ಮೂಲೆಹಿಡಿದ ಆಂಬ್ಯುಲೆನ್ಸ್‌: ರೋಗಿಗಳ ಪರದಾಟ

ಇದರಿಂದ ನಿತ್ಯ ನಮಗೂ ಮತ್ತು ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ವೈದ್ಯರು ಹೇಳುತ್ತಾರೆ.

Team Udayavani, Jun 13, 2022, 6:12 PM IST

ಮೂಲೆಹಿಡಿದ ಆಂಬ್ಯುಲೆನ್ಸ್‌: ರೋಗಿಗಳ ಪರದಾಟ

ಹರಪನಹಳ್ಳಿ: ಅನಾರೋಗ್ಯ, ಅಪಘಾತದಂತಹ ತುರ್ತು ಸಂದರ್ಭದಲ್ಲಿ ವರವಾಗಬೇಕಿದ್ದ 108 ಅಂಬ್ಯುಲೆನ್ಸ್‌ಗಳು ಮೂಲೆ ಹಿಡಿದಿದ್ದು ಇರುವ ಒಂದೆರಡು ಅಂಬ್ಯುಲೆನ್ಸ್‌ಗಳು ರೋಗಿಗಳಿಗೆ ಸರಿಯಾದ ಸಮಯಕ್ಕೆ ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು. ಇದು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳು ನಿತ್ಯ ಅನುಭವಿಸುತ್ತಿರುವ ಘಟನೆ. ಸುಮಾರು ನಾಲ್ಕೈದು ತಿಂಗಳುಗಳಿಂದ ನಡೆಯುತ್ತಾ ಇದೆ. ತುರ್ತು ಇರುವ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಜಿಲ್ಲಾ ಆಸ್ಪತ್ರೆಗಾಗಲಿ ಅಥವಾ ಬೇರೆ ಸ್ಥಳಗಳಿಗೆ ತೆರಳಲು ತಿಳಿಸಿದಾಗ ಇಂಥ ಸಂದರ್ಭದಲ್ಲಿ ರೋಗಿಗಳು 108 ಆಂಬ್ಯುಲೆನ್ಸ್‌ ಕರೆ ಮಾಡಿ ವಿಷಯ ತಿಳಿಸಿದರೂ ಸರಿಯಾದ ಸಮಯಕ್ಕೆ ಸಿಗದೇ ಗಂಟೆಗಟ್ಟಲೇ ಕಾಯಬೇಕಾದ ಅನಿವಾರ್ಯತೆ ಬಂದೊದಗಿದೆ.

ತಾಲೂಕಿನಲ್ಲಿ ಒಟ್ಟು 5 ಆಂಬ್ಯುಲೆನ್ಸ್‌ಗಳಿದ್ದು ಅದರಲ್ಲಿ ಒಂದು ಮಾತ್ರ ಚನ್ನಾಗಿದೆ. ಉಳಿದೆಲ್ಲವು ರಿಪೇರಿಯಲ್ಲಿವೆ. ಮೂರು ಆಂಬ್ಯುಲೆನ್ಸ್‌ಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಟ್ಟು ನಿಂತಿವೆ. ಈ ಸಂಬಂಧ ಇದನ್ನು ಗುತ್ತಿಗೆ ಪಡೆದಿರುವ ಜಿವಿಆರ್‌ಕೆ ಸಂಸ್ಥೆಯ ಏಜೆನ್ಸಿಯವರಿಗೆ ಈಗಾಗಲೇ ಗಮನಕ್ಕೆ ತಂದಿದ್ದೇವೆ. ರಿಪೇರಿ ಮಾಡಿಸಲು ಅವರು ಮಂದಾಗುತ್ತಿಲ್ಲ. ಅವರಿಗೆ ಎಷ್ಟು ಸರಿ ತಿಳಿಸಿದರೂ ಸಹ ಇವತ್ತು ನಾಳೆ ಎಂದು ಹಾರಿಕೆ ಉತ್ತರ ನೀಡುತ್ತಾರೆ.

ಇದರಿಂದ ನಿತ್ಯ ನಮಗೂ ಮತ್ತು ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ವೈದ್ಯರು ಹೇಳುತ್ತಾರೆ. ಪ್ರತಿನಿತ್ಯ ಒಂದಲೊಂದು ಅಪಘಾತ, ಪಾಯಿಜನ್‌, ಡಿಲೆವರಿ ಈಗೇ ತೀವ್ರತರದಂತಹ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ನಗರ ಪ್ರದೇಶಗಳಿಗೆ ತೆರಳಲು 108 ವಾಹನಕ್ಕಾಗಿ ಕಾಲ್‌ ಮಾಡಿದರೂ ಸಹ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್‌ ಬಾರದೇ ರೋಗಿಗಳು ಪರದಾಡಿದ ಘಟನೆ ಆಗಾಗ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜರುಗುತ್ತಿದ್ದು, ಅನಿವಾರ್ಯವಾಗಿ ಲಭ್ಯವಿರುವ ಬೇರೆ ಆಂಬ್ಯುಲೆನ್ಸ್‌ ನಲ್ಲಿ ರೋಗಿಗಳನ್ನು ಕರೆದುಕೊಂಡು ಹೊಗಲಾಗುತ್ತಿದೆ.

ಜೀವಕ್ಕೆ ಕುತ್ತು ಬಂದರೆ ಯಾರು ಹೊಣೆ? ಜನತೆಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಯನ್ನು ಒದಗಿಸಲು ಅನುಕೂಲ ಕಲ್ಪಿಸುವುದಕ್ಕಾಗಿಯೇ ಸರ್ಕಾರ 108 ಆಂಬ್ಯುಲೆನ್ಸ್‌ ನೀಡಿದೆ. ಆದರೆ ಇದು ಆಸ್ಪತ್ರೆಯಲ್ಲಿ ಸರಿಯಾಗಿ ಸಮರ್ಪಕವಾಗಿ ಲಭ್ಯವಿಲ್ಲದೇ ಇರುವುದರಿಂದ ಪದೇ ಪದೇ ರೋಗಿಗಳಿಗೆ ಸಮಸ್ಯೆ ಕಾಡುತ್ತಿದೆ. ಸದ್ಯ ಕೊವಿಡ್‌-19ನಿಂದ ತತ್ತರಿಸಿರುವಂಥ ಜನತೆ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವಂಥ ವಯೋವೃದ್ಧರಿಗೆ, ಮಹಿಳೆಯರಿಗೆ ಮತ್ತು ಮಕ್ಕಳ ಜೀವಕ್ಕೆ ಕುತ್ತು ಬಂದರೆ ಯಾರು ಹೊಣೆ ಎಂಬುದಕ್ಕೆ ಸಂಬಂಧಪಟ್ಟ ಅ ಧಿಕಾರಿಗಳೇ ಉತ್ತರಿಸಬೇಕಿದೆ.

ಕಳೆದ ನಾಲ್ಕೈದು ತಿಂಗಳಿನಿಂದ 108 ಆಂಬ್ಯುಲೆನ್ಸ್‌ ಸಮಸ್ಯೆ ಇರುವುದು ನಿಜ. ಈ ಸಂಬಂಧ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಗುತ್ತಿಗೆ ಪಡೆದ ಏಜೆನ್ಸಿಯವರ ಗಮನಕ್ಕೆ ತಂದಿದ್ದೇವೆ. ಏಜೆನ್ಸಿಯವರು ಇನ್ನು ಸ್ವಲ್ಪ ದಿನದಲ್ಲಿ ಸರಿಪಡಿಸುತ್ತೇವೆ ಎಂದು ಹೇಳುತ್ತಲೇ ಇದಾರೆ, ಬಂದು ರಿಪೇರಿ ಇರುವ ಆಂಬ್ಯುಲೆನ್ಸ್‌ನು° ಸರಿಪಡಿಸುತ್ತಿಲ್ಲ.
ಡಾ| ಹಾಲಸ್ವಾಮಿ,
ತಾಲೂಕು ಆರೋಗ್ಯಾಧಿಕಾರಿಗಳು

ಬಡವರ ತುರ್ತು ಆರೋಗ್ಯ ಸೇವೆಗಾಗಿ ಸರ್ಕಾರ ಇಂಥ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇದನ್ನು ಸರಿಯಾಗಿ ನಿರ್ವಹಣೆ ಮಾಡದ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಂಡು ಅದಷ್ಟು ಬೇಗ ಈ ಸಮಸ್ಯೆನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ಮಾಡಲಾಗುವುದು.
ಭರಮ್ಮಪ್ಪ ಶಾಂತಿನಗರ,
ದಲಿತ ಹಕ್ಕುಗಳ ಸಮಿತಿ ಜಿಲ್ಲಾ
ಸಂಚಾಲಕರು.

ಎಚ್‌. ದೇವೇಂದ್ರ ಮಜ್ಜಿಗೇರಿ
ಹರಪನಹಳ್ಳಿ

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.