ರಾಜ್ಯಕ್ಕೆ ಬೇಕಿದೆ ಯೋಗಿ ಆಡಳಿತ ಮಾದರಿ ಸರಕಾರ: ಮುತಾಲಿಕ್
ಬಿಜೆಪಿಯನ್ನು ಹಿಂದೂ ಸಂಘಟನೆಗಳು ಬೆಂಬಲಿಸಿ ತಪ್ಪು ಮಾಡಿವೆ
Team Udayavani, Jul 14, 2022, 7:53 PM IST
ಹೊಸಪೇಟೆ: ಹಿಂದೂ ಸಮಾಜ ರಕ್ಷಣೆ ಮತ್ತು ದೇಶದ ಸುರಕ್ಷತೆಗಾಗಿ ರಾಜ್ಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತ ಮಾದರಿ ಸರ್ಕಾರ ಅಗತ್ಯವಿದೆ. ಇದಕ್ಕಾಗಿ 25 ಹಿಂದೂ ಮಠಾಧೀಶರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗುರುವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಹಿಂದುಪರ ಸಂಘಟನೆಗಳು ಬೆಂಬಲಿಸಿ ತಪ್ಪು ಮಾಡಿವೆ. ಬಿಜೆಪಿ ಸರಕಾರದ ನಡೆಗಳಿಂದ ರಾಜ್ಯದ ಹಲವು ಮಠಾಧೀಶರು ಬೇಸರವಾಗಿದ್ದಾರೆ. ಮುಂದಿನ ದಿನಗಳಲ್ಲಿ 25 ಕ್ಕೂ ಹೆಚ್ಚು ಮಠಾಧೀಶರೇ ಚುನಾವಣೆಗೆ ಸ್ಪರ್ಧಿಸಿದರೂ ಅಚ್ಚರಿ ಪಡುವಂತಿಲ್ಲ ಎಂದರು.
ದೇಶದಲ್ಲಿಯೇ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ದನಗಳ ಸಂತೆಗೆ ಹೆಸರುವಾಸಿಯಾಗಿದೆ. ಸಾಕಷ್ಟು ಪ್ರಮಾಣದಲ್ಲಿ ದನಗಳು ಕಸಾಯಿ ಖಾನೆಗೆ ಹೋಗುತ್ತಿವೆ. ದನದ ಮಾಂಸ ರಫ್ತು ಆಗುತ್ತಿದೆ. ಜೊತೆಗೆ ರಾಜ್ಯದಲ್ಲಿಯೂ ಹಲವು ಭಾಗಗಳಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದೆ. ದನಗಳನ್ನು ಪ್ರಯಾಣಿಕರು ತೆರಳುವ ವಾಹನದಲ್ಲಿ ಸಾಗಿಸಲಾಗುತ್ತಿವೆ ಎಂದು ರಾಜ್ಯ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಹಿಂದೂಗಳ ಭಾವನೆ ಜೊತೆಗೆ ಆಟವಾಡುತ್ತಿದೆ. ರಾಜ್ಯದಲ್ಲಿ ಅನಧಿಕೃತವಾಗಿ 3 ಸಾವಿರಕ್ಕೂ ಅಧಿಕ ಕಸಾಯಿ ಖಾನೆಗಳಿವೆ. ಅವುಗಳನ್ನು ಬುಲ್ಡೋಜರ್‌ನಿಂದ ತೆರವುಗೊಳಿಸಬೇಕು, ಇಲ್ಲದಿದ್ದರೆ ಆ ಕೆಲಸ ನಾವು ಮಾಡಬೇಕಾಗುತ್ತದೆ ಎಂದು ಹರಿಹಾಯ್ದರು.
ಶ್ರೀರಾಮಸೇನೆ ಮುಖಂಡರಾದ ಸಂಜೀವ ಮರಡಿ, ಜಗದೀಶ್ ಕಮತಗಿ, ರವಿ ಬಡಿಗೇರ್, ಸೂರು ಬಂಗಾರು, ಅನೂಪ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.