ವಸತಿ ನಿಲಯ ಕಟ್ಟಡ ಕಾಮಗಾರಿ ಶೀಘ್ರ ಆರಂಭ
Team Udayavani, Aug 30, 2017, 4:10 PM IST
ಹಗರಿಬೊಮ್ಮನಹಳ್ಳಿ: ನಿವೇಶನದ ಸಮಸ್ಯೆಯಿಂದ ತಾಲೂಕಿನ ತೆಲುಗೋಳಿ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಟ್ಟಡ ನಿರ್ಮಾಣ ನೆನಗುದಿಗೆ ಬಿದ್ದಿತ್ತು. ಆದರೆ, ಗ್ರಾಮದ ದಾನಿ ಬಳಿಗೇರ್ ವಿರೂಪಾಕ್ಷಪ್ಪ 1 ಎಕ್ಕರೆ ಜಮೀನು ದಾನವಾಗಿ ನೀಡುವ ಮೂಲಕ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ನೆರವಾಗಿದ್ದಾರೆ.
ತಾಪಂ ಸದಸ್ಯ ಪಾಂಡುನಾಯ್ಕ ಮಾತನಾಡಿ, ವಸತಿ ನಿಲಯ ನಿರ್ಮಾಣಕ್ಕೆ ಗ್ರಾಮದ ಪ್ರೌಢಶಾಲೆ ಬಳಿಯ 1 ಎಕರೆ ವಿಸ್ತೀರ್ಣದ ಪ್ರದೇಶವನ್ನು ಗ್ರಾಮದ ಬಳಿಗೇರ್ ವಿರೂಪಾಕ್ಷಪ್ಪ ಇವರು ದಾನವಾಗಿ ನೀಡಿದ್ದಾರೆ. ಅಲ್ಲದೆ ಈಗಾಗಲೇ ನಿವೇಶನವನ್ನು ಕಟ್ಟಡ ನಿರ್ಮಾಣದ ಉದ್ದೇಶಕ್ಕೆ ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಹಸ್ತಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಗ್ರಾಮದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತೆಲುಗೋಳಿ ಗ್ರಾಮಸ್ಥರು ಕೂಡಲೇ ವಸತಿ ನಿಲಯ ಕಟ್ಟಡ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಶಾಸಕ ಭೀಮಾನಾಯ್ಕ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ದಾನಿ ವಿರೂಪಾಕ್ಷಪ್ಪ ಅವರಿಗೆ ಶಾಸಕ ಭೀಮಾನಾಯ್ಕ ಸನ್ಮಾನಿಸಿದರು. ಈ ಸಂದ ರ್ಭದಲ್ಲಿ ಮಾತನಾಡಿದ ಶಾಸಕರು, ಶೀಘ್ರದಲ್ಲೆ 2.53 ಕೋಟಿ ರೂ.ವೆಚ್ಚದಲ್ಲಿ ವಸತಿ ನಿಲಯ ಕಟ್ಟಡಕ್ಕೆ ಚಾಲನೆ ನೀಡಲಾಗುವುದು. ವಿರೂಪಾಕ್ಷಪ್ಪ ಕಟ್ಟಡ ನಿರ್ಮಾಣಕ್ಕೆ ನಿವೇಶನ ದಾನ ಮಾಡಿರುವುದು ಸ್ವಾಗತಾರ್ಹ ಎಂದರು.
ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ದಳಪತಿ ಕೊಟ್ರಯ್ಯ, ಕೆ.ಪಾಂಡುರಂಗ, ಗ್ರಾಪಂ ಸದಸ್ಯರಾದ ರೇಖಾ ರಮೇಶ್, ಕೆ.ಜಂಬಣ್ಣ, ರೇಣುಕಾ ಯಂಕರೆಡ್ಡಿ, ಜೆ.ರವಿಯಪ್ಪ, ಅಂಬಿಗರ ನಿಂಗಪ್ಪ, ಮಲ್ಲಿಕಾರ್ಜುನಗೌಡ, ರಾಜಶೇಖರರೆಡ್ಡಿ, ಮ್ಯಗೇರಿ ಬಸವರಾಜ, ಕರ್ಕಿಹಳ್ಳಿ ಪಾಂಡಪ್ಪ, ದಾಸರ ಗಿರೀಶ್, ನಿಂಗಪ್ಪ, ಬೀಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.