ಕಾರ್ಯದರ್ಶಿ ಹುದ್ದೆ ಬಡ್ತಿಗೆ ಆಗ್ರಹ
Team Udayavani, Feb 15, 2019, 8:49 AM IST
ಹಗರಿಬೊಮ್ಮನಹಳ್ಳಿ: ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಣಕಯಂತ್ರ ನಿರ್ವಾಹಕರನ್ನು ಕೂಡಲೇ ಗ್ರೇಡ್-2 ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿ ಕಾಯಂಗೊಳಿಸಬೇಕು ಎಂದು ಗ್ರಾಮ ಪಂಚಾಯತ್ ಕ್ಲರ್ಕ್ ಮತ್ತು ಗಣಕಯಂತ್ರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಪದಾಧಿಕಾರಿಗಳು ತಾಪಂ ಇಒಗೆ ಗುರುವಾರ ಮನವಿ ಸಲ್ಲಿಸಿದರು.
ಗಣಕಯಂತ್ರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ವಿಶ್ವನಾಥ ಮಾತನಾಡಿ, ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಮತ್ತು ಗಣಕಯಂತ್ರ ನಿರ್ವಾಹಕರು ಕಳೆದ ಹಲವು ವರ್ಷಗಳಿಂದಲೂ ಡಾಟಾ ಎಂಟ್ರಿ ಅಪರೇಟರ್‌ಗಳು ಕನಿಷ್ಠ ವೇತನಕ್ಕೆ ದುಡಿಯುವಂತಾಗಿದೆ. ಗ್ರಾಪಂಗಳ ಕ್ಲರ್ಕ್ ಮತ್ತು ಗಣಕಯಂತ್ರ ನಿರ್ವಾಹಕರಿಗೆ ಗ್ರೇಡ್-2 ಕಾರ್ಯದರ್ಶಿ ಹುದ್ದೆಗೆ ಪರಿಗಣಿಸಬೇಕು. ನೌಕರರಿಗೆ ಕಾಯಂ ಉದ್ಯೋಗ ಭದ್ರತೆ ಕಲ್ಪಿಸದ ಹಿನ್ನೆಲೆಯಲ್ಲಿ ಆತಂಕದಲ್ಲಿದ್ದಾರೆ. ಈಗಾಗಲೇ ಗಣಕ ನಿರ್ವಾಹಕರಿಗೆ ವೇತನ ನೀಡಲು ಸರಕಾರದ ಆರ್ಥಿಕ ಇಲಾಖೆ ಸಹಮತ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
ಸಂಘದ ಸದಸ್ಯ ಕೊಟ್ರೇಶ್ ಕಾಶಿನಾಯ್ಕರ್ ಮಾತನಾಡಿ, ಗ್ರಾಪಂ ಕ್ಲರ್ಕ್‌ಗಳು, ಗಣಕಯಂತ್ರ ಆಪರೇಟರ್‌ಗಳು ಬಹುದಿನಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಕೂಡಲೇ ಕಾಯಂಗೊಳಿಸಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಕಾಯಂಗೊಳಿಸಿ, ಉದ್ಯೋಗ ಭದ್ರತೆ ನೀಡಬೇಕು.
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಫೆ.18ರಿಂದ ಅರ್ನಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ. ಗ್ರಾಪಂ ಸಿಬ್ಬಂದಿಗೆ ನ್ಯಾಯ ಕೊಡುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದರು. ತಾಪಂ ಇಒ ಮಲ್ಲನಾಯ್ಕಗೆ ಮನವಿ ಸಲ್ಲಿಸಿದರು. ಸಂಘದ ಪದಾಧಿಕಾರಿಗಳಾದ ಸಂಗಪ್ಪ, ಕೊಟ್ರಪ್ಪ, ಕೊಟ್ರಮ್ಮ, ಕವಿತಾ, ದುರುಗಮ್ಮ, ಪ್ರಕಾಶ, ಅಶೋಕ್, ಉಮೇಶ, ಬಸವರಾಜ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.