ಆಸ್ಪತ್ರೆಗಳಲ್ಲಿ ಸಚಿವ ರಾಮುಲು ವಾಸ್ತವ್ಯ: 15 ದಿನಗಳಲ್ಲಿ ಸಮಸ್ಯೆ ಪರಿಹರಿಸವಂತೆ ಗಡುವು
Team Udayavani, Sep 15, 2019, 11:37 AM IST
ಬಳ್ಳಾರಿ: ಆಸ್ಪತ್ರೆಗಳಲ್ಲಿನ ಸಮಸ್ಯೆಗಳನ್ನು ಖುದ್ದು ಆಲಿಸುವ ಸಲುವಾಗಿ ಶೀಘ್ರದಲ್ಲೇ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಇವುಗಳನ್ನು ಖುದ್ದು ಅರಿಯುವ ಸಲುವಾಗಿ ಶೀಘ್ರದಲ್ಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಾಗುವುದು. ಮೊದಲು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ, ನಂತರ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಾಗುವುದು. ಬಳಿಕ ಅಲ್ಲಿನ ಸಮಸ್ಯೆಗಳ ಪರಿಹಸಲು ಸಂಬಂಧಪಟ್ಟ ಆಸ್ಪತ್ರೆಯ ಆಡಳಿತಾಧಿಕಾರಿಗಳಿಗೆ ಗಡುವು ನೀಡಲಾಗುವುದು. 15 ದಿನಗಳ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಾಕೀತು ಮಾಡಲಾಗುವುದು ಎಂದರು.
ಕಲಬುರ್ಗಿಯ ಆಸ್ಪತ್ರೆಯೊಂದರಲ್ಲಿನ ಡಯಾಲಿಸಿಸ್ ಘಟಕದಲ್ಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವರದಿ ಕೇಳಿದ್ದೇನೆ. ಅದರಲ್ಲಿ ಅಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್ ಅವರ ಕರ್ತವ್ಯ ಲೋಪ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆ ಸೇವೆ ನೀಡುವ ವಿಚಾರದಲ್ಲಿ ತಾಂತ್ರಿಕ ತೊಂದರೆ ನೆಪ ಹೇಳಬಾರದು. ಸೇವೆ ಒದಗಿಸುವಲ್ಲಿ ಏನೇ ಲೋಪ ಇದ್ದರೂ, ಅದನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ವೈದ್ಯಾಧಿಕಾರಿಗಳದ್ದೇ ಆಗಿರುತ್ತದೆ ಎಂದು ಎಚ್ಚರಿಸಿದರು.
ಇನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರದಲ್ಲೇ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಜತೆ ಚರ್ಚೆ: ಐತಿಹಾಸಿಕ ಹಿನ್ನೆಲೆಯುಳ್ಳ ಹಂಪಿ ಉತ್ಸವವನ್ನು ಪ್ರಸಕ್ತ ವರ್ಷ ಆಚರಣೆಗೆ ಸಂಬಂಧಿಸಿದಂತೆ ಕೂಡಲೇ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಶೀಘ್ರದಲ್ಲೇ ಅಧಿಕಾರಿಗಳ, ಜಿಲ್ಲೆಯ ಶಾಸಕರ ಸಭೆ ಕರೆದು ದಿನಾಂಕ ನಿಗದಿಪಡಿಸಲಾಗುವುದು. ಅಲ್ಲದೇ ಮೈಸೂರು ದಸರಾ ಹಬ್ಬದಂತೆ ಹಂಪಿ ಉತ್ಸವಕ್ಕೂ ನಿರ್ದಿಷ್ಟ ದಿನಾಂಕವನ್ನು ನಿಗದಿ ಪಡಿಸಲು ಪ್ರಯತ್ನಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು