Siruguppa: ಶಿಥಿಲಗೊಂಡ ಶಾಲಾ ಕೊಠಡಿ… ವಿದ್ಯಾರ್ಥಿಳಿಗೆ ಬಯಲೇ ಪಾಠಶಾಲೆ
Team Udayavani, Aug 18, 2024, 11:54 AM IST
ಸಿರುಗುಪ್ಪ: ತಾಲೂಕಿನ ಬೀರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಭೈರಗಾಮದಿನ್ನೆ ಗ್ರಾಮದಲ್ಲಿ ಮಳೆ ಬಂದರೆ ಶಾಲೆಯ ವಿದ್ಯಾರ್ಥಿಗಳಿಗೆ ದೇವಸ್ಥಾನದ ಆವರಣವೇ ಬಯಲು ಪಾಠಶಾಲೆ, ಹೆಚ್ಚಿನ ಮಳೆ ಬಂದರಂತೂ ವಿದ್ಯಾರ್ಥಿಗಳು ಬಯಲಲ್ಲಿ ಕುಳಿತುಕೊಳ್ಳಲು ಆಗದೆ ಶಾಲೆಯಲ್ಲಿ ನಿಂತುಕೊಳ್ಳಲು ಸಾಧ್ಯವಾಗದೆ ಮನೆ ದಾರಿ ಹಿಡಿಯುವುದು ಅನಿವಾರ್ಯವಾಗಿದೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 130 ವಿದ್ಯಾರ್ಥಿಗಳು ಒಂದರಿಂದ ಐದನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐದು ತರಗತಿಗಳ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಟ್ಟಲಾಗಿರುವ ಮೂರು ಕಟ್ಟಡಗಳು ಮಳೆಬಂದರೆ ಸಾಕು ಕ್ಲಾಸ್‌ರೂಂನಲ್ಲಿ ಮಳೆ ನೀರು ತೊಟ್ಟಿಕ್ಕುತ್ತಿದ್ದು, ವಿದ್ಯಾರ್ಥಿಗಳು ಈ ಕೊಠಡಿಗಳಲ್ಲಿ ಕುಳಿತು ಪಾಠ ಪ್ರವಚನ ಕೇಳಲು ಸಾಧ್ಯವಿಲ್ಲ.
ಇದರಿಂದಾಗಿ ಶಾಲೆಯ ಮುಂದಿರುವ ದೇವಸ್ಥಾನದ ಆವರಣವೇ ಇಲ್ಲಿನ ವಿದ್ಯಾರ್ಥಿಗಳಿಗೆ ಬಯಲು ಪಾಠಶಾಲೆಯಾಗಿ ಪರಿವರ್ತನೆಯಾಗುತ್ತದೆ. ಹೆಚ್ಚಿನ ಮಳೆ ಬಂದರಂತೂ ಬಯಲಲ್ಲಿ ನಿಲ್ಲಲು ಆಗದೆ ಶಾಲೆಯ ಒಳಗೆ ಹೋಗಲು ಸಾಧ್ಯವಾಗದೆ ವಿದ್ಯಾರ್ಥಿಗಳು ಮನೆ ದಾರಿ ಹಿಡಿಯುವುದು ಮಾಮೂಲಾಗಿದೆ.
ವಿದ್ಯಾರ್ಥಿಗಳು ಕುಳಿತುಕೊಂಡು ಪಾಠ ಪ್ರವಚನ ಕೇಳಲು ಈ ಗ್ರಾಮದಲ್ಲಿ ಉತ್ತಮವಾದ ಸಮುದಾಯ ಭವನ ಇಲ್ಲದ ಕಾರಣ ಶಿಕ್ಷಕರು ಅನಿವಾರ್ಯವಾಗಿ ಬಯಲು ಜಾಗದಲ್ಲಿಯೇ ವಿದ್ಯಾರ್ಥಿಗಳನ್ನು ಕೂಡಿಸುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ ೦೫ ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಅನುದಾನ ಬಿಡುಗಡೆಯಾಗಿದೆ. ಆದರೆ ಸದ್ಯ ಇರುವ ಶಾಲೆಯ ಹಿಂದಿನ ಬಯಲು ಜಾಗ ತಮ್ಮದೆಂದು ಗ್ರಾಮಸ್ಥರೊಬ್ಬರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಹೊಸ ಕೊಠಡಿಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲವೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
ಸದ್ಯ ಇರುವ ಮೂರು ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಈ 5 ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲು ಅನುದಾನವಿದೆ, ಆಧರೆ 5 ಕೊಠಡಿಗಳ ನಿರ್ಮಾಣಕ್ಕೆ ಬೇಕಾದ ಖಾಲಿ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ತಮ್ಮ ಆಸ್ತಿಯೆಂದು ನ್ಯಾಯಾಲಯಕ್ಕೆ ಹೋಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತಮವಾದ ಸ್ಥಳದಲ್ಲಿ ಪಾಠ ಪ್ರವಚನ ಮಾಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ಬಿ.ಇ.ಒ. ಹೆಚ್.ಗರ‍್ರಪ್ಪ ತಿಳಿಸಿದ್ದಾರೆ.
ಕೊಠಡಿಗಳು ಶಿಥಿಲಾವಸ್ತೆಯಲ್ಲಿರುವುದರಿಂದ ಅನಿವಾರ್ಯವಾಗಿ ದೇವಸ್ಥಾನದ ಬಯಲು ಜಾಗದಲ್ಲಿ ಒಂದರಿಂದ ನಾಲ್ಕನೆ ತರಗತಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತಿದ್ದೇವೆ, 5ನೇ ತರಗತಿ ವಿದ್ಯಾರ್ಥಿಗಳನ್ನು ಸೋರುತ್ತಿರುವ ಕೊಠಡಿಯಲ್ಲಿಯೇ ನೀರು ಬೀಳದ ಜಾಗದಲ್ಲಿ ಕೂಡಿಸಿ ಪಾಠ ಮಾಡುತ್ತಿದ್ದೇವೆಂದು ಮುಖ್ಯಗುರು ದೊಡ್ಡಪ್ಪ ಕೋರೆ ತಿಳಿಸಿದ್ದಾರೆ.
ನಮ್ಮೂರಿನ ಶಾಲೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮ ಪಂಚಾಯಿತಿ ಅಧಿಕಾರಿಗಳ ವರೆಗೆ ಮಾಹಿತಿಯನ್ನು ನೀಡಿದ್ದೇವೆ. ಆದರೆ ಇಲ್ಲಿಯವರೆಗೂ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿಲ್ಲವೆಂದು ಗ್ರಾಮಸ್ಥ ಮಂಜುನಾಥ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.