ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಶಿಥಿಲ-ಆತಂಕ
Team Udayavani, Nov 30, 2021, 3:23 PM IST
ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಛಾವಣಿ ಅಲ್ಲಲ್ಲಿ ಕುಸಿದು ಬಿದ್ದಿದ್ದು, ಇನ್ನು ಅಲ್ಲಲ್ಲಿ ಇನ್ನೂ ಬೀಳುತ್ತಲೇ ಇದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳನ್ನು ಹೊರಗಡೆ ಕೂಡಿಸಲು ಸಾಧ್ಯವಾಗದೆ ಒಳಗಡೆ ಬೀಳುತ್ತಿರುವ ಕಟ್ಟಡದಲ್ಲಿಯೇ ಮಕ್ಕಳನ್ನು ಕೂಡಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.
ಸುಮಾರು 14ವರ್ಷಗಳ ಹಿಂದೆ ಈ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕಟ್ಟಲಾಗಿದ್ದು, ಕಟ್ಟಡದ ಮೇಲ್ಛಾವಣಿ ಮೇಲೆ ಬೀಳುವ ಮಳೆನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲದ ಕಾರಣ ಸಣ್ಣ ಮಳೆ ಬಂದರೆ ಸಾಕು ಅಂಗನವಾಡಿ ಕೇಂದ್ರದಲ್ಲಿ ನೀರು ತೊಟ್ಟಿಕ್ಕುತ್ತದೆ. ಕೆಲ ವರ್ಷಗಳಿಂದ ನೀರು ತೊಟ್ಟಿಕ್ಕುತ್ತಿರುವುದರಿಂದ ಮೇಲ್ಛಾವಣಿಗೆ ಅಳವಡಿಸಿದ ಸಿಮೆಂಟ್ ಉದುರಿ ಬೀಳುತ್ತಿದ್ದು, ಕಬ್ಬಿಣದ ರಾಡುಗಳು ಕಂಡು ಬರುತ್ತಿವೆ. ಮಳೆನೀರಿನಿಂದಾಗಿ ಕಬ್ಬಿಣದ ರಾಡುಗಳು ಸಹ ತುಕ್ಕು ಹಿಡಿದಿದ್ದು, ಮಳೆಬಂದರೆ ಸಾಕು ಯಾವಾಗ ಬೀಳುತ್ತದೋ ಎನ್ನುವ ಭಯದಲ್ಲಿಯೇ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.
ಒಟ್ಟು 45 ಮಕ್ಕಳು ಈ ಅಂಗನವಾಡಿ ಕೇಂದ್ರಕ್ಕೆ ಬರಲು ನೋಂದಣಿ ಮಾಡಿಸಿದ್ದು 10ರಿಂದ 20 ಜನ ಮಕ್ಕಳು ಪ್ರತಿನಿತ್ಯವೂ ಇಲ್ಲಿಗೆ ಬರುತ್ತಿದ್ದಾರೆ. ಮಕ್ಕಳು ಕುಳಿತುಕೊಳ್ಳುವ ಸ್ಥಳದಲ್ಲಿಯೇ ಆಗಾಗ ಮೇಲ್ಛಾವಣಿಯ ಸಿಮೆಂಟ್ ಉದುರಿ ಬೀಳುವುದು ಸಾಮಾನ್ಯವಾಗಿರುತ್ತದೆ. ಆದರೆ ಇಲ್ಲಿಯವರೆಗೆ ಯಾವುದೇ ಮಕ್ಕಳ ಮೇಲೆ ಸಿಮೆಂಟ್ ಉದುರಿ ಬಿದ್ದಿಲ್ಲ, ಆದರೆ ಕೊರೊನಾ ಸಮಯದಲ್ಲಿ ಇದೇ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲ್ಛಾವಣಿ ಸಿಮೆಂಟ್ ಉದುರಿ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದವು. ಮೇಲ್ಛಾವಣಿ ಕುಸಿದು ಬೀಳುವ ಹಂತ ತಲುಪಿದ್ದರೂ ಮೇಲ್ಛಾವಣಿ ರಿಪೇರಿ ಮಾಡಿಸಲು ಮುಂದಾಗದ ಸ್ಥಳೀಯ ಗ್ರಾಪಂ ಆಡಳಿತ ಮಂಡಳಿಯವರು ಕಟ್ಟಡದ ಹೊರಭಾಗಕ್ಕೆ ಬಣ್ಣಬಳಿದು ವಿವಿಧ ಆಕರ್ಷಕ ಚಿತ್ರಗಳನ್ನು ಬರೆಸಿದ್ದು ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ.
ಕಟ್ಟಡದ ಮೇಲ್ಛಾವಣಿ ಕುಸಿದು ಬೀಳುತ್ತಿರುವ ಬಗ್ಗೆ ನಮ್ಮ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಕಟ್ಟಡ ರಿಪೇರಿ ಮಾಡಿಸಿದರೆ ಮಕ್ಕಳನ್ನು ಕೂಡಿಸಲು ಅನುಕೂಲವಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆ ದ್ಯಾವಮ್ಮ ತಿಳಿಸಿದ್ದಾರೆ.
ಅಂಗನವಾಡಿ ಕಟ್ಟಡದ ಮೇಲ್ಛಾವಣಿ ರಿಪೇರಿಗಾಗಿ ಯೋಜನೆ ಸಿದ್ಧಪಡಿಸಲಾಗಿದ್ದು ಶೀಘ್ರ ಕೆಲಸ ಆರಂಭಿಸಲಾಗುವುದು. -ವೀರೇಶ್, ಪಿಡಿಒ
ಶಾನವಾಸಪುರದ 2ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇದನ್ನು ರಿಪೇರಿ ಮಾಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. –ಜಲಾಲಪ್ಪ, ಸಿಡಿಪಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.