ಅಪಘಾತ: ಮೂವರ ದುರ್ಮರಣ
Team Udayavani, Nov 15, 2018, 7:00 AM IST
ಕೂಡ್ಲಿಗಿ: ಟ್ರ್ಯಾಕ್ಸ್ ಹಾಗೂ ಲಾರಿ ಮಧ್ಯೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡ ಘಟನೆ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬುಧವಾರ ಮುಂಜಾನೆ ನಡೆದಿದೆ.
ವಿಜಯಪುರ ಜಿಲ್ಲೆ ಚಿಕ್ಕ ಅಸಂಗಿ ಗ್ರಾಮದ ಬೀಬಿನ್ (43), ಶಬನಾ (22), ರಬೀನಾ ( 41) ಮೃತರು. ಮಹಮದ್ ನಂದ್ಯಾಲ, ಅಫಾ ನಂದ್ಯಾಲ್, ಗಪೂರ್ ನಂದ್ಯಾಲ್, ನಾಸೀರ್ ನಂದ್ಯಾಲ್, ರಾಜು ಮಹಮದ್, ಕರೀಷ್ಮಾ ಹಾದಿಮನಿ, ಮಸ್ತಾನ್, ಸೀನಾ ರಾಬೀ ಹಾಗೂ ಚಾಲಕ ಮಸ್ತಾನ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್‌ಗೆ ದಾಖಲಿಸಲಾಗಿದೆ.
15 ಮಂದಿ ಸಂಬಂಧಿಗಳು ಟ್ರ್ಯಾಕ್ಸ್‌ನಲ್ಲಿ ಮೈಸೂರು ಪ್ರವಾಸಕ್ಕೆ ತೆರಳಿದ್ದವರು. ಪ್ರವಾಸ ಬಳಿಕ ಟ್ರ್ಯಾಕ್ಸ್ ಕೂಡ್ಲಿಗಿಯಿಂದ ಹೊಸಪೇಟೆ ಮಾರ್ಗವಾಗಿ ವಿಜಾಪುರಕ್ಕೆ ಹೊರಟಿತ್ತು. ಲಾರಿ ಗಂಗಾವತಿಯಿಂದ ಚಿತ್ರದುರ್ಗದತ್ತ ಹೊರಟಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಸ್‌ನ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಂಭಾಗದ ಎರಡು ಟೈರ್ ಕಳಚಿ ಬಿದ್ದಿವೆ. ಟ್ರ್ಯಾಕ್ಸ್ ಚಾಲಕ ಮುಸ್ತಾನ್ ಅಪಘಾತದಲ್ಲಿ ಬದುಕುಳಿದಿದ್ದು, ಗಂಭೀರ ಗಾಯಗಳಾಗಿವೆ. ಆದರೆ, ಈತನ ಪತ್ನಿ ಬೀಬಿನ್ ಹಾಗೂ ಮಗಳು ಶಬಾನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.