ಸಿದ್ಧಗಂಗಾ ಶ್ರೀ ಜಗತ್ತು ಕಂಡ ಮಹಾನ್‌ ಚೇತನ


Team Udayavani, Jan 24, 2019, 7:37 AM IST

bell-3.jpg

ಕೂಡ್ಲಿಗಿ: ಅನ್ನ,ಅಕ್ಷರ, ಆಶ್ರಯ ನೀಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿಗಳು ಈ ಜಗತ್ತು ಕಂಡ ಮಹಾನ್‌ ಚೇತನರಾಗಿದ್ದು ಜಾತಿ,ಧರ್ಮ,ಭಾಷೆಯನ್ನು ಮೀರಿ ಸರ್ಕಾರ ಮಾಡದ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವ ಶ್ರೀಗಳ ಜೀವನವೇ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರೇಮಠದ ಚಿದಾನಂದಸ್ವಾಮಿ ಅಭಿಪ್ರಾಯಪಟ್ಟರು.

ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಆಯೋಜಿಸಿದ್ದ ಸಿದ್ಧಗಂಗಾ ಶ್ರೀಗಳ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಸಿದು ಬಂದವರಿಗೆ ಅನ್ನ ನೀಡುವ ಸಂಸ್ಕೃತಿ ಬೆಳೆಸಿಕೊಂಡು ಬಂದಿರುವ ಡಾ| ಶಿವಕುಮಾರ ಸ್ವಾಮೀಜಿಗಳು ಇಡೀ ಜಗತ್ತಿಗೆ ಬೆಳಕಾಗಿದ್ದಾರೆ. ಈ ಮಠದಲ್ಲಿ ಓದಿರುವ ವಿದ್ಯಾರ್ಥಿಗಳು ಇಂದು ಜಗತ್ತಿನೆಲ್ಲೆಡೆ ಇದ್ದು, ಮಠದ ಅನನ್ಯ ಸೇವೆಯನ್ನು ಈಗಲೂ ಕೊಂಡಾಡುತ್ತಾರೆ. ಶ್ರೀಗಳ ಅನ್ನ, ಅಕ್ಷರ, ಆಶ್ರಯದಿಂದ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ಭವಿಷ್ಯ ರೂಪಿಸಿದ್ದು, ಸಮಾಜದ ವಿಕಾಸಕ್ಕೆ ಶ್ರೀಗಳು ಪೂರಕವಾಗಿ ಕಾರ್ಯನಿರ್ವಹಿಸಿರುವುದು ಮಾತ್ರ ನಮ್ಮ ನಾಡಿನ ಹೆಮ್ಮೆಯಾಗಿದೆ ಎಂದರು.

ಯುವ ಮುಖಂಡ ಕೋಗಳಿ ಮಂಜುನಾಥ್‌ ಮಾತನಾಡಿ, ಸಿದ್ಧಗಂಗಾ ಶ್ರೀಗಳ ಜನಪರ ಕಾಳಜಿ, ಜಾತಿ, ಧರ್ಮದ ಎಲ್ಲೆ ಮೀರಿ ನಾಡಿನ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟಿದ್ದು, ಬಡ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣ ನೀಡುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಬಸವಾದಿ ಶರಣರಂತೆ ಕಾಯಕ ಯೋಗಿಗಳಾಗಿದ್ದ ಡಾ|ಶಿವಕುಮಾರ ಸ್ವಾಮಿಗಳು ಊರೂರು ತಿರುಗಿ ಧಾನ್ಯಗಳನ್ನು ಸಂಗ್ರಹಿಸಿ ಮಠದಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತಾ ಬಂದಿರುವುದು ಇವರ ಮಾನವೀಯ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಿದ್ಧಗಂಗಾ ಶ್ರೀಗಳಿಗೆ ನುಡಿನಮನ ಸಲ್ಲಿಸಿದರು. ಕಾರ್ಯಕ್ರಮಕ್ಕೂ ಮುಂಚೆ ನಡೆದಾಡುವ ದೇವಮಾನವರ ಭಾವಚಿತ್ರಕ್ಕೆ ಬಿಲ್ವಪತ್ರೆ ಅರ್ಪಿಸಿ ಹಣತೆ ಬೆಳಗಿಸಿ ನಮನ ಸಲ್ಲಿಸಲಾಯಿತು.

ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಶಶಿಧರ ಗುರೂಜಿ, ಕೆ.ಎಂ.ವೀರೇಶ್‌, ವಿವೇಕಾನಂದ, ಸಚಿನ್‌ಕುಮಾರ್‌, ಗುರು, ನಾಗರಾಜ, ಮಹಾಂತೇಶ್‌, ಪಿ.ಶಿವರಾಜ್‌, ಅಮಲಾಪುರ ಚಿದಾನಂದಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.