ಗುಳೆ ಪದ್ಧತಿ ತಡೆಗೆ ಆಗ್ರಹ
Team Udayavani, Jan 11, 2019, 11:06 AM IST
ಬಳ್ಳಾರಿ: ಮಹಾನಗರಗಳಿಗೆ ಗುಳೆ ಹೋಗುವುದನ್ನು ನಿಯಂತ್ರಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಕರ್ನಾಟಕ ಬಂಜಾರ ಸೇವಾ ಸಂಘದ ಪದಾಧಿಕಾರಿಗಳು ಗುರುವಾರ ಪತ್ರ ಚಳವಳಿ ನಡೆಸಿದರು.
ರಾಜ್ಯದಲ್ಲಿ ಗುಳೆ ಹೋಗುವವರ ಸಂಖ್ಯೆ ತಡೆಗಟ್ಟಲು ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ವರ್ಷಪೂರ್ತಿ ಕೆಲಸ ನೀಡಬೇಕು. ಬಹುತೇಕ ಬಡವರಾಗಿರುವ ಬಂಜಾರ ಸಮುದಾಯದಲ್ಲಿ ಉದ್ಯೋಗ ಅರಸಿ ಊರುಬಿಟ್ಟು ಮಹಾನಗರಗಳಿಗೆ ದುಡಿಯಲು ಗುಳೆ ಹೋಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದಾಗಿ ಗುಳೆ ಹೋದವರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಗುಳೆ ಪದ್ಧತಿಯನ್ನು ನಿಯಂತ್ರಿಸಲು ಸಂಬಂಧಪಟ್ಟ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಸದಸ್ಯರು ಒತ್ತಾಯಿಸಿದರು.
ಜಿಲ್ಲೆಯ ಎಲ್ಲ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಬೇಕು. ತಾಂಡಾಗಳಿಗೆ ನೀರು, ಆರೋಗ್ಯ ಕೇಂದ್ರ, ಉತ್ತಮ ರಸ್ತೆ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು. ಬರುವ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗಾಗಿ ಕನಿಷ್ಠ ಒಂದು ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಸಿಎಂಗೆ ಬರೆದ ಪತ್ರಗಳನ್ನು ಪ್ರಧಾನ ಅಂಚೆ ಕಚೇರಿಯಲ್ಲಿನ ಅಂಚೆ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಪತ್ರ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಎಸ್.ಚಂದ್ರನಾಯ್ಕ, ರಾಮಾನಾಯ್ಕ, ಧರ್ಮ, ರಮೇಶ್ ಸೇರಿ ಸಮುದಾಯದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.