Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Team Udayavani, Nov 23, 2024, 1:22 PM IST
ಬಳ್ಳಾರಿ: ಗಣಿನಾಡು ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನಪೂರ್ಣ ಅವರು ಭರ್ಜರಿ ಜಯಗಳಿಸುವ ಮೂಲಕ ಸಂಡೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತಾಗಿದೆ.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ (ನ.23) ಮತ ಎಣಿಕೆ ನಡೆಯಿತು. ಮೊದಲ ಅಂಚೆ ಮತಗಳ ಎಣಿಕೆಯಲ್ಲಿ ಮೂರು ಮತಗಳ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು, ನಂತರ ಮತಯಂತ್ರಗಳ ಮತಗಳ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲೇ 2000 ಮತಗಳ ಮುನ್ನಡೆ ಕಾಯ್ದುಕೊಂಡರು. ಬಳಿಕ 3, 4, 5 ಸುತ್ತಿನ ಮತ ಎಣಿಕೆಯಲ್ಲೂ ಮುನ್ನಡೆ ಕಾಯ್ದುಕೊಂಡರಾದರೂ, ಅಂತರ ಕುಸಿದು, 6ನೇ ಸುತ್ತಿನಲ್ಲಿ ಕೈ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಹಿಂದಿಕ್ಕಿದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 411 ಮತಗಳ ಮುನ್ನಡೆ ಸಾಧಿಸಿದರು.
ಇದನ್ನೂ ಓದಿ:By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
7ನೇ ಸುತ್ತಿನಲ್ಲೂ 867 ಮತಗಳ ಮುನ್ನಡರ ಕಾಯ್ದುಕೊಂಡ ಹನುಮಂತು, 8ನೇ ಸುತ್ತಿನಲ್ಲಿ ಹಿಂದೆ ಬಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪುನಃ 33 ಮತಗಳ ಮುನ್ನಡೆ ಕಾಯ್ದುಕೊಂಡರು. ನಂತರ ನಿಧಾನವಾಗಿ ತನ್ನ ಮತಗಳ ಗಳಿಕೆಯನ್ನು ಹೆಚ್ಚಿಸಿಕೊಂಡ ಕೈ ಅಭ್ಯರ್ಥಿ ಅನ್ನಪೂರ್ಣ ಅವರು ಅಂತಿಮವಾಗಿ ಕೊನೆಯ 19ನೇ ಸುತ್ತುತ ಎಣಿಕೆ ಮುಕ್ತಾಯದ ವೇಳೆಗೆ ಕೈ ಅಭ್ಯರ್ಥಿ ಅನ್ನಪೂರ್ಣ ಅವರು, ಬಿಜೆಪಿ ಅಭ್ಯರ್ಥಿ ಬ.ಹನುಮಂತು ಅವರಿಗಿಂತ 9645 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಆದರೆ, ಚುನಾವಣೆಯಲ್ಲಿ ಬಿಜೆಪಿ ಸೋತರೂ ಕ್ಷೇತ್ರದಲ್ಲಿ ತಮ್ಮ ಮತಗಳ ಗಳಿಕೆಯನ್ನು ಹೆಚ್ವಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.