ನಕಲಿ ಬೀಜ ಮಾರಾಟಗಾರರ ಮೇಲೆ ನಿಗಾ
ಬೀಜ-ಗೊಬ್ಬರ ಮಾರಾಟಗಾರರ ಸಭೆ ಆನ್‌ಲೈನ್‌ನಲ್ಲಿ ದಾಖಲೀಕರಣ ಕಡ್ದಾಯ
Team Udayavani, Jun 10, 2020, 4:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ರೈತರಿಗೆ ಮಾರಾಟಗಾರರು ಕಳಪೆ ಪರಿಕರ, ಬೀಜಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಉಪ ಕೃಷಿ ನಿರ್ದೇಶಕ ಸಿ.ಆರ್. ಚಂದ್ರಶೇಖರ್ ಹೇಳಿದರು.
ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ನಡೆದ ಬೀಜ ಮತ್ತು ಗೊಬ್ಬರ ಮಾರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಮುಂಗಾರು ಹಂಗಾಮು ಪ್ರಾರಂಭಗೊಂಡಿದೆ. ರೈತರು ಮಳೆಯಾಶ್ರಿತ ಜಮೀನುಗಳಲ್ಲಿ ಹತ್ತಿ, ಮುಸುಕಿನ ಜೋಳ, ಸೂರ್ಯಕಾಂತಿ, ನವಣೆ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಬಿತ್ತನೆ ಬೀಜಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕಿನ ಗಡಿಭಾಗದ ಸೀಮಾಂಧ್ರ ಪ್ರದೇಶದಿಂದ ನಕಲಿ ಹತ್ತಿ ಬೀಜಗಳನ್ನು ಕೂಲ್ಲಾ ತರುತ್ತಿದ್ದು, ತಾಲೂಕಿನ ಮಾರಾಟಗಾರರು ವಿನಿಮಯ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದಿದೆ. ಕೃಷಿ ಇಲಾಖೆಯ ವಿಜಿಲೆನ್ಸ್ ತಂಡದವರು ನಿಗಾವಹಿಸಿದೆ. ಅಂತಹ ಮಾರಾಟಗಾರರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸೀಮಾಂಧ್ರ ಪ್ರದೇಶದಿಂದ ನಕಲಿ ಹತ್ತಿ ಬೀಜಗಳನ್ನು ತಂದು ಮಾರಾಟ ಮಾಡುವವರ ಮೇಲೆ ಕೃಷಿ ಇಲಾಖೆ ತೀವ್ರ ನಿಗಾ ಇಟ್ಟಿದ್ದು, ಈ ಬಗ್ಗೆ ಯಾವುದೇ ಮಾಹಿತಿ ಬಂದರೆ ಸಾರ್ವಜನಿಕರು ಮತ್ತು ರೈತರು ಮಾಹಿತಿ ನೀಡಬೇಕು. ತಾಲೂಕಿನ ಹೆಚ್ಚಿನ ಮಾರಾಟಗಾರರು ಇದುವರೆಗೂ ಕೃಷಿ ಇಲಾಖೆಯಿಂದ ಪರವಾನಗಿಯನ್ನು ನವೀಕರಣ ಮಾಡಿಕೊಳ್ಳದೇ ಇರುವುದರಿಂದ ಅಂತಹ ಪರವಾನಗಿ ಹೊಂದಿಲ್ಲದ ಮಾರಾಟದ ಅಂಗಡಿಗಳನ್ನು ಸೀಜ್ ಮಾಡಲಾಗುವುದು. ಮಾರಾಟಗಾರರು ಕಡ್ಡಾಯವಾಗಿ ತಾವು ಮಾರಾಟ ಮಾಡುವ ವಸ್ತುಗಳ ದಾಖಲೆಯನ್ನು ಆನ್‌ಲೈನ್‌ನಲ್ಲಿ ನಿಯಮಿತವಾಗಿ ದಾಖಲೀಕರಣಗೊಳಿಸಬೇಕು. ರೈತರಿಗೆ ಕಾಣುವಂತೆ ಉತ್ಪನ್ನಗಳ ದರ ಹಾಗೂ ದಾಸ್ತಾನು ವಿವರ ಪ್ರದರ್ಶಿಸಬೇಕು. ರೈತರು ಖರೀದಿಸಿದ ವಸ್ತುಗಳಿಗೆ ರಸೀದಿ ನೀಡಬೇಕೆಂದು ಸೂಚಿಸಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್ ಮಾತನಾಡಿ, ಯೂರಿಯಾ, ಡಿಎಪಿ ರಸಗೊಬ್ಬರಗಳ ಉತ್ಪಾದನೆ ಕೋವಿಡ್-19 ಹಿನ್ನೆಲೆಯಲ್ಲಿ ಕುಂಠಿತಗೊಂಡಿದೆ. ತಾಲೂಕಿಗೆ ದೊರೆಯುವ ರಸಗೊಬ್ಬರ ಪ್ರಮಾಣವನ್ನು ಇತರ ಪ್ರದೇಶಕ್ಕೆ ನೀಡದೆ ತಾಲೂಕಿನ ರೈತರಿಗೆ ಅಗತ್ಯ ರಸಗೊಬ್ಬರಗಳನ್ನು ಮಾರಾಟ ಮಾಡಬೇಕೆಂದು ತಿಳಿಸಿದರು.
ವಿಜಿಲೆನ್ಸ್ ತಂಡದ ಅಧಿಕಾರಿಗಳಾದ ನಾಗರಾಜ, ಮುಜಬಿರ್ ರಹೆಮಾನ್, ಕೃಷಿ ಅಧಿಕಾರಿಗಳಾದ ಗರ್ಜೆಪ್ಪ, ಸೌಮ್ಯ ಹಾಗೂ ತೆಕ್ಕಲಕೋಟೆ, ಕರೂರು ಹೋಬಳಿ ವ್ಯಾಪ್ತಿಯ ಬೀಜ ಮತ್ತು ಕ್ರಿಮಿನಾಶಕ ಮಾರಾಟಗಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.