ನಳದಲ್ಲಿ ಕೊಳಚೆ ಮಿಶ್ರಿತ ನೀರು ಪೂರೈಕೆ; ಆಕ್ರೋಶ
ಮಾವಿನಹಳ್ಳಿ ಜನರಿಗೆ ಸಾಂಕ್ರಾಮಿಕ ರೋಗದ ಭೀತಿ
Team Udayavani, Aug 4, 2020, 1:40 PM IST
ಕಂಪ್ಲಿ: ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದಲ್ಲಿ ಚರಂಡಿ ಮಿಶ್ರಿತ ನೀರು ಪೂರೈಕೆಯಾಗುತ್ತಿರುವುದು.
ಕಂಪ್ಲಿ: ಸಾರ್ವಜನಿಕರು ಪ್ರತಿದಿನ ಉಪಯೋಗಿಸುವ, ಗ್ರಾಪಂನವರು ಸರಬರಾಜು ಮಾಡುವ ನಳದಲ್ಲಿ ಕೊಳಚೆ ಮಿಶ್ರಿತ ನೀರು ಪೂರೈಕೆಯಾಗುತ್ತಿದ್ದು
ಈಗಾಗಲೇ ಮಹಾಮಾರಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಭಯದಲ್ಲಿ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು ಇದೀಗ ಕೊಳಚೆ ನೀರಿನಿಂದಾಗಿ ಸಾಂಕ್ರಾಮಿಕ ರೋಗದ ಭೀತಿಯನ್ನು ಅನುಭವಿಸುತ್ತಿದ್ದಾರೆ.
ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಮಾವಿನಹಳ್ಳಿ ಗ್ರಾಮದ ಮಹಾಂಕಾಳಮ್ಮ ಕಟ್ಟೆ ಬಳಿ ಇರುವ ನಳಗಳಲ್ಲಿ ಕೊಳಚೆ ಮಿಶ್ರಿತ ನೀರು ಸರಬರಾಜಾಗುತ್ತಿದ್ದು, ಸ್ಥಳೀಯರಲ್ಲಿ ರೋಗದ ಭೀತಿ ಆವರಿಸಿದೆ. ಈ ಗ್ರಾಮದ ಸುಮಾರು 50ಕ್ಕೂ ಅಧಿಕ ನಳಗಳಲ್ಲಿ ಚರಂಡಿ ನೀರು ಮಿಶ್ರಿತ ನೀರಿನೊಂದಿಗೆ ಹುಳುಗಳು ಬರುತ್ತಿವೆ. ಕಳೆದ 15 ದಿನಗಳಿಂದ ಇದೇ ರೀತಿ ಗಲೀಜು ನೀರು ಪೂರೈಕೆಯಾಗುತ್ತಿದ್ದು, ಗ್ರಾಮದಲ್ಲಿ ಕುಡಿಯುವ ನೀರು ಬಿಡುವ ನೀರಗಂಟಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೆಲವರು ಇದೇ ನೀರನ್ನು ಕುಡಿಯುತ್ತಿದ್ದಾರೆ. ಗ್ರಾಮದ ಜನತೆಗೆ ಗ್ರಾಪಂ ಆಡಳಿತ ಮಂಡಳಿಯವರು
ಶುದ್ಧೀಕರಿಸಿದ ಕುಡಿಯುವ ನೀರನ್ನು ಒದಗಿಸಬೇಕೆಂದು ಗ್ರಾಮದ ಮದಿರೆ ಸಿದ್ದಮ್ಮ, ಲಕ್ಷ್ಮೀ, ಹೇಮೇಶ್ವರ, ಹೊನ್ನೂರಮ್ಮ, ರಾಮಕ್ಕ, ಶ್ರೀದೇವಿ, ವೀರೇಶ್ ವಸಂತಮ್ಮ, ಮದಿರೆ ಹೊನ್ನೂರಮ್ಮ ಒತ್ತಾಯಿಸಿದರು.
ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಚರಂಡಿ ನೀರು ಸೇರಿರುವ ಸಾಧ್ಯತೆಗಳಿದ್ದು ಇದನ್ನು ಪತ್ತೆ ಹಚ್ಚಿ ಪೈಪ್‌ಲೈನ್ ಸರಿಪಡಿಸಿ ಶುದ್ಧ
ಕುಡಿಯುವ ನೀರನ್ನು ಶೀಘ್ರವಾಗಿ ಬಿಡಲಾಗುವುದು.
ಅಪರಂಜಿ, ಸುಗ್ಗೇನಹಳ್ಳಿ ಗ್ರಾಪಂ ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.