ಕ್ವಾರಂಟೈನ್‌ನಿಂದ 470 ಜನರ ಬಿಡುಗಡೆ
ವಲಸೆ ಬಂದಂತಹ ಕಾರ್ಮಿಕರಿಗೆ ಬಿಡುಗಡೆ ಪ್ರಮಾಣ ಪತ್ರ ವಿತರಣೆ
Team Udayavani, May 22, 2020, 5:21 PM IST
ಸಾಂದರ್ಭಿಕ ಚಿತ್ರ
ಸಿರುಗುಪ್ಪ: ನಗರದ ಬಿ.ಸಿ.ಎಂ. ಇಲಾಖೆ ವಸತಿ ನಿಲಯದಲ್ಲಿ ಕಳೆದ 14 ದಿನಗಳಿಂದ ಕ್ವಾರಂಟೈನ್‌ನಲ್ಲಿದ್ದ ಅಂತರ್‌ರಾಜ್ಯಗಳಿಂದ ಬಂದಂತಹ ವಲಸೆ ಕಾರ್ಮಿಕರಿಗೆ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಬಿಡುಗಡೆ ಪ್ರಮಾಣ ಪತ್ರವನ್ನು ವಿತರಿಸಿ ಅವರನ್ನು ಅವರ ಗ್ರಾಮಗಳಿಗೆ ಕಳುಹಿಸಿಕೊಟ್ಟರು.
ನಂತರ ಮಾತನಾಡಿದ ತಹಶೀಲ್ದಾರ್ ರು ಇಲ್ಲಿಂದ ತಮ್ಮ ಗ್ರಾಮಗಳಿಗೆ ತೆರಳಿದ ನಂತರ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೂ ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡರೆ ಕೋವಿಡ್ ಸೊಂಕು ಬರದಂತೆ ತಡೆಯಬಹುದಾಗಿದೆ. ತಾಲೂಕಿನ ರಾರಾವಿ, ರಾವಿಹಾಳು, ಬಂಡ್ರಾಳು, ಚಿಕ್ಕಬಳ್ಳಾರಿ, ಕೆ.ಬೆಳಗಲ್ಲು, ದೇಶನೂರು ಸೇರಿದಂತೆ ವಿವಿಧ ಗ್ರಾಮಗಳಿಂದ ತೆಲಂಗಾಣ ಮತ್ತು ಸೀಮಾಂದ್ರ ಪ್ರದೇಶಗಳಾದ ಗುಂಟೂರು, ಪ್ರಕಾಶಂ, ಕರ್ನೂಲ್ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೆಣಸಿನಕಾಯಿ ಕೊಯ್ಲು ಮಾಡಲು ವಲಸೆ ಹೋಗಿದ್ದ ಕಾರ್ಮಿಕರು ಕೋವಿಡ್ ಹರಡುವ ಭೀತಿಯಿಂದಾಗಿ ತಾಲೂಕಿನ ತಮ್ಮ ಗ್ರಾಮಗಳಿಗೆ ಆಗಮಿಸಿದ 1043 ಜನರನ್ನು ತಾಲೂಕು ಆಡಳಿತ ವತಿಯಿಂದ ನಗರದ 5 ವಸತಿ ನಿಲಯಗಳಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿ ಆರೋಗ್ಯ ಇಲಾಖೆ ವತಿಯಿಂದ ಅವರ ಆರೋಗ್ಯ ತಪಾಸಣೆ ನಡೆಸಿ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿದೆ.
ಕೋವಿಡ್ ನೆಗೆಟಿವ್ ಕಂಡುಬಂದಂಥ 470 ಜನರ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಅವರನ್ನು ಬೀಳ್ಕೊಡಲಾಯಿತು. ಫೀವರ್ ಕ್ಲಿನಿಕ್‌ನ ಡಾ| ಕೊಟ್ರೇಶ್ ಕ್ವಾರಂಟೈನ್ ಗೆ ಒಳಪಟ್ಟವರಿಗೆ ಕೋವಿಡ್ ಕುರಿತು ಮುನ್ನೆಚ್ಚರಿಕೆ ಸಲಹೆ ಮತ್ತು ಮಾಹಿತಿಗಳನ್ನು ನೀಡಿದರು. ಡಾ| ಶಶಿಕುಮಾರ್, ಡಾ| ಟಿ. ಮಲ್ಲಿಕಾರ್ಜುನರೆಡ್ಡಿ, ಡಾ| ಚನ್ನವೀರ, ಡಾ| ಶ್ರವಣ್, ತಾಲೂಕು ನೋಡಲ್ ಅಧಿಕಾರಿ ಶ್ಯಾಮಪ್ಪ, ಗ್ರೇಡ್-2 ತಹಶೀಲ್ದಾರ್ ವಿಶ್ವನಾಥ, ಹಿರಿಯ ಆರೋಗ್ಯ ಸಹಾಯಕ ಗಿರೀಶ್‌ಕುಮಾರ್, ಕಂದಾಯ ನಿರೀಕ್ಷಕ ಮಹಮ್ಮದ್ ಸಾ ಕ್‌ಬಾಷ, ಗ್ರಾಮಲೆಕ್ಕಾಧಿಕಾರಿಗಳಾದ ವಿರುಪಾಕ್ಷಪ್ಪ, ಪರಮೇಶ್ವರ, ರಾಮಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.