ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಆಗ್ರಹ
Team Udayavani, Apr 17, 2020, 5:53 PM IST
ಸಿರುಗುಪ್ಪ: ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ರೈತ ಸಂಘ-ಹಸಿರು ಸೇನೆ ಪದಾಧಿಕಾರಿಗಳು ಪಿಡಿಒಗೆ ಮನವಿ ಸಲ್ಲಿಸಿದರು.
ಸಿರುಗುಪ್ಪ: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿ ಪದಾಧಿಕಾರಿಗಳು ಪಿಡಿಒ ಆದೆಪ್ಪರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮುಖಂಡ ಆಲಂಬಾಷ ಮಾತನಾಡಿ, ರಾಜ್ಯ ಸರ್ಕಾರವು ದೆಹಲಿ ಸರ್ಕಾರದ ಮಾದರಿಯಲ್ಲಿ ಲಾಕ್‌ಡೌನ್ ಮುಗಿಯುವವರೆಗೂ ಅಸಂಘಟಿತ ಕಾರ್ಮಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಸಾರ್ವಜನಿಕರ ಶೂನ್ಯ ಖಾತೆ, ಉದ್ಯೋಗ ಖಾತ್ರಿ ಸೇರಿದಂತೆ ಉಳಿತಾಯ ಖಾತೆಗಳಿಗೆ ಮಾಸಿಕ 6 ಸಾವಿರ ರೂ. ಜಮೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಒಂದು ದಿನದ ಕೂಲಿಯನ್ನು 600 ರೂ.ಗೆ ಹೆಚ್ಚಿಸಬೇಕು. ಗ್ರಾಮದ ರಸ್ತೆ ಹಾಗೂ ಚರಂಡಿಗಳನ್ನು ನಿಯಮಿತವಾಗಿ ಸ್ವತ್ಛಗೊಳಿಸಬೇಕು ಎಂದು ಒತ್ತಾಯಿಸಿದರು.
ಪದಾಧಿಕಾರಿಗಳಾದ ಶೇಕಣ್ಣ, ಬಸಪ್ಪ, ವಿರೇಶ, ಮಲ್ಲಯ್ಯ, ಮಾರೇಶ, ರಾಮರಾಜು, ದಾಸಪ್ಪ, ಪಕ್ಕೀರಪ್ಪ, ನಿಜಲಿಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.