ಮತ ಕೇಳಲು ಶ್ರೀರಾಮುಲುಗೆ ನಾಚಿಕೆಯಾಗಬೇಕು
Team Udayavani, Oct 29, 2018, 6:00 AM IST
ಕುರುಗೋಡು: ಬಳ್ಳಾರಿಯಲ್ಲಿ ಲೋಕಸಭಾ ಉಪ ಚುನಾವಣೆ ನಡೆಯುತ್ತಿರುವುದಕ್ಕೆ ಶ್ರೀರಾಮುಲು ಕಾರಣರಾಗಿದ್ದಾರೆ. ಜನರ ಸೇವೆ ಮಾಡಲು ಆಗದೆ ರಾಜೀನಾಮೆ ನೀಡಿದ ಅವರು, ತಮ್ಮ ಸಹೋದರಿ ಜೆ. ಶಾಂತಾ ಪರ ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಕಲ್ಲುಕಂಬ ಗ್ರಾಮದಲ್ಲಿ ಭಾನುವಾರ ಪ್ರಚಾರ ಭಾಷಣ ಮಾಡಿದ ಅವರು, ಶ್ರೀರಾಮುಲು ವಿರುದಟಛಿ ವಾಗ್ಧಾಳಿ ನಡೆಸಿದರು. ಈಗಾಗಲೇ ಶ್ರೀರಾಮುಲು ಅವರು ಅಧಿಕಾರದ ಆಸೆಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳ್ಳಾರಿ ಜನರಿಗೆ ಅನ್ಯಾಯವೆಸಗಿದ್ದಾರೆ. ಈಗ ಮತ್ತೆ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಪರಿಶಿಷ್ಟ ಪಂಗಡ ವರ್ಗದಿಂದ ತಮ್ಮ ಸಹೋದರಿ ಜೆ. ಶಾಂತಾ ಅವರನ್ನು ಕಣಕ್ಕಿಳಿಸಿದ್ದಾರೆ. ಶಾಂತಾ ಅವರನ್ನು ಬಿಟ್ಟು ಸ್ಪರ್ಧೆಗಿಳಿಯಲು ಅವರಿಗೆ ಬೇರೆ ಯಾರೂ ಸಿಗಲಿಲ್ಲವೋ ಅಥವಾ ತಮ್ಮ ಕುಟುಂಬದ ಸದಸ್ಯರು ಮಾತ್ರ ಸ್ಪರ್ಧಿಸಬೇಕು ಅಂತ ಅವರು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲ ಎಂದರು.
ಜೆ.ಶಾಂತಾ ಅವರು ಶಾಸಕರು, ಸಂಸದರಾಗಿದ್ದವರು. ಅವರ ಅವಧಿಯಲ್ಲಿ ಎಷ್ಟು ಬಾರಿ ಸಂಸತ್‌ಗೆ ಹೋಗಿ ಅನುದಾನ
ತಂದು ಬಳ್ಳಾರಿ ಮತ್ತು ಸುತ್ತಮುತ್ತ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದಾರೆ ತೋರಿಸಲಿ ಎಂದು ಸವಾಲೆಸೆದರು. ಈ ಬಾರಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯ ಗಳಿಸಲಿದೆ. ಬಿಜೆಪಿಗೆ ಮುಖಭಂಗ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ರಾಜ್ಯದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು ಅನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದಾರೆ. ಕಾಂಗ್ರೆಸ್‌ನ ಜನಪರ ಯೋಜನೆಗಳು ಹಾಗೂ ಬಳ್ಳಾರಿ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರಿಗೆ ಮತ ನೀಡಿ ಗೆಲುವಿಗೆ ಸಹಕರಿಸಬೇಕು.
● ಡಿ.ಕೆ. ಶಿವಕುಮಾರ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.