ಮೀಸಲಾತಿ; ಮೇ 20ರಂದು ರಾಜ್ಯಾದ್ಯಂತ ಹೋರಾಟ

ಮೀಸಲಾತಿ ಹೆಚ್ಚಳದ ಹೋರಾಟಕ್ಕೆ ಸಮುದಾಯದವರಲ್ಲಿ ಜಾಗೃತಿ: ನರಸಿಂಹ ನಾಯಕ

Team Udayavani, May 2, 2022, 4:19 PM IST

protest

ಬಳ್ಳಾರಿ: ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಶಿಫಾರಸ್ಸು ಮಾಡಿರುವ ನ್ಯಾ. ನಾಗಮೋಹನ್‌ದಾಸ್‌ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ವಾಲ್ಮೀಕಿ ಸ್ವಾಮೀಜಿ ಈಗಾಗಲೇ ಅಹೋರಾತ್ರಿ ಧರಣಿ ನಡೆಸುತ್ತಿದ್ದು ರಾಜ್ಯ ಸರ್ಕಾರ 15 ದಿನಗಳಲ್ಲಿ ನಿರ್ಣಯ ಕೈಗೊಳ್ಳದಿದ್ದಲ್ಲಿ ಮೇ 20 ರಂದು ರಾಜ್ಯಾದ್ಯಂತ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸ್ವಾಭಿಮಾನಿ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಮುಖಂಡ ನರಸಿಂಹ ನಾಯಕ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ, ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ನೀಡುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹಿಂದಿನ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್‌.ಡಿ. ಕುಮಾರಸ್ವಾಮಿಯವರು, ಜಸ್ಟೀಸ್‌ ನಾಗಮೋಹನ್‌ ದಾಸ್‌ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದರು. ರಾಜ್ಯಾದ್ಯಂತ ಸಂಚರಿಸಿ ಸಮೀಕ್ಷೆ ನಡೆಸಿದ ನಾಗಮೋಹನ್‌ ದಾಸ್‌ ಅವರು, ವಿಸ್ತೃತ ವರದಿ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಎಸ್‌ಸಿಗೆ ಶೇ.15 ರಿಂದ ಶೇ.17ಕ್ಕೆ, ಎಸ್‌ಟಿಗೆ ಶೇ.3 ರಿಂದ ಶೇ.7.5ಕ್ಕೆ ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರು, ನಾಗಮೋಹನ್‌ ದಾಸ್‌ ವರದಿಯನ್ನು ಹೆಚ್ಚಿಸುವಂತೆ ಕಳೆದ ಮೂರು ತಿಂಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಕಳೆದ ಮಾ. 30ರಂದು ಸರ್ಕಾರದ ಪ್ರತಿನಿಧಿ ಗಳಾಗಿ ಸಚಿವರಾದ ಗೋವಿಂದ ಕಾರಜೋಳ, ಶಂಕರ್‌ ಪಾಟೀಲ್‌ ಮುನೇನಕೊಪ್ಪ, ಹಾಲಪ್ಪ ಬಿ ಆಚಾರ್‌, ಶಾಸಕರಾದ ರಾಜೂಗೌಡ, ಸೋಮಲಿಂಗಪ್ಪ, ಎಸ್‌.ವಿ.ರಾಮಚಂದ್ರಪ್ಪ, ಎನ್‌.ವೈ. ಗೋಪಾಲಕೃಷ್ಣ ಅವರ ನಿಯೋಗ ತೆರಳಿ ಸ್ವಾಮೀಜಿಗಳೊಂದಿಗೆ ಚರ್ಚಿಸಿದರು.

ಈ ವೇಳೆ ಸಚಿವರೆಲ್ಲರೂ 15 ದಿನ ಕಾಲಾವಕಾಶ ಕೊಡಿ ಅಷ್ಟರಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ 15 ದಿನಗಳ ಗಡುವು ಮುಗಿದಿದೆ. ಈ ಬಗ್ಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ಈ ನಡೆಯನ್ನು ಸಮುದಾಯ ಸೂಕ್ಷ್ಮವಾಗಿ ಗಮನಿಸಿ ಮುಂದಿನ ನಡೆ ಹಾಗೂ ಹೋರಾಟದ ರೂಪುರೇಷೆ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ ಎಂದು ವಿವರಿಸಿದರು.

ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ರೂಪುರೇಷೆಗಳ ಸಿದ್ಧಪಡಿಸಲಾಗುತ್ತಿದೆ. ಸಮುದಾಯಗಳ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯದ ನಾಲ್ಕು ಭಾಗಗಳಿಂದ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಲ್ಲಿ ಆರಂಭಿಸಿ, ಕಲಬುರಗಿ ಮೂಲಕ ಇದೀಗ ಬಳ್ಳಾರಿಯಲ್ಲಿ ಮುಕ್ತಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮೇ 20ರಂದು ಬೆಂಗಳೂರಿನಲ್ಲಿ ಶ್ರೀಗಳ ಹೋರಾಟ ನೂರು ದಿನಗಳು ಪೂರೈಸಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ, ರೈಲು ತಡೆ ಸೇರಿದಂತೆ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಅದಕ್ಕೂ ಸರ್ಕಾರದಿಂದ ಸ್ಪಂದನೆ ಲಭಿಸದಿದ್ದಲ್ಲಿ ರಾಜಧಾನಿಯನ್ನು ನಾಲ್ಕು ದಿಕ್ಕುಗಳಲ್ಲಿ ದಿಗ್ಬಂಧನ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರುಗಳಾದ ಶಾನವಾಸಪುರದ ದೊಡ್ಡ ಎರ್ರಿಸ್ವಾಮಿ, ಎ.ಮಾನಯ್ಯ, ರಾಮುನಾಯ್ಕ, ಸಿಂಗಪುರ ವೆಂಕಟೇಶ್‌, ಶ್ರೀನಿವಾಸ್‌, ನಾಗರಾಜ್‌ ಗಾಣದ ಉಣಸಿ, ಶಿವಾನಂದ್‌, ಜನಾರ್ಧನ ನಾಯಕ, ಚಲವಾದಿ ಮಹಾಸಭಾದ ನರಸಪ್ಪ ಇದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.