ಕೋವಿಡ್ ತಡೆಗೆ ಅಧಿಕಾರಿಗಳು ಶ್ರಮಿಸಿ
ತಾಲೂಕಿನಲ್ಲಿ ಸೋಂಕು ಹರಡದಂತೆ ಮುಂಜಾಗ್ರತೆ ಅವಶ್ಯ
Team Udayavani, Apr 19, 2020, 1:15 PM IST
ಸಿರುಗುಪ್ಪ: ನಗರಸಭೆ ಸಭಾಂಗಣದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅಧ್ಯಕ್ಷತೆಯಲ್ಲಿ ಕೋವಿಡ್-19 ಪರಿಶೀಲನಾ ಸಭೆ ನಡೆಯಿತು
ಸಿರುಗುಪ್ಪ: ನಗರದ ನಗರಸಭೆ ಸಭಾಂಗಣದಲ್ಲಿ ನಡೆದ ಕೋವಿಡ್-19 ಪರಿಶೀಲನಾ ಸಭೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಸಕ ಎಂ.ಎಸ್. ಸೋಮಲಿಂಗಪ್ಪ ಮಾತನಾಡಿ ತಾಲೂಕಿನ ಹಾಗಲೂರು ಹೊಸಳ್ಳಿ ಗ್ರಾಮದಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ವರದಿಯಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳುವುದರಿಂದ ತಾಲೂಕಿನಲ್ಲಿ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಗಡಿ ಭಾಗದ ಸೀಮಾಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದ್ದು, ಗಡಿಭಾಗದ ಕೋವಿಡ್-19 ಸೋಂಕಿತರು ತಾಲೂಕಿಗೆ ಬರದಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಚೆಕ್‌ಪೋಸ್ಟ್‌ಗಳಲ್ಲಿ ಭತ್ತ ಸಾಗಣಿಕೆ ಮಾಡುವ ಲಾರಿಗಳ ಚಾಲಕರು ಮತ್ತು ಕ್ಲೀನರ್‌ಗಳನ್ನು ದ್ವಿಚಕ್ರ ವಾಹನ ಸವಾರರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿ ಒಳ ಬಿಡಬೇಕು. ತಾಲೂಕಿನಲ್ಲಿ ಲಾಕ್‌ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಮುಖ್ಯರಸ್ತೆ, ವಾರ್ಡ್‌ಗಳಲ್ಲಿನ ಸಂಪರ್ಕ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಮುಚ್ಚಿ ಜನರ, ವಾಹನಗಳ ಸಂಚಾರವನ್ನು ತಡೆಯಬೇಕು.
ತಾಲೂಕಿನಲ್ಲಿ ಮಧ್ಯ ಮಾರಾಟ ನಿಷೇಧಿಸಿರುವುದರಿಂದ ಗಡಿಭಾಗದ ಸೀಮಾಂಧ್ರ ಪ್ರದೇಶದ ಗ್ರಾಮಗಳಾದ ಹೊಳಗುಂದಿ ಇತರ ಗ್ರಾಮಗಳಿಂದ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ, ಹೆಂಡ, ಮದ್ಯವನ್ನು ತಂದು ತಾಲೂಕಿನ ತೆಕ್ಕಲಕೋಟೆ, ಹಚ್ಚೋಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದು ಜನರ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತಿದೆ. ಆದ್ದರಿಂದ ಅಕ್ರಮ ಮದ್ಯ ಮಾರಾಟ ಮಾಡುವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.