ನರೇಗಾ ಯೋಜನೆ ಸದುಪಯೋಗವಾಗಲಿ
ಬದು ನಿರ್ಮಾಣ-ನರೇಗಾ ಯೋಜನೆ ಮಾಸಾಚರಣೆಗೆ ಶಾಸಕ ತುಕಾರಾಂ ಚಾಲನೆ
Team Udayavani, May 27, 2020, 5:15 PM IST
ಸಾಂದರ್ಭಿಕ ಚಿತ್ರ
ಸಂಡೂರು: ನರೇಗಾ ಯೋಜನೆಯ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಾಸಕ ಈ. ತುಕಾರಾಮ ತಿಳಿಸಿದರು.
ಅವರು ಮಂಗಳವಾರ ತಾಲೂಕಿನ ರಾಜಾಪುರ ಗ್ರಾಮ ಪಂಚಾಯಿತಿಯ ಯು. ಮಲ್ಲಾಪುರ ಗ್ರಾಮದಲ್ಲಿ ಬದುನಿರ್ಮಾಣ ನರೇಗಾ ಯೋಜನೆ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಕೈಗಾರಿಕೆಗಳು ನೆಲಕಚ್ಚಿಯೇ, ಅಧುನಿಕತೆ ನೆಲಕಚ್ಚಿದೆ ಅದರೆ ನಮ್ಮ ದೇಶದ ಕೂಲಿಗಾಗಿ ಕಾಳು ಅಂತಹ ಮಹತ್ತರ ಯೋಜನೆಯಾದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಅರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ದತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ,ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯವಾಗುತ್ತದೆ. ಆದ್ದರಿಂದ ತಾಲೂಕಿನಲ್ಲಿ 14 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು ಅಲ್ಲದೆ 9470 ಸ್ಮಾರ್ಟ್ ಕಾರ್ಡ್ ನೀಡಿ 2 ಲಕ್ಷದ ವರೆಗೆ ಧನಸಹಾಯ ಸಿಗುವಂತೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಅವರು ನರೇಗಾ ಯೋಜನೆಯಲ್ಲಿ ಕೆರೆ ಹೊಳೆತ್ತುವುದು, ಒಡ್ಡು ನಿರ್ಮಾಣ, ಬದುನಿರ್ಮಾಣ, ಕೃಷಿಹೊಂಡ ನಿರ್ಮಾಣ, ರಾಜ್ಯದಲ್ಲಿಯೇ ಅತಿ ಹೆಚ್ಚು ಮಾನವ ದಿನಗಳನ್ನು ನೀಡಲು ದಾಪುಗಾಲು ಇಟ್ಟಿದ್ದೇವೆ. ಈ ತಾಲೂಕಿನಲ್ಲಿ ಮಹಿಳೆಯರಿಗೆ ಹೆಚ್ಚು ಕೆಲಸ ನೀಡಿದ ತಾಲೂಕಾಗಿದೆ. ಆದ್ದರಿಂದ ಗ್ರಾಮೀಣಾಭಿವೃದ್ಧಿ ಸಚಿವರು ಈ ತಾಲೂಕನ್ನು ವಿಶೇಷವಾಗಿ ಗುರುತಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ. ಅದರೂ ಸಾಮಾಜಿಕ ಅಂತರ ಕಾಯ್ದುಕೊಂಡು ಮುನ್ನುಗ್ಗುತ್ತಿದ್ದೇವೆ ಎಂದು ಯೋಜನೆಯ ಅಂಶಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ, ಜಿಲ್ಲಾ ಪಂಚಾಯಿತಿ ಸದಸ್ಯೆ ತಿರುಮಲಸೌಭಾಗ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಶಂಕರ್, ಅರಣ್ಯಾಧಿಕಾರಿ ಭಾಸ್ಕರ್, ಕೃಷಿ ಅಧಿಕಾರಿ, ತೋಟಗಾರಿಕೆ ಇಲಾಖೆ ಅಧಿಕಾರಿ ಕುಬೇರ್ ಅಚಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.