ನಾಳೆಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಸಕಲ ಸಿದ್ಧತೆ
Team Udayavani, Sep 20, 2020, 6:24 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಸೆ. 21ರಿಂದ ಸೆ. 28ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ಪರೀಕ್ಷೆಗಳು ಅತ್ಯಂತ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ 7999 ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಎಲ್ಲ ಕೇಂದ್ರಗಳಿಗೆ ಅಧಿಧೀಕ್ಷಕರು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, ಕಸ್ಟೋಡಿಯನ್ ಹಾಗೂ ಮೊಬೈಲ್ ಸ್ವಾಧಿಧೀನಾಧಿಕಾರಿಗಳನ್ನು ನೇಮಿಸಲಾಗಿದೆ. ಹಾಗೆಯೇ ಅಪರ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಅವರು ಒಂದು ಬಾರಿ ಪರೀಕ್ಷಾ ಸಿಬ್ಬಂದಿ ಸಭೆಯನ್ನು ನಡೆಸಿ ಕೋವಿಡ್-19 ಎಸ್‌ಓಪಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲು ಜಿಲ್ಲಾ ಎಲ್ಲ ಮುಖ್ಯ ಅಧಿಧೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.
ಕೋವಿಡ್-19 ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರಲು ಆಂಬ್ಯುಲೆನ್ಸ್‌ನ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಪಾಲಕರೊಂದಿಗೆ ಮುಖ್ಯಗುರುಗಳು ಮತ್ತು ಶಿಕ್ಷಕರು ದೂರವಾಣಿ ಮೂಲಕ ಹಾಗೂ ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಲಾಗಿ ಕೋವಿಡ್ -19 ಹಿನ್ನೆಲೆಯಲ್ಲಿ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಜಿಲ್ಲಾಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸ್ಯಾನಿಟೈಸ್ ಮಾಡಲು ಸಂಬಂಧಿ ಸಿದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಪುರಸಭೆ, ನಗರಸಭೆ ಸಿಬ್ಬಂದಿಯವರಿಗೆ ಸ್ವತ್ಛತೆ ಮಾಡಿಕೊಡಲು ಆದೇಶಿಸಿರುತ್ತಾರೆ. ಪ್ರತಿ ಪರೀûಾ ಕೇಂದ್ರಕ್ಕೆ ಇಲಾಖೆಯಿಂದ 200 ಮಕ್ಕಳಿಗೆ ಒಂದರಂತೆ ಒಟ್ಟು 52 ಥರ್ಮೋಮೀಟರ್ ಗಳನ್ನು ಹಾಗೂ ಸ್ಯಾನಿಟೈಸರ್‌ನ್ನು ಪೂರೈಕೆ ಮಾಡಿರುತ್ತಾರೆ. 18 ರಿಂದ 20 ಮಕ್ಕಳು ಮೂರು ಅಡಿ ದೈಹಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಕೊಠಡಿಗಳನ್ನು ಸಜ್ಜುಗೊಳಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿ ಪ್ರತಿ ಕೇಂದ್ರದಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚುರಪಡಿಸಲಾಗುತ್ತಿದೆ ಹಾಗೂ ತಾಲೂಕಿಗೆ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ವಿಡಿಯೋ ಮಾಡಿಸಿ ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅದರಂತೆ ಅನುಸರಿಸಲು ವಾಟ್ಸ್‌ಆಪ್ ಗ್ರೂಪ್‌ಗ್ಳಲ್ಲಿ ಪ್ರಸಾರ ಮಾಡಲಾಗಿದೆ. ಜಿಲ್ಲೆ ಮತ್ತು ತಾಲೂಕಿನಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗದ ವೇಳೆಯಲ್ಲಿ ಮಕ್ಕಳು, ಪಾಲಕರು ಮತ್ತು ಸಿಬ್ಬಂದಿ ಅವರು ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂಬುದರ ಕುರಿತು ಕರಪತ್ರಗಳನ್ನು ಹಾಗೂ ಪೋಸ್ಟರ್‌ಗಳನ್ನು ಬಿತ್ತರಿಸಿ ಪ್ರಚುರಪಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಜಿಲ್ಲಾ ಹಂತದಲ್ಲಿ ವಿಶೇಷ ವೀಕ್ಷಕರ ರೀತಿಯಲ್ಲಿ ತಾಲೂಕಿನ ಹಂತದಲ್ಲಿಯೂ ತ್ರಿಸದಸ್ಯ ಜಾಗೃತದಳ ನೇಮಕ ಮಾಡಲಾಗಿದೆ. ಪರೀಕ್ಷೆಗೆ ನಿಯೋಜಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಗ್ಗೆ 8.30ಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಝರಾಕ್ಸ್ ಸೆಂಟರ್‌ಗಳು, ಸೈಬರ್ ಕೆಫೆಗಳನ್ನು ಮುಚ್ಚಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. 26 ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕೌಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯವರು ಮತ್ತು ಆಶಾ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲು ಕ್ರಮ ವಹಿಸಲಾಗಿದೆ ಎಂದಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕ ವತಿಯಿಂದ 7999 ಸಾವಿರ ಮಾಸ್ಕ್ಗಳನ್ನು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಲಾ ಎರಡರಂತೆ ವಿತರಿಸಲಾಗಿದೆ. ಪೋಲಿಸ್ ಇಲಾಖೆ ವತಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರದ ಒಳಗೆ/ಹೊರಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುಗಮವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ. ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು 11 ಮಾರ್ಗಗಳನ್ನು ರಚಿಸಿ, ಸೂಕ್ತ ಬೆಂಗಾವಲು ಪೊಲೀಸ್ ಪಡೆಯನ್ನು ಹಾಗೂ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಸಿಸಿಟಿವಿ ಅಳವಡಿಸಿಲಾಗಿದೆ. ಹಾಗೆಯೇ ದಳ ಮತ್ತು ಸ್ಥಾನಿಕ ಜಾಗೃತ ದಳ ಕಸ್ಟೋಡಿಯನ್ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.