ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆಗೆ ಒತ್ತಾಯ

Team Udayavani, Jun 25, 2020, 9:18 AM IST

ಖಾಸಗಿ ಆಸ್ಪತ್ರೆಗಳಲ್ಲೂ ಉಚಿತ ಚಿಕಿತ್ಸೆಗೆ ಒತ್ತಾಯ

ಹೊಸಪೇಟೆ: ಕೋವಿಡ್‌-19ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ದರ ನಿಗದಿಪಡಿಸಿರುವುದನ್ನು ಹಿಂಪಡೆಯುವ ಮೂಲಕ ಕಡ್ಡಾಯ ಉಚಿತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿ, ಡಿವೈಎಫ್‌ಐ ತಾಲೂಕು ಸಮಿತಿ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸರಕಾರಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಸರ್ಕಾರಿ ಆಸ್ಪತ್ರೆಗಳು ಅಗತ್ಯ ಡಾಕ್ಟರ್‌-ಸಿಬ್ಬಂದಿ ಕೊರತೆ, ಔಷಧ ಸೇರಿದಂತೆ ಮೂಲ ಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಇದರಿಂದಾಗಿ ಸಾಮಾನ್ಯ ಜನತೆಗೆ ಉತ್ತಮ ಆರೋಗ್ಯ ಲಭಿಸದೆ ಖಾಸಗಿ ಆಸ್ಪತ್ರೆಗಳ ಧನದಾಹಿಕೊರೆತಕ್ಕೆ ಬಲಿಯಾಗುತ್ತಿದ್ದಾರೆ. ಈ ಸ್ಥಿತಿಯಲ್ಲಿ ಕೋವಿಡ್‌ -19 ರೋಗ ಜನ ಸಾಮಾನ್ಯನ ಪಾಲಿಗೆ ಕಂಟಕ ಪ್ರಾಯವಾಗಿದೆ.

ಇಂತಹ ಗಂಭೀರ ಸ್ಥಿತಿಯಲ್ಲಿ ಕೋವಿಡ್‌-19 ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಲು ಸಾರ್ವಜನಿಕ ಆಸ್ಪತ್ರೆಗಳನ್ನು ಡಾಕ್ಟರ್‌, ಸಿಬ್ಬಂದಿ, ಔಷಧ ಇತರೆ ಸಕಲ ರೀತಿಯಲ್ಲಿಯೂ ಸಜ್ಜುಗೊಳಿಸಬೇಕು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಆದರೆ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ವಾರ್ಡ್‌ನಲ್ಲಿ 10 ಸಾವಿರ, ಆಮ್ಲಜನಕ ಸಹಿತ ವಾರ್ಡ್‌ನಲ್ಲಿ 12 ಸಾವಿರ ಐಸಿಯು ಹಾಸಿಗೆ 15 ಸಾವಿರ ವೆಂಟಿಲೇಟರ್‌ ಸಹಿತ ಐಸಿಯುಗೆ 25 ಸಾವಿರ ದರ ನಿಗದಿಗೊಳಿಸಿದೆ. ಈ ದರಗಳು ಬಡಜನರಿಗೆ ಹೊರೆಯಾಗಲಿದೆ ಎಂದು ಅಳಲು ತೋಡಿಕೊಂಡರು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್‌ ಕುಟುಂಬದ ರೋಗಿಗಳಿಗೆ ಸಾಮಾನ್ಯ ವಾರ್ಡ್ ಗೆ 5200 ರೂ ಆಮ್ಲಜನಕ ಸಹಿತ ವಾರ್ಡ್ ಗೆ 7000 ರೂ. ತೀವ್ರ ನಿಗಾ ಘಟಕಕ್ಕೆ 8500 ಹಾಗೂ ವೆಂಟಿಲೇಟರ್‌ ಸಹಿತ ಐಸಿಯುಗೆ 10000 ರೂ ನಿಗದಿಗೊಳಿಸಿದೆ. ಆದರೆ ಗ್ರಾಮೀಣ ನಗರ ಪ್ರದೇಶದ ಬಹುತೇಕ ಜನರಿಗೆ ಆಯುಷ್ಮಾನ್‌ ಭಾರತ ಆರೋಗ್ಯ ಕರ್ನಾಟಕ ಯೋಜನೆಯಿಂದ ದೂರ ಉಳಿದಿದ್ದಾರೆ. ಈಗಾಗಲೇ ಲಾಕ್‌ಡೌನ್‌ ಸಂಕಷ್ಠrದಲ್ಲಿರುವ ಬಡ-ಮಧ್ಯಮ, ವರ್ಗದ ಕುಟುಂಬಗಳಿಗೆ ದುಬಾರಿ ಚಿಕಿತ್ಸೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಇದನ್ನು ರದ್ದುಗೊಳಿಸಿ ಕೋವಿಡ್ ಸೋಂಕಿತರೆಲ್ಲರಿಗೂ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳನ್ನು ಸರಕಾರದ ವಶಕ್ಕೆ ಪಡೆದು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಡಿವೈಎಫ್‌ಐ ಮುಖಂಡರು ತಿಳಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷ ಬಿಸಾಟಿ ಮಹೇಶ್‌, ಜಿಲ್ಲಾಧ್ಯಕ್ಷ ವಿ. ಸ್ವಾಮಿ, ತಾಲೂಕು ಅಧ್ಯಕ್ಷ ಕಿನ್ನಾಳ್‌ ಹನುಮಂತ, ಮುಖಂಡರಾದ ಕೆ.ಎಂ. ಸಂತೋಷ, ಕಲ್ಯಾಣಯ್ಯ, ಈ. ಮಂಜುನಾಥ, ಬಂಡೆ ತಿರುಕಪ್ಪ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.