ಕೋವಿಡ್ ಸವಾಲಿನ ಮಧ್ಯೆ ಪರೀಕ್ಷೆಗೆ ಸಿದ್ಧತೆ


Team Udayavani, Jul 17, 2021, 4:46 PM IST

ಕೋವಿಡ್ ಸವಾಲಿನ ಮಧ್ಯೆ ಪರೀಕ್ಷೆಗೆ ಸಿದ್ಧತೆ

ಕೂಡ್ಲಿಗಿ: ಕೋವಿಡ್‌ ಸವಾಲಿನ ಮಧ್ಯೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸರ್ಕಾರ ಇಲಾಖೆಗೆ ನೀಡಿರುವ ಸೂಚನೆ ಮತ್ತು ಆದೇಶದಂತೆ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು 24ಕೇಂದ್ರಗಳಲ್ಲಿ 4,362 ವಿದ್ಯಾರ್ಥಿಗಳು ಪರೀಕ್ಷೆಬರೆಯಲ್ಲಿದ್ದಾರೆ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮವಾಗದಂತೆ ಅತ್ಯಂತ ಜಾಗರೂಕತೆಯಿಂದ ಇಲಾಖೆ ಮಾರ್ಗ ಸೂಚಿಯಂತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಬಿಇಒ ಬಿ. ಉಮಾದೇವಿ ತಿಳಿಸಿದ್ದಾರೆ.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಮತ್ತು ಖಾಸಗಿ ಶಾಲೆಗಳಲ್ಲಿ ಪರೀಕ್ಷೆನಡೆಯಲ್ಲಿದ್ದು, ಸರ್ಕಾರ ದೇಶದಂತೆ ರಾಜ್ಯದಲ್ಲಿ ವಿಭಿನ್ನ ಮಾದರಿಯಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಆರು ಪರೀಕ್ಷೆಗಳಬದಲಾಗಿ ಜು. 19 ಮತ್ತು 22 ರಂದು ಕೇವಲ ಎರಡು ಪರೀಕ್ಷೆಗಳು ನಡೆಯಲಿವೆ.

ತಪಾಸಣೆ ಕಡ್ಡಾಯ: ಪರೀಕ್ಷೆ ಪ್ರಾರಂಭವಾಗುವ ಹಿಂದಿನ ದಿನ ಮತ್ತು ಪರೀಕ್ಷೆ ಮುಗಿದ ನಂತರ ಪ್ರತಿ ಕೊನೆಗೆ ಸ್ಯಾನಿಟೈಸರ್‌ ಸಿಂಪಡಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ10.30ಕ್ಕೆ ಪ್ರಾರಂಭವಾಗುತ್ತದೆ. ಆದರೆ ವಿದ್ಯಾರ್ಥಿಗಳು ತಮ್ಮ ಪರೀಕಾ ಕೊಠಡಿಗೆ ಕಡ್ಡಾಯವಾಗಿ ಬೆಳಗ್ಗೆ 8.30ಕ್ಕೆ ಹಾಜರಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್‌ ಸ್ಕ್ಯಾನರ್‌ ಮತ್ತು ಆಕ್ಸಿಮೀಟರ್‌ ಮೂಲಕ ತಪಾಸಣೆ ಮಾಡಿ ಕೇಂದ್ರಕ್ಕೆ ಕಳುಹಿಸಲಾಗುವುದು.

ಪರೀಕ್ಷಾ ತಯಾರಿ ಸಿದ್ಧತೆ: ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ಪ್ರತಿ ಡೆಸ್ಕ್ಗೆ ಒಬ್ಬರಂತೆ ತಲಾ 12 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಪರೀಕ್ಷೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಲಸಿಕೆ ಕನಿಷ್ಠ ಒಂದು ಡೋಸ್‌ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸ್ವತ್ಛತೆಗೆ ಆದ್ಯತೆ. ಪ್ರತಿಯೊಂದು ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ಸ್ಯಾನಿಟೈಸರ್‌ ಮಾಡಿಸಲಾಗುವುದು.

ಆರೋಗ್ಯ ತಪಾಸಣೆ ಕೌಂಟರ್‌ ಥರ್ಮಲ್‌ ಸ್ಕ್ಯಾನರ್‌, ಪಲ್ಸ್‌ ಆಕ್ಸಿಮೀಟರ್‌, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ, ಕೆಮ್ಮು, ನೆಗಡಿ, ಜ್ವರದಂಥ ಲಕ್ಷಣಗಳು ಕಂಡುಬಂದರೆ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಒಂದು ಕೊಠಡಿಗಳು ಮೀಸಲು ಇರಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸ್ಕಾಡ್ಸ-24 ಮಂದಿ, ಕಸ್ಟಡೀಯನ್‌ ಕೋ-24, ರೂಟ್‌ ಆಫೀಸರ್‌-6, ಮೊಬೈಲ್‌ ಸ್ಕಾಡ್ಸ್‌, ಸಿಆರ್‌ಪಿ ಮತ್ತು ಬಿಆರ್‌ಪಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಭಾರತ ಸ್ಕೌಟ್ಸ್‌-ಗೈಡ್ಸ್‌ ವತಿಯಿಂದ ಉಚಿತ ಮಾಸ್ಕ್ ವಿತರಣೆ. ಕೇಂದ್ರಕ್ಕೆ 2 ಪೊಲೀಸ್‌ ಸಿಬಂದಿ ನಿಯೋಜಿಸಲಾಗಿದೆ. 24 ಮಂದಿ ದೈಹಿಕ ಶಿಕ್ಷಕರ ಬಳಕೆ ಮಾಡಿಕೊಳ್ಳಲಾಗುತ್ತಿದೆ. 101 ರಿಪಿಟರ್‌ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ. ಪೋಷಕರೇ ಮಕ್ಕಳನ್ನು ಪರೀಕ್ಷೆ ಕರೆದುಕೊಂಡು ಬರಬೇಕು. ಪರೀಕ್ಷೆ ಮುಗಿದ ನಂತರ ಕರೆದುಕೊಂಡು ಹೋಗಬೇಕು. ಹೋಬಳಿ ಮಟ್ಟದಲ್ಲಿ ಬರುವ ಕೇಂದ್ರಗಳ ಶಾಲೆಗೆ ಸ್ಯಾನಿಟೈಸರ್‌ ಮಾಡಿಸಲು ಪಿಡಿಒ ಸೂಚನೆ ನೀಡಿದ್ದೇನೆ. ಒಟ್ಟಾರೆ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ನಡೆಸಲು ಕ್ರಮವಹಿಸಲಾಗಿದೆ. ಪರೀಕ್ಷೆಗೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಧ್ವನಿವರ್ಧಕ ಬಳಕೆ ಮಾಡಲಾಗುತ್ತದೆ. ಸಹಾಯವಾಣಿ ಇರುತ್ತೆ, ಫೋನ್‌ ಕರೆ ಮಾಡಿ ವಿಷಯವನ್ನು ತಿಳಿದುಕೊಳ್ಳಲು ಸಾಧ್ಯ.ಬಿ. ಉಮಾದೇವಿ, ಬಿಇಒ ಕೂಡ್ಲಿಗಿ

ಜಿಲ್ಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರದ ಬಳಿ 144 ಸೆಕ್ಸನ್‌ ಜಾರಿಗೊಳಿಸಲಾಗಿದ್ದು, ಎಲ್ಲ ತಾಲೂಕುಗಳಲ್ಲಿ ಕಟ್ಟೇಚ್ಚರವಹಿಸಲಾಗಿದೆ. ಜಿಲ್ಲಾಧಿಕಾರಿಗಳು ಪರೀಕ್ಷೆಗೆ ಸಂಬಂಧಿಸಿದಂತೆ ಇಲಾಖೆಗೆ ಅನುಕೂಲದ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯ 222 ಕೇಂದ್ರಗಳು, ಹಾಗೂ 42,989 ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಕೇಂದ್ರ ವ್ಯವಸ್ಥೆ ಮಾಡಿಸಲಾಗಿದೆ. ಒಂದು ಕೊಠಡಿಗೆ 12 ಮಂದಿ ಮಾತ್ರ ಸೀಮಿತಗೊಳಿಸಲಾಗಿದೆ. ಸಿ.ರಾಮಪ್ಪ, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬಳ್ಳಾರಿ

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.