29ರಂದು ಬೆಳೆವಿಮೆ ಕಟ್ಟಲು ರೈತರಿಗೆ ಕೊನೆ ದಿನ

ಕೃಷಿ ಇಲಾಖೆ ಸಹಾಯಕ ಅ ಧಿಕಾರಿ ಮಂಜುನಾಥ ಮಾಹಿತಿ

Team Udayavani, Feb 7, 2020, 2:58 PM IST

7-February-16

ಸಂಡೂರು: ಹಿಂಗಾರಿನಲ್ಲಿ 382 ಹೆಕ್ಟೇರ್‌ ಬಿತ್ತನೆಯಾಗಿದ್ದು, ಶೇಂಗಾ-ಕಡ್ಲೆಬೇಳೆ ಉತ್ತಮವಾಗಿವೆ. ಬೇಸಿಗೆ ಬೆಳೆಗೆ 4 ತಿಂಗಳು ವಿಮೆ ಕಟ್ಟಲು ಅವಧಿ ಇದ್ದು ಎಕರೆಗೆ 522 ರೂ. ಕಟ್ಟಿಸಿಕೊಳ್ಳಲಾಗುವುದು. ವಿಮೆ ಕಟ್ಟಲು ರೈತರಿಗೆ ಫೆ. 29 ಕೊನೆ ದಿನವಾಗಿರುತ್ತದೆ ಎಂದು ಕೃಷಿ ಇಲಾಖೆ ಸಹಾಯಕ ಅಧಿಕಾರಿ ಮಂಜುನಾಥ ಸಲಹೆ ನೀಡಿದರು.

ಅವರು ತಾಲೂಕು ಪಂಚಾಯಿತಿ ದಿ. ಎಂ.ವೈ. ಘೋರ್ಪಡೆಯವರ ಸಭಾಂಗಣದಲ್ಲಿ 20 ಅಂಶಗಳ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ತೋಟಗಾರಿಕೆ ಇಲಾಖೆ ಅಧಿಕಾರಿ ಪ್ರಸನ್ನಕುಮಾರ್‌ ಮಾತನಾಡಿ, 30 ಜನರನ್ನು ಈಗಾಗಲೇ ಧಾರವಾಡಕ್ಕೆ ಕೃಷಿ ತರಬೇತಿಗಾಗಿ ಕರೆದೊಯ್ಯಲಾಗಿದೆ. 4 ಕೃಷಿ ಹೊಂಡಗಳಲ್ಲಿ 3 ಪ್ರಗತಿಯಲ್ಲಿವೆ. ಬೀಜಗಳನ್ನು ಪರೀಕ್ಷಾಲಯಕ್ಕೆ ಕಳುಹಿಸಿ ಪರಿಶೀಲಿಸಲಾಗುತ್ತಿದೆ. ತಾಲೂಕಿನಾದ್ಯಂತ ತೋಟಗಾರಿಕೆ ಬೆಳೆಗಳಾದ ಪಪ್ಪಾಯಿ, ದಾಳಿಂಬೆ ಬೆಳೆಗಳು ಪ್ರಗತಿಯಲ್ಲಿವೆ ಎಂದರು.

ಪಶುಸಂಗೋಪನಾ ಇಲಾಖೆಯ ರಂಗಪ್ಪನ ಮಾತನಾಡಿ, ಕಾಲುಬಾಯಿ ಲಸಿಕೆ ಕಾರ್ಯಕ್ರಮ ಪ್ರಗತಿಯಲ್ಲಿದೆ. ಸರ್ಕಾರದ ಯೋಜನೆಗಳ ಬಳಕೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು. ಆರೋಗ್ಯ ಇಲಾಖೆ ಅಧಿಕಾರಿ ವಿಜಯ ಭಾಸ್ಕರ್‌ ಹಾಗೂ ಡಾ| ಗೋಪಾಲ್‌ರಾವ್‌ ಆರೋಗ್ಯ ಕಾರ್ಡ್‌ ವಿತರಿಸಲು ಪ್ರತಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ್ದೇವೆ. ಸೊಳ್ಳೆಗಳಿಂದ ಬರುವಂಥ ರೋಗಗಳ ಪ್ರಮಾಣ ಹೆಚ್ಚುತ್ತಿದ್ದು ಪಂಚಾಯಿತಿಯವರು ಫಾಗಿಂಗ್‌ ಮಾಡಬೇಕು. ಅಲ್ಲದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಐ.ಆರ್‌. ಅಕ್ಕಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿಮಂಡಳಿಗೆ ಪ್ರಗತಿ ವರದಿಯನ್ನು ಕಳುಹಿಸಿದ್ದೇವೆ. ಎಸ್‌ ಎಸ್‌ಎಲ್‌ಸಿ ಪರೀಕ್ಷೆ ಸರಳಗೊಳಿಸಲು ಸರಣಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪಾಲಕರ ಸಭೆ ಕರೆದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.

ಐಎಎಸ್‌ ಅಧಿಕಾರಿ, ತಾಪಂ ಕಾರ್ಯಾನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದು ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಮೀಟರ್‌ ಹಾಕಿ ಆರ್‌.ಆರ್‌.ನಂಬರ್‌ ಕೊಡಿ ಎಂದು ತಿಳಿಸಿದರು. ಅಕ್ಷರ ದಾಸೋಹದ ಅಧಿಕಾರಿ ಮಾತನಾಡಿ, 12,788 ಮಕ್ಕಳು ಇಸ್ಕಾನ್‌ ಊಟವನ್ನು, 18,444 ಮಕ್ಕಳು ಅಕ್ಷಯ ಯೋಜನೆಯಲ್ಲಿ ಬಿಸಿಯೂಟ ನೀಡಲಾಗುತ್ತಿದ್ದು, ಈಶಾನ್ಯ ಯೋಜನೆ ಅಡಿಯಲ್ಲಿ ಎರಡು ಪೈಲಟ್‌ ಗಳಿಗೆ ಆಯ್ಕೆಯಾಗಿದ್ದು, ಅದು ಸಂಡೂರು ಮತ್ತು ಯಾದಗಿರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ, ಕುಡಿಯುವ ನೀರಿನ ಇಲಾಖೆ ಅಧಿಕಾರಿ, ಸಣ್ಣ ನೀರಾವರಿ, ಆಹಾರ ಇಲಾಖೆ ಅಧಿಕಾರಿ, ಸಾಮಾಜಿಕ ಅರಣ್ಯ, ಉತ್ತರವಲಯ ಹಿಂದುಳಿದ ವರ್ಗ, ನಿರ್ಮಿತಿ ಕೇಂದ್ರ, ಪಿಡಬ್ಲೂಡಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾತನಾಡಿದರು.

ಸಿಡಿಪಿಓ ಪ್ರೇಮಮೂರ್ತಿಯವರು ಮಾತನಾಡಿ, ಸಂಡೂರು ತಾಲೂಕಿನಲ್ಲಿ 241 ಅಂಗನವಾಡಿ ಕೇಂದ್ರಗಳಿವೆ. ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಶೇ. 77% ಬಿಸಿಯೂಟ ನೀಡುತ್ತಿದ್ದೇವೆ. ಬಂದ ಅನುದಾನದಲ್ಲಿ ಶೇ. 66ರಷ್ಟು ಖರ್ಚು ಮಾಡಿದ್ದೇವೆ. ಅಂಗನವಾಡಿ ಕಟ್ಟಡದ ದುರಸ್ತಿಗೆ 15 ಲಕ್ಷ ರೂ. ಬಿಡುಗಡೆಯಾಗಿದೆ. 132 ಮಕ್ಕಳನ್ನು ಆರೋಗ್ಯ ತಪಾಸಣಾ ಮಾಡಿಸಲಾಗಿದೆ. ಸುಲ್ತಾನಪುರದಲ್ಲಿ ಜಿಂದಾಲ್‌ ಸಹಯೋಗದಲ್ಲಿ ಅಂಗನವಾಡಿ ಕೇಂದ್ರ ಕಟ್ಟಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಪ್ರಗತಿಯನ್ನು ಚರ್ಚಿಸಲಾಯಿತು. ತಾಪಂ ಅಧ್ಯಕ್ಷೆ ಫರ್ಜಾನ ಗೌಸ್‌ಅಜಂ ಡಿ., ಉಪಾಧ್ಯಕ್ಷೆ ತಿರುಕವ್ವ ವೆಂಕಟೇಶ್‌ ಹಾಗೂ ವಿವಿಧ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.