ವಿದ್ಯಾರ್ಥಿ ವೇತನ ಕಡಿತ ಆದೇಶ ಹಿಂಪಡೆಯಲಿ

Team Udayavani, Nov 10, 2019, 12:44 PM IST

ballary-tdy-1

ಬಳ್ಳಾರಿ: ಪ್ರಸಕ್ತ 2019-2020ನೇ ಸಾಲಿನಲ್ಲಿ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಕಡಿತಗೊಳಿಸಲು ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ವಿವಿಧ ಶಾಲಾ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾನಿರತರು, ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಕೆಲಹೊತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ತಲುಪಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು

2019-20ನೇ ಸಾಲಿನ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಹೊರಡಿಸಿದೆ. ಈ ಹಿಂದೆ 2ರಿಂದ 10ನೇ ತರಗತಿಯವರೆಗೂ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿ ವೇತನ ದೊರೆಯುತ್ತಿತ್ತು. ಆದರೆ, ಈ ನೂತನ ಆದೇಶದಂತೆ ಅನುದಾನ ಕೊರತೆ ನೆಪವೊಡ್ಡಿ, ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳನ್ನು ವಂಚಿಸುವಂತಿದೆ.

ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಅದರಲ್ಲೂ ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಬೇಕೆಂದು ತೀರ್ಮಾನಿಸಿದೆ. ಇದು ಅತ್ಯಂತ ಅಪ್ರಜಾತಾಂತ್ರಿಕ ನಿಲುವು ಎಂದು ಎಐಡಿಎಸ್‌ಒ ಪರಿಗಣಿಸಿದ್ದು, ಅನುದಾನದ ಕೊರತೆ ಇದ್ದರೆ ಅದನ್ನು ಹೆಚ್ಚಿಸಬೇಕೆ ಹೊರತು ವಿದ್ಯಾರ್ಥಿಗಳ ವೇತನ ತಡೆಹಿಡಿಯುವುದು ತರವಲ್ಲ. ಅಲ್ಲದೇ ಪ್ರಸಕ್ತ ಕಾಲದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೇಲೆಯೇ ಅವಲಂಬಿತರಾಗಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಈರಣ್ಣ, ಎಂ.ಶಾಂತಾ, ಜೆ.ರಂಗಸ್ವಾಮಿ, ಮಣಿಕಂಠ, ಶಿವ ಸೇರಿದಂತೆ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.