ಕಂಪ್ಲಿ ಯಲ್ಲಿ ಸಹಿ ಸಂಗ್ರಹ ಅಭಿಯಾನ
Team Udayavani, Jan 14, 2020, 1:24 PM IST
ಕಂಪ್ಲಿ: ಪಟ್ಟಣದ ಪುರಸಭೆ ಮುಂಭಾಗದಲ್ಲಿ ಬಿಜೆಪಿ ಕಂಪ್ಲಿ ವಿಧಾನಸಭಾ ಕ್ಷೇತ್ರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಸಹಿ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯರ್ರಂಗಳಿ ತಿಮ್ಮಾರೆಡ್ಡಿ ಸಹಿ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಪೌರತ್ವ ಕಾಯ್ದೆಯಿಂದ ದೇಶದ ಜನತೆಗೆ ತೊಂದರೆಯಾಗುವುದಿಲ್ಲ. ಅದರಲ್ಲೂ ಮುಖ್ಯವಾಗಿ ದೇಶದ ಮುಸ್ಲಿಂರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ.ಕಾಂಗ್ರೆಸ್ ಪೌರತ್ವ ಕಾಯ್ದೆ ವಿರುದ್ಧ ಮುಸ್ಲಿಮರನ್ನು ದಾರಿ ತಪ್ಪಿಸುವ ಜತೆಗೆ ಕೋಮುಗಲಭೆಗೆ ಮುಂದಾಗುತ್ತಿದೆ. ಮುಸ್ಲಿಮರು ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಹೊಂದಬೇಕು ಎಂದರು. ಅಳ್ಳಳ್ಳಿ ವಿರೇಶ್ ಮಾತನಾಡಿ, ಈ ಕಾಯ್ದೆಯನ್ನು ರಾಜಕೀಯ ಹಿತಾಸಕ್ತಿಯಿಂದ ವಿರೋಧಿ ಸುತ್ತಿರುವ ಪ್ರತಿಪಕ್ಷಗಳು ದೇಶದ ಅಲ್ಪಸಂಖ್ಯಾತರಿಗೆ ತಪ್ಪು ಮಾಹಿತಿ ನೀಡಿ ಹಿಂಸೆಗೆ ಪ್ರಚೋದನೆ ನೀಡುತ್ತಿವೆ. ದೇಶದ ಜನರಲ್ಲಿ ಮುಸ್ಲಿಂ ವಿರೋಧಿ ಭಾವ ತುಂಬಲಾಗುತ್ತಿವೆ. ಸಾರ್ವಜನಿಕವಾಗಿ ಸಹಿ ಸಂಗ್ರಹಿಸಿ ಪೌರತ್ವ ಕಾಯ್ದೆ ಪರವಾಗಿ ಬೆಂಬಲ ಮೂಡಿಸುವುದು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿ ತಲುಪಿಸುವುದು ಉದ್ದೇಶ ಅಭಿಯಾನದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹಿ ಮಾಡುವ ಮೂಲಕ ಪೌರತ್ವ ಕಾಯ್ದೆಗೆ ಬೆಂಬಲ ಸೂಚಿಸಿದರು. ಈ ಅಭಿಯಾನದಲ್ಲಿ ಪುರಸಭೆ ಸದಸ್ಯರಾದ ಸಿ.ಆರ್. ಹನುಮಂತ, ಎಸ್.ಎಂ. ನಾಗರಾಜ, ಟಿ.ವಿ. ಸುದರ್ಶನರೆಡ್ಡಿ, ಬಿಜೆಪಿ ಪಕ್ಷದ ಮುಖಂಡರಾದ ಪಿ. ಬ್ರಹ್ಮಯ್ಯ, ಬಿ. ಸಿದ್ದಪ್ಪ, ಜಿ.ಸುಧಾಕರ, ಕೊಡಿದಲ್ ರಾಜು, ಅಗಳಿ ಪಂಪಾಪತಿ, ಶ್ರೀಧರ್ ಶ್ರೇಷ್ಠಿ, ಜಿ.ಜಿ. ಚಂದ್ರಣ್ಣ, ವಿ. ವಿದ್ಯಾಧರ, ಬಾವಿಕಟ್ಟೆ ವೆಂಕಟೇಶ್, ಎ. ರೇಣುಕಪ್ಪ, ಬಿ.ಕೆ. ವಿರೂಪಾಕ್ಷಿ, ಭಾಸ್ಕರ್, ನಟರಾಜ್, ಕೆ. ಜ್ಯೋತಿ, ಪುಷ್ಪಾವತಿ, ಪದ್ದಮ್ಮ, ನೂರಾರು ಯವಕರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.