ಸೇವಾ ಭದ್ರತೆಗೆ ಆಗ್ರಹಿಸಿ ಮನವಿ
Team Udayavani, Oct 9, 2020, 7:14 PM IST
ಹೂವಿನಹಡಗಲಿ: ಸರಕಾರ ಜಾರಿಗೆ ತಂದಿರುವ ಸ್ವಾಮಿತ್ವ ಯೋಜನೆಕೆಲಸದಿಂದ ನಮ್ಮನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ಪರವಾನಗಿ ಭೂಮಾಪಕರ ಸಂಘ ಹಡಗಲಿ ತಾಲೂಕು ಘಟಕದ ಪದಾಧಿಕಾರಿಗಳು ಬುಧವಾರ ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಹಂಸಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
ಅಧ್ಯಕ್ಷರಾದ ಎಂ ತಿಪ್ಪಾನಾಯ್ಕ ಮಾತನಾಡಿ ಸ್ವಾಮಿತ್ವ ಯೋಜನೆ ಅಡಿ ಪರವಾನಗಿ ಭೂ ಮಾಪಕರನ್ನು ನಿಯೋಜಿಸಿಕೊಳ್ಳುತ್ತಾರೆ ಆದರೆ ನಮಗೆಯಾವುದೇ ರೀತಿಯ ತರಬೇತಿ ಮತ್ತು ಸೂಕ್ತ ಮಾರ್ಗದರ್ಶನ ನಮಗೆ ನೀಡಿಲ್ಲ. ಇದುವರೆಗೂ ಪರವಾನಗಿ ಭೂ ಮಾಪಕರಿಗೆ ಸೇವಾಭದ್ರತೆ ಒದಗಿಸಿಲ್ಲ. ನಮ್ಮ ರಾಜ್ಯ ಮಂಡಳಿಯೊಂದಿಗೆ ಚರ್ಚಿಸದೆ ಏಕಾಏಕಿ ಯೋಜನೆಯನ್ನು ಜಾರಿಗೆ ತಂದು ನಮ್ಮನ್ನುನಿಯೋಜಿಸಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ರಾಜ್ಯ ಸಂಘದ ಕರೆ ಮೇರೆಗೆ ತಾಲೂಕು ಸಂಘವು ಸರಕಾರಕೂಡಲೇ ಈ ಯೋಜನೆಯಿಂದ ನಮ್ಮನ್ನು ಕೈಬಿಡಬೇಕೆಂದು ಒತ್ತಾಯಿಸುತ್ತದೆ ಎಂದರು.
ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಇಲಾಖೆಯಲ್ಲಿಸೇವಾ ಭದ್ರತೆ ಇಲ್ಲ. ಸರಕಾರದಯೋಜನೆಗಳಾದ ದರಕಾಸ ಪೋಡಿ, ಕೆರೆ ಅಳತೆ, ಪೋಡಿ ಮುಕ್ತ ಅಭಿಯಾನಯೋಜನೆ ಸೇರಿದಂತೆ ಭೂ ಮಾಪನಕೆಲಸ ಕಾರ್ಯಗಳಿಗೆ ನಮ್ಮಿಂದ ಕೆಲಸ ತೆಗೆದುಕೊಂಡು ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ.
ನಮ್ಮ ಸೇವೆಯನ್ನು ಈ ಕೂಡಲೇ ಕಾಯಂಗೊಳಿಸಬೇಕೆಂದು ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ಸರಕಾರಕ್ಕೆಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಎಂ. ತಿಪ್ಪಾನಾಯ್ಕ,ಪದಾಧಿಕಾರಿಗಳಾದ ಗೋಪಿನಾಥ, ಚಂದ್ರುಶೇಖರ, ಸಂತೋಷ,ಡಾಕ್ಯಾನಾಯ್ಕ, ಶಿವಕುಮಾರನಾಯ್ಕ, ಜಗದೀಶ ಎನ್, ಸೊಮಶೇಖರ, ಜ್ಯೋತಿನಾಯ್ಕ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.