ಕಳಪೆ ಬೀಜ ಮಾರಾಟಗಾರರ ಮೇಲೆ ಕ್ರಮಕ್ಕೆ ಆಗ್ರಹ
Team Udayavani, Jun 7, 2020, 5:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಿರುಗುಪ್ಪ: ಕಳಪೆ ಬಿತ್ತನೆ ಬೀಜ ಮತ್ತು ಕಳಪೆ ಕೀಟನಾಶಕ ಔಷಧಗಳನ್ನು ಮಾರಾಟ ಮಾಡುವ ಮಾರಾಟಗಾರರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಮುಖಂಡ ಜೆ. ಸಿದ್ದರಾಮನಗೌಡ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಬೆಳೆಗಳನ್ನು ಬೆಳೆಯಲು ವಿವಿಧ ತಳಿಯ ಬೀಜಗಳನ್ನು ಖರೀದಿಸುತ್ತಿದ್ದು, ಕೆಲವರು ರೈತರಿಗೆ ಕಳಪೆ ಗುಣ ಮಟ್ಟದ ಬೀಜಗಳನ್ನು, ಕ್ರಿಮಿನಾಶಕಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಇಂತಹ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು, ತಾಲೂಕಿನ ವಿವಿಧ ಅಕ್ಕಿಗಿರಣಿಗಳಲ್ಲಿ ಸರ್ಕಾರ ಸೂಚಿಸಿರುವ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿಸುತ್ತಿಲ್ಲ, ಖರೀದಿ ಸಮಯದಲ್ಲಿ ಪ್ರತಿಯೊಂದು ಚೀಲಕ್ಕೆ 2 ಕೆಜಿ. ಭತ್ತವನ್ನು ಬಾಜ್ ತೆಗೆಯುತ್ತಿರುವುದರಿಂದ ರೈತರಿಗೆ ನಷ್ಟವಾಗುತ್ತಿದೆ. ಆದ್ದರಿಂದ ಬಾಜ್ ತೆಗೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರೈತ ಮುಖಂಡರಾದ ಮಲ್ಲನಗೌಡ, ಶರಣಬಸವನಗೌಡ, ಎಂ.ವಿಜಯಕುಮಾರ್, ಮರೇಗೌಡ, ಚಂದ್ರಪ್ಪ, ಕುಮಾರಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.