ಶಾಲೆಗಳೇ ಕ್ವಾರಂಟೈನ್ ಕೇಂದ್ರಗಳು
Team Udayavani, May 17, 2020, 5:07 PM IST
ಸಿರುಗುಪ್ಪ: ತಾಲೂಕು ಕ್ರೀಡಾಂಗಣದಲ್ಲಿರುವ ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 4 ವಸತಿ ನಿಲಯಗಳು ಮತ್ತು ಕೆಂಚನಗುಡ್ಡ ಮುರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನಡವಿ ಮುರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳು ಈಗ ಕ್ವಾರಂಟೈನ್ ಕೇಂದ್ರಗಳಾಗಿವೆ.
ಸೀಮಾಂಧ್ರ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಸುಮಾರು 949 ಕಾರ್ಮಿಕರನ್ನು ಇಲ್ಲಿ 14 ದಿನ ಕ್ವಾರಂಟೈನ್ ಮಾಡಲಾಗಿದೆ. ಸೀಮಾಂಧ್ರ ಪ್ರದೇಶದಿಂದ ಬಂದ 204 ಜನರಿಗೆ ನಡಿವಿ ಗ್ರಾಮದ ವಸತಿ ಶಾಲೆ ಮತ್ತು ರಾಜ್ಯದ ವಿವಿಧ ಕಡೆಗಳಿಗೆ ವಲಸೆ ಹೋಗಿದ್ದ 745 ಕಾರ್ಮಿಕರಿಗೆ ನಗರದ ವಿವಿಧ ವಸತಿ ನಿಲಯಗಳು ಮತ್ತು ಕೆಂಚನಗುಡ್ಡ ಮುರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಬಳಸಿಕೊಳ್ಳಲಾಗಿದೆ. ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ 2 ಪಾಳಿಗಳಲ್ಲಿ ಕಾರ್ಮಿಕರ ಮೇಲೆ ನಿಗಾ ವಹಿಸುತ್ತಿದ್ದಾರೆ.
ಈಗಾಗಲೆ ವಸತಿ ನಿಲಯಗಳಲ್ಲಿರುವವರನ್ನು ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡಿ ಸುಮಾರು 600 ಜನರ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ವಸತಿ ಶಾಲೆ ಅಡುಗೆ ಸಿಬ್ಬಂದಿಯೇ ಊಟ ತಯಾರಿಸುತ್ತಿದ್ದಾರೆ. ಕ್ವಾರಂಟೈನ್ ಗಳಲ್ಲಿ ಇರುವವರಿಗೆ ಸಕಾಲಕ್ಕೆ ಊಟ, ಉಪಾಹಾರ ನೀಡಲಾಗುತ್ತಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ತಾಲೂಕು ನೋಡಲ್ ಅಧಿಕಾರಿ ಶ್ಯಾಮಪ್ಪ ತಿಳಿಸಿದ್ದಾರೆ.
204 ಜನ ಕ್ವಾರಂಟೈನ್ ಕೇಂದ್ರಕ್ಕೆ ತಾಲೂಕಿನಿಂದ ಕೂಲಿ ಕೆಲಸ ಅರಸಿ ಸೀಮಾಂಧ್ರದ ಗುಂಟೂರು ಜಿಲ್ಲೆಗೆ ವಲಸೆ ಹೋಗಿದ್ದ 190 ಕೂಲಿ ಕಾರ್ಮಿಕರನ್ನು ಕರೆತರಲಾಗಿದೆ. ಅವರೊಂದಿಗೆ ತೆಲೆಂಗಾಣದಿಂದ ಬಂದ 14ಜನರನ್ನು ನಡವಿ ಮುರಾರ್ಜಿ ಮತ್ತು ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.