ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮಾತನಾಡಿದ್ದು ತಪ್ಪು; ಶಾಸಕ ಸೋಮಶೇಖರರೆಡ್ಡಿ
ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಿದ ಸೋಮಶೇಖರ ರೆಡ್ಡಿ
Team Udayavani, Feb 29, 2020, 7:39 PM IST
ಬಳ್ಳಾರಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಯತ್ನಾಳ್ ಹೇಳಿಕೆಯನ್ನು ಶಾಸಕ ಜಿ.ಸೋಮಶೇಖರ ರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.
ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ನಾಯಕರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ವಿರುದ್ಧ ಹೇಳಿಕೆ ನೀಡಿರುವುದು ಸರಿಯಾಗಿದೆ. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡ ಶಾಸಕ ಜಿ.ಸೋಮಶೇಖರರೆಡ್ಡಿ, ದೊರೆಸ್ವಾಮಿಯವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳುತ್ತಾರೆ. ಅಂದ ಮೇಲೆ ದೇಶಭಕ್ತಿ ಸಹ ಅವರಲ್ಲಿ ಇರಬೇಕಲ್ಲಾ? ಎಂದು ಪ್ರಶ್ನಿಸಿದರು. ದೇಶದ ಏಕತೆ, ಐಕ್ಯತೆಯನ್ನು ಕಾಪಾಡಲು ಅವರೂ ಮುಂದಾಗಬೇಕು. ಅದನ್ನು ಬಿಟ್ಟು, ಸಿಎಎ, ಎನ್ಆರ್ಸಿ, ಎನ್ಪಿಆರ್ಗಳನ್ನು ವಿರೋಧಿಸುವುದು ತಪ್ಪು ಎಂದು ಟೀಕಿಸಿದರು.
ಸಿಎಎ ಜಾರಿಗೆ ತಂದಿದ್ದು, ನಮ್ಮ ದೇಶದ ಜನರಿಗೆ ನೋಂದಣಿ ಮಾಡಿಸಿಕೊಂಡು ಬೇರೆ ದೇಶದವರಿಗೆ ವಾಪಸ್ ಕಳುಹಿಸುವ ಉದ್ದೇಶದಿಂದ. ಇಂತಹುದ್ದಕ್ಕೆ ವಿರೋಧ ವ್ಯಕ್ತಪಡಿಸುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಮಾಯಕರನ್ನು ಪ್ರಚೋದಿಸಿ ಪ್ರತಿಭಟಿಸುವಂತೆ ಮಾಡುತ್ತಿದೆ. ಇದು ಸರಿಯಲ್ಲ ಎಂದರು.
ದೆಹಲಿ ಗಲಭೆ ಘಟನೆ ಬಹಳ ನೋವಾಗುತ್ತೆ. ಈ ರೀತಿ ನಡೆಯಬಾರದಿತ್ತು ಎಂದ ಶಾಸಕ ಸೋಮಶೇಖರರೆಡ್ಡಿ, ಪಾಕಿಸ್ತಾನ ಪರ ಘೋಷಣೆ ಕೂಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರಚೋದನೆ ನೀಡುವವರಿಗೆ, ಪಾಕಿಸ್ಥಾನ್ ಪರ ಘೋಷಣೆ ಕೂಗುವ ದೇಶದ್ರೋಹಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.