ಸಿಡಿಬಂಡಿ ಉತ್ಸವಕ್ಕೆ ನಿರ್ಬಂಧ: ಎಸಿ
Team Udayavani, Mar 16, 2021, 8:12 PM IST
ಬಳ್ಳಾರಿ: ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 2ನೇ ಅಲೆಯ ಮಹಾಮಾರಿ ಹರಡದಂತೆ ತಡೆಗಟ್ಟುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮಾ. 23ರಿಂದ 30ರ ವರೆಗೆ ನಡೆಯುವ ಬಳ್ಳಾರಿಯ ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿ ಸಲಾಗಿದ್ದು, ದೇವಸ್ಥಾನದ ಆಡಳಿತದ ಮಂಡಳಿಯವರು ದೇವಸ್ಥಾನಗಳಲ್ಲಿ ದಿನನಿತ್ಯದ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಲು ಅನುಮತಿಸಲಾಗಿದೆ ಎಂದು ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ತಿಳಿಸಿದರು.
ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಆವರಣದ ಯಾತ್ರಿ ನಿವಾಸದಲ್ಲಿ ಸೋಮವಾರ ನಡೆದ ಸಿಡಿಬಂಡಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
500 ಜನಕ್ಕೆ ಪ್ರವೇಶ: ಈ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳ ದೇವರ ದರ್ಶನಕ್ಕೆ ಯಾವುದೇ ಸಮಸ್ಯೆ ಇಲ್ಲ. ದೈನಂದಿನ ಪೂಜಾ ವಿಧಿ -ವಿಧಾನಗಳು ನಿರ್ವಿಘ್ನವಾಗಿ ನೆರವೇರಲಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅದೇಶದಂತೆ ಯಾವುದೇ ಜಾತ್ರಾ ಸಮಾರಂಭದಲ್ಲಿ 500 ಜನಕ್ಕಿಂತ ಜಾಸ್ತಿ ಜನರ ಪ್ರವೇಶ ನಿಷೇಧಿ ಸಲಾಗಿದೆ ಎಂದ ಅವರು ಸಿಡಿಬಂಡಿ ರಥೋತ್ಸವಕ್ಕೆ ಜಿಲ್ಲಾದಂಡಾಧಿಕಾರಿ ಅನುಮತಿ ನೀಡಿದಲ್ಲಿ ಕೋವಿಡ್ ಮಾರ್ಗಸೂಚಿ ಅನುಸಾರ ಹಾಗೂ ಸಮಯ ಬದಲಾವಣೆ ಮಾಡಿಕೊಂಡು ಅತ್ಯಂತ ಸರಳವಾಗಿ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಿ ಸಿಡಿಬಂಡಿ ರಥೋತ್ಸವ ಮಾಡಲಾಗುವುದು.
ಸಂಪ್ರದಾಯದ ಪ್ರಕಾರ ವಿಧಿವಿಧಾನಗಳನ್ನು ಮಾಡಲು ಅವಕಾಶವಿದೆ. ಪೂಜೆ ಸಮಯದಲ್ಲಿ ಭಕ್ತರ ಪ್ರವೇಶಕ್ಕೆ ಯಾವುದೇ ನಿರ್ಬಂಧವಿ ಧಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಜಾತ್ರಾ ಮಹೋತ್ಸ ನಡೆಯುವ ಮಾ. 23ರ ಮೂರು ದಿನಗಳ ಮುಂಚೆ ಹಾಗೂ ಜಾತ್ರೆಯ ಮೂರು ದಿನಗಳವರೆಗೆ ನಿರಂತರವಾಗಿ ದೇವಸ್ಥಾನದ ಆವರಣದಲ್ಲಿ ಸ್ಯಾನಿಟೈಸ್ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿ ಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ ಸಿಬ್ಬಂದಿ ದೇವಸ್ಥಾನದ ಆವರಣವನ್ನು ಸ್ವತ್ಛಗೊಳಿಸುವುದರ ಜತೆಗೆ ಅಗತ್ಯ ಕುಡಿಯುವ ನೀರಿನ ಸೌಕರ್ಯ ಮತ್ತು ದೀಪದ ವ್ಯವಸ್ಥೆ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ನಿಯಮಾನುಸಾರ ಮಾಡುವಂತೆ ಅವರು ಸೂಚಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಭಕ್ತಾದಿಗಳಾದ ಬಿ.ಎಂ.ಪಾಟೀಲ್, ಮುಂಡರಗಿ ನಾಗರಾಜ, ವಿಜಯಕುಮಾರ್, ಗೋವಿಂದರಾಜಲು, ಕೃಷ್ಣಯ್ಯ, ಪ್ರಕಾಶಬಾಬು, ದೇವಿಪ್ರಸಾದ್, ಪ್ರೊಬೆಷನರಿ ಐಎಎಸ್ ಅ ಧಿಕಾರಿ ರಾಹುಲ್ ಸಂಕನೂರು, ಡಿವೈಎಸ್ಪಿ ರಮೇಶಕುಮಾರ್, ಪ್ರಧಾನ ಅರ್ಚಕ ಪಿ. ಗಾದೆಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅ ಧಿಕಾರಿ ಹನುಮಂತಪ್ಪ, ಅರ್ಚಕ ಬಿ.ಎಂ. ರಾಜಶೇಖರ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.