ವಲಸೆ ತಡೆಗೆ ನರೇಗಾದಡಿ ಉದ್ಯೋಗ
ಕೃಷಿಹೊಂಡ ನಿರ್ಮಾಣಕ್ಕೆ ಅಧಿಕಾರಿ ರೋಹಿತ್ ಚಾಲನೆ
Team Udayavani, May 22, 2020, 4:00 PM IST
ಸಾಂದರ್ಭಿಕ ಚಿತ್ರ
ಸಿರುಗುಪ್ಪ: ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಮತ್ತು ಕೂಲಿಕಾರ್ಮಿಕರಿಗೆ ಉದ್ಯೋಗ ದೊರಕಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಲಾಭವನ್ನು ರೈತರು ಮತ್ತು ಕೃಷಿಕರು ಪಡೆದುಕೊಳ್ಳಬೇಕೆಂದು ರಾಜ್ಯ ನರೇಗಾ ಯೋಜನೆಯ ಯೋಜನಾ ವ್ಯವಸ್ಥಾಪಕ ರೋಹಿತ್ ತಿಳಿಸಿದರು.
ತಾಲೂಕಿನ ಬಿ.ಎಂ. ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಡಂಗ ಗ್ರಾಮದಲ್ಲಿ ಕೃಷಿಹೊಂಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಹಳ್ಳಿಗಳಲ್ಲಿ ಉದ್ಯೋಗವಿಲ್ಲದೆ ಕೃಷಿ ಕೂಲಿಕಾರರು ಮಹಾನಗರಗಳಿಗೆ ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ನರೇಗಾ ಯೋಜನೆಯಡಿ ಉದ್ಯೋಗವನ್ನು ಸೃಷ್ಟಿಸಿ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಅರ್ಹ ರೈತರು ನರೇಗಾ ಯೋಜನೆಯಲ್ಲಿ ತಮ್ಮ ಹೊಲಗಳ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹೊಲಗಳಲ್ಲಿ ರೈತರು ಕೃಷಿ ಹೊಂಡ ನಿರ್ಮಿಸುವುದರಿಂದ ಮಳೆಗಾಲದ ನಂತರ ತಮ್ಮ ಬೆಳೆಗಳಿಗೆ ನೀರು ಹರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕೃಷಿ ಜಂಟಿ ಉಪನಿರ್ದೇಶಕ ಚಂದ್ರಶೇಖರ್, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹಮ್ಮದ್, ನರೇಗಾ ತಾಲೂಕು ನಿರ್ದೇಶಕಿ ಕೆ.ವಿ. ನಿರ್ಮಲಾ, ತಾಲೂಕು ಸಂಯೋಜಕ ರಮೇಶ್, ತಾಂತ್ರಿಕ ಅಧಿಕಾರಿ ಪ್ರದೀಪ್, ಗ್ರಾಪಂ ಪಿಡಿಒ ಹನುಮನಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.