“ನಮ್ಮ ಶಾಲೆಗೆ ಶೇ.100 ಫಲಿತಾಂಶ’ ಯೋಜನೆಗೆ ಚಾಲನೆ
Team Udayavani, Aug 17, 2017, 2:05 PM IST
ಬಳ್ಳಾರಿ: ಕಳೆದ ಸಾಲಿಗಿಂತ ಈ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು “ನಮ್ಮ ಶಾಲೆ ಶೇ.100ರಷ್ಟು ಫಲಿತಾಂಶ’ ಎಂಬ ವಿಶೇಷ ಯೋಜನೆಯನ್ನು ಬೆಂಗಳೂರಿನ ಕ್ರಿಯೆಟೀವ್ ಕ್ಲಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕಷ್ಟದ ವಿಷಯ ಎಂದೇ ಭಾವಿಸಿರುವ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಪಠ್ಯಕ್ರಮಕ್ಕೆ ಸಂಬಂಧಿ ಸಿದಂತೆ ವಿದ್ಯಾರ್ಥಿಗಳಿಗೆ ಇರುವ ಅನುಮಾನ ಪರಿಹರಿಸಲು ಹಾಗೂ ಈ ಪಠ್ಯವನ್ನು ಮಕ್ಕಳಿಗೆ ಹೇಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂಬ ಅಂಶಗಳ ಕುರಿತು ಶಿಕ್ಷಕರಿಗೆ ಕ್ರಿಯೇಟಿವ್ ಕ್ಲಾಸೆಸ್ ಸಂಸ್ಥೆಯ ತಜ್ಞರು ತರಬೇತಿ ನೀಡಲಿದ್ದಾರೆ. ಸಂಸ್ಥೆಯು ಕಳೆದ ಏಳು ವರ್ಷಗಳಿಂದ ಫಲಿತಾಂಶ ಹೆಚ್ಚಳ ಕುರಿತ ತರಬೇತಿ ಸಂಬಂಧಿಸಿದಂತೆ ಸಂಶೋಧನೆ ನಡೆಸಿ, ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಉತ್ತಮ ಫಲಿತಾಂಶ ದೊರೆಯುವಂತೆ ಶಾಲೆಗಳನ್ನು ತರಬೇತುಗೊಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ಸಂಸ್ಥೆ ನೀಡಿದ ತರಬೇತಿ ಪಡೆದ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ.
ಕಳೆದ ವರ್ಷವೂ ಕೂಡ ಬಳ್ಳಾರಿ ಜಿಲ್ಲೆಯಲ್ಲಿ ಇದೇ ಸಂಸ್ಥೆ ತರಬೇತಿ ನೀಡಿದ್ದು, ರಾಜ್ಯ ಮಟ್ಟದಲ್ಲಿ ಕೊನೆಯ ಸ್ಥಾನ ಗಳಿಸಿದ್ದ ಜಿಲ್ಲೆ 17ನೇ ಸ್ಥಾನಕ್ಕೇರಿದೆ. ಜಿಲ್ಲೆಯ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವದಿಂದಾಗಿಯೇ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು. ಕಳೆದ ವರ್ಷದ ಪ್ರಯತ್ನವನ್ನು ಈ ಬಾರಿಯೂ ಮುಂದುವರಿಸಲಾಗುವುದು. ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೊತೆಗೆ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಹ ತರಬೇತಿ ನೀಡಲಾಗುತ್ತಿದೆ. ಈ ಯೋಜನೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ನೇರ ಎಸ್ಸೆಸ್ಸೆಲ್ಸಿ
ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಬದಲು 8ನೇ ತರಗತಿಯಿಂದಲೇ ಮಕ್ಕಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು. ಶೈಕ್ಷಣಿಕ ಪ್ರಗತಿಗೆ ಅಗತ್ಯ
ಸೌಲಭ್ಯ ಕಲ್ಪಿಸಿಕೊಡಬೇಕು ಎಂಬ ಉದ್ದೇಶದಿಂದ ಈ ಶೈಕ್ಷಣಿಕ ವರ್ಷದಿಂದ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದರು.
ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್ ಮನೋಹರ್ ಮಾತನಾಡಿ, ಕಳೆದ ವರ್ಷ ಅತ್ಯಂತ ಕಡಿಮೆ ವೆಚ್ಚದಲ್ಲಿ ಶಿಕ್ಷಕರು ಹಾಗೂ ಮಕ್ಕಳಿಗೆ ತರಬೇತಿ ನೀಡಲಾಗಿತ್ತು. ಬರೀ 4 ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಮತ್ತಿತರ ಫಲಿತಾಂಶ ಹೆಚ್ಚಿಸುವ ಪೂರಕ ಚಟುವಟಿಕೆಗಳು ನಡೆದವು. ಬೆಂಗಳೂರಿನ ಇಂಜಿನಿಯರ್ ಜೆ.ಜಿ.ಅನಂತ್ ಅವರು ಸ್ವಯಂ ಆಸಕ್ತಿಯಿಂದ ಇಂತಹದೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರಿಗೆ ಜಿಲ್ಲಾಡಳಿತ ಸಹಕಾರ ನೀಡುತ್ತಿದೆ ಎಂದರು.
ಕ್ರಿಯೆಟೀವ್ ಕ್ಲಾಸ್ ಸಂಸ್ಥೆ ಮುಖ್ಯಸ್ಥ ಜೆ.ಜಿ.ಅನಂತ್ ಮಾತನಾಡಿ, ಈ ಹಿಂದೆ ದಾವಣಗೆರೆ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೊಂದು ಶಾಲೆಗಳಲ್ಲಿ ಹೊಸ ಪದ್ಧತಿಯ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಇದರಿಂದ ಉತ್ತಮ ಫಲಿತಾಂಶ ಬಂತು. ಕಳೆದ ವರ್ಷ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಿದೆವು. ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ಸಹಕಾರದಿಂದಾಗಿಯೇ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆಯಿತು. ಈ ಬಾರಿ ಜಿಲ್ಲೆಯ ಎಲ್ಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಉದ್ದೇಶಿಸಿದ್ದೇವೆ. ಶಿಕ್ಷಕರು ಹಾಗೂ ಮಕ್ಕಳಿಗೆ ಸಹ ತರಬೇತಿ
ನೀಡಲಾಗುವುದು. ಬೋಧನಾ ಪದ್ಧತಿ ಹೇಳಿಕೊಡಲಾಗುವುದು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಡೆ ವಿಶೇಷವಾಗಿ ಗಮನ ಹರಿಸಲಾಗುವುದು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಠ್ಯದಲ್ಲಿ ಭಾಗವಹಿಸುವಿಕೆಯ ಸೂತ್ರಗಳನ್ನು ಹೇಳಿಕೊಡಲಾಗುವುದು ಎಂದು ತಿಳಿಸಿದರು.
ಡಿಡಿಪಿಐ ಶ್ರೀಧರನ್ ಮಾತನಾಡಿ, ಜಿಲ್ಲೆಯ 197 ಸರ್ಕಾರಿ ಶಾಲೆಗಳಲ್ಲಿ 8, 9 ಮತ್ತು 10 ನೇ ತರಗತಿಯಲ್ಲಿ ಒಟ್ಟು 54,729 ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಎಸ್ಪಿ ಆರ್.ಚೇತನ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಇರುವ ಅನುಮಾನ ಪರಿಹರಿಸಲು ಹಾಗೂ ಈ ಪಠ್ಯವನ್ನು ಮಕ್ಕಳಿಗೆ ಹೇಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂಬ ಅಂಶಗಳ ಕುರಿತು ಶಿಕ್ಷಕರಿಗೆ ಕ್ರಿಯೇಟಿವ್ ಕ್ಲಾಸೆಸ್ ಸಂಸ್ಥೆಯ ತಜ್ಞರು ತರಬೇತಿ ನೀಡಲಿದೆ.
ಸಂತೋಷ ಲಾಡ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.