂಕು ಅಧ್ಯಕ್ಷೆ ಸರ್ದಾರ್ ಹುಲಿಗೆಮ್ಮ ಮಾತನಾಡಿ, ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ನೀಡುವ ಮಾಸಾಶನ
ಸೌಲಭ್ಯವನ್ನು ಫಲಾನುಭವಿಗಳಿಗೆ ಮರು ಮಂಜೂರು ಮಾಡಬೇಕು. ಅಧಿಕಾರಿಗಳು ಫಲಾನುಭವಿಗಳ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ ಸೌಲಭ್ಯವನ್ನು ರದ್ದು ಮಾಡಿರುವುದು ಅಧಿಕಾರಿಗಳ ನಿರ್ಲಕ್ಷತನವನ್ನು ಎತ್ತಿ ತೋರಿಸುತ್ತದೆ. ಪುನಃ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು
ಕಚೇರಿಗಳನ್ನು ಅಲೆದಾಡುವಂತಾಗಿದ್ದು, ಮಧ್ಯವರ್ತಿಗಳಿಗೆ ಸಾವಿರಾರು ರೂಗಳನ್ನು ಭರಿಸುವಂತಾಗಿದೆ. ವಿಧವೆಯರು, ವೃದ್ಧರು ಸೇರಿದಂತೆ ವಿವಿಧ ಅಶಕ್ತರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಕಲ್ಪಿಸುವುದು ಸರ್ಕಾರದ ಹೊಣೆಯಾಗಿದೆ. ನಾಡ ಕಚೇರಿ ಮತ್ತು ತಾಲೂಕು ಕಚೇರಿಗಳಲ್ಲಿ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈಗಾಗಲೇ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ನೀಡಿದ್ದರೂ ಮಾಸಾಶನ
ಒದಗಿಲ್ಲ. ಕೂಡಲೇ ಸೌಲಭ್ಯ ವಂಚಿತರಿಗೆ ಮಾಸಾಶನ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಪ ತಹಶೀಲ್ದಾರ್ ನಾಗರಾಜ ಅವರಿಗೆ ಸಂಘಟನೆ ಕಾರ್ಯದರ್ಶಿ ಜಿ.ಸರೋಜ ಮನವಿ ಸಲ್ಲಿಸಿದರು. ಸಂಘಟನೆ ಮುಖಂಡರಾದ ರಾಜೇಶ್ವರಿ, ರಾಮಕ್ಕ ಈರಮ್ಮ, ಬಸಮ್ಮ, ತಿಪ್ಪವ್ವ, ಮಾಸ್ತೆಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Udupi: ನ. 14-20: ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ
Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್ ಆರತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.