ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ
Team Udayavani, Oct 9, 2020, 7:18 PM IST
ಬಳ್ಳಾರಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಹತ್ಯೆ ಖಂಡಿಸಿ ನಗರದ ಹೊಸಪೇಟೆ ರಸ್ತೆಯಲ್ಲಿನ ಅಂಬೇಡ್ಕರ್ ಭವನದ ಎದುರು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರುಗುರುವಾರ ಮೌನ ಪ್ರತಿಭಟನಾ ಧರಣಿ ನಡೆಸಿದರು.
ಉತ್ತರ ಪ್ರದೇಶದಲ್ಲಿ ಅಯೋಧ್ಯೆರಾಮ ಮಂದಿರ ನಿರ್ಮಿಸುವ ಮೂಲಕ ರಾಮ ರಾಜ್ಯ ಮಾಡುತ್ತೇವೆ ಎಂದುರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅ ಧಿಕಾರಕ್ಕೆ ಬಂದ ಬಳಿಕ ರಾವಣ ರಾಜ್ಯ ಮಾಡುತ್ತಿದ್ದಾರೆ. ಮಹಿಳೆಯರ ಅಭಿವೃದ್ಧಿ, ರಕ್ಷಣೆ ಬಗ್ಗೆ ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಅವರು ಈವರೆಗೆ ಈ ಘಟನೆ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಇನ್ನಿತರ ಜನವಿರೋಧಿ ನೀತಿಗಳನ್ನುಜಾರಿಗೆ ತರುವ ಬಗ್ಗೆ ಸಹ ಖಂಡಿಸಿ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಅಂಬೇಡ್ಕರ್ ಭವನ ಆವರಣದಲ್ಲಿ ಇರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕಗೌರವ ಸೂಚಿಸಲಾಯಿತು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಿ.ಎಸ್. ಮಹ್ಮದ್ ರಫೀಕ್, ಹಿರಿಯ ಮುಖಂಡ ಕಲ್ಲುಕಂಭ ಪಂಪಾಪತಿ, ಅಸುಂಡಿ ಹೊನ್ನೂರಪ್ಪ, ಬೆಣಕಲ್ ಬಸವರಾಜ, ಉಪಾಧ್ಯಕ್ಷ ಕಂದರಿ ನಾಗರಾಜ,ಮುಖಂಡರಾದ ನಾಗರಾಜಗೌಡ,ಜಿ.ಜೆ. ರವಿಕುಮಾರ್, ಪೆರಂ ವಿವೇಕ್,ಪ್ರಧಾನ ಕಾರ್ಯದರ್ಶಿ ಕಾಂತಿನೋಹವಿಲ್ಸನ್, ವಿ.ಅರುಣ್ ಕುಮಾರ್, ಕಾರ್ಯದರ್ಶಿ ಎಂ.ಶಾಂತಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನುಮ ಕಿಶೋರ್, ಸರಗು ನಾಗರಾಜ, ರಘುರಾಮ್ ರಾಜನ್, ಜೈಕುಮಾರ್ ನಾಯುಡು, ಕೆ.ತಾಯಪ್ಪ,ದ್ರಾಕ್ಷಾಯಿಣಿ, ಶಮೀಮ್ ಭಾನು, ಲಕ್ಷ್ಮೀ, ಬಿ.ಎ.ಪದ್ಮಾವತಿ, ಪ್ರೀತಿ, ಅಲಿವೇಲು ಸುರೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.