Siruguppa;ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ; ಒಬ್ಬ ಆರೋಪಿ ಬಂಧನ
Team Udayavani, Jul 22, 2024, 12:11 PM IST
ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.
ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಲಾಗಿದೆ ಎಂದು ಗಾದಿಲಿಂಗಪ್ಪ ಎನ್ನುವವರು ದೂರು ನೀಡಿದ್ದಾರೆ.
ಅನ್ಯ ಧರ್ಮದವರು ತಮ್ಮ ಗುರುಗಳ ಬಗ್ಗೆ ಬೋಧನೆ ಮಾಡುತ್ತಿರುವ ದೃಶ್ಯವನ್ನು ಗಾದಿಲಿಂಗಪ್ಪ ಸೆರೆಹಿಡಿದಿದ್ದಾರೆ.
ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಅವರ ಮಾತು ನಂಬಬೇಡಿ ಅವರೆಲ್ಲ ಮತಾಂತರ ಮಾಡುತ್ತಾರೆ ಎಂದು ಗಾದಿಲಿಂಗಪ್ಪ ಬುದ್ಧಿಹೇಳಿದರು.
ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮತ್ತೋರ್ವ ಆರೋಪಿ ಸಾಯಿಬಾಬಾ ಎಂಬಾತ ನಾಪತ್ತೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.