ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಸರಿಸಿ
Team Udayavani, Jun 25, 2020, 9:28 AM IST
ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಮಾರ್ಗಸೂಚಿಗಳು ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಜಿಂದಾಲ್ ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಮತ್ತು ಅನಗತ್ಯ ಅಪಸ್ವರ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಆನಂದಸಿಂಗ್ ಜಿಂದಾಲ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆ-ಸ್ವಾನ್ ಮೂಲಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರೊಂದಿಗೆ ವೀಡಿಯೋ ಸಂವಾದದ ಮೂಲಕ ಚರ್ಚೆ ನಡೆಸುತ್ತಿದ್ದಾಗ ಅವರು ಮಾತನಾಡಿದರು. ಜಿಂದಾಲ್ ಕಾರ್ಖಾನೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಬೇಕು. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಜೇಶನ್, ಸೋಂಕು ದೃಢಪಟ್ಟಲ್ಲಿ ಅನುಸರಿಸುವ ಹಾಗೂ ಯಾವುದಾದರೂ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಗುರುತಿಸಿ ಅವರನ್ನು ಪ್ರತ್ಯೇಕಿಸಿ ಸಂಬಳ ಸಹಿತ ರಜೆ ನೀಡುವುದು ಸೇರಿದಂತೆ ಎಸ್ ಒಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರುತಿಳಿಸಿದಂತೆ ಜೇಮ್‌ಶೇಡ್‌ಪುರದ ಟಾಟಾ ಸ್ಟೀಲ್‌ನಲ್ಲಿ ಕೋವಿಡ್ ಸೋಂಕು ವ್ಯಾಪಕವಾದ ಸಂದರ್ಭದಲ್ಲಿ ಅನುಸರಿಸಿದ ನಿಯಮಾವಳಿಗಳನ್ನೇ ಇಲ್ಲಿ ಅನುಸರಿಸುವುದರ ಮೂಲಕ ಅದರ ಕಡಿವಾಣಕ್ಕೆ ಮುಂದಾಗಬೇಕು ಎಂದರು.
ಸಿಬ್ಬಂದಿ ಪ್ರತ್ಯೇಕ ಪಟ್ಟಿ ಸಿದ್ಧಪಡಿಸಿ: ಜಿಂದಾಲ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಆರೋಗ್ಯ ಸಮೀಕ್ಷೆಯನ್ನು ಕೂಡಲೇ ನಡೆಸಬೇಕು. ಸಮೀಕ್ಷೆ ಸಂದರ್ಭದಲ್ಲಿ ಉಸಿರಾಟದ ಸಮಸ್ಯೆ, ಐಎಲ್‌ಐ ಪ್ರಕರಣ, ಕೋಮೋಹರಿಬಿಡಿಟಿಯಂತ ಲಕ್ಷಣಗಳು ಹಾಗೂ 60 ವರ್ಷಕ್ಕಿಂತ ಹೆಚ್ಚಿನ ವಯೋಮಿತಿ ಹೆಚ್ಚಳ ಇರುವವರನ್ನು ಗುರುತಿಸಿ ಅವರಿಗೆ ವಿಶೇಷ ನಿಗಾವಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೂಚಿಸಿದರು. ಸಿಸಿಟಿವಿ ಅಳವಡಿಕೆ: ಜಿಂದಾಲ್‌ನ ಎಲ್ಲ 7ಗೇಟ್‌ಗಳನ್ನು ಬಂದ್ ಮಾಡಲಾಗಿದ್ದು, ಈ ಗೇಟ್‌ಗಳ ಬಳಿ ಪ್ರತಿ ಶಿಫ್ಟ್ ಗೆ 5 ಪೊಲೀಸ್ ಸಿಬ್ಬಂದಿಯಂತೆ ಮೂರು ಶಿಪ್ಟ್ನಡಿ ಕೆಲಸ ನಿರ್ವಹಿಸಲು ನಿಯೋಜಿಸಲಾಗಿದೆ. ಚಲನವಲನ ನಿಗಾಗೆ ಎಲ್ಲ ಗೇಟ್‌ಬಳಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಎಸ್ಪಿ ಸಿ.ಕೆ. ಬಾಬಾ ಹೇಳಿದರು.
ಇದರ ಸಂಪೂರ್ಣ ನಿರ್ವಹಣೆಗಾಗಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು. ಜಿಂದಾಲ್‌ನಲ್ಲಿ ನಾನ್‌ಕೋವಿಡ್ ಪ್ರಕರಣಗಳ ತಪಾಸಣೆಗಾಗಿ 2 ಮೊಬೈಲ್ ಮೆಡಿಕಲ್ ಯೂನಿಟ್‌ಗಳನ್ನು ಅಲ್ಲಿಯೇ ಇಡಲಾಗಿದೆ ಎಂದು ಡಿಸಿ ನಕುಲ್ ವಿವರಿಸಿದರು. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಸಮಸ್ಯೆಗಳು ಉಂಟಾಗುತ್ತಿದ್ದು, ಜನಪ್ರತಿನಿಧಿಗಳು ಈ ವಿಷಯದಲ್ಲಿ ಜನರಿಗೆ ಅರಿವು ಮೂಡಿಸಿ ಸಹಕರಿಸುವಂತೆ ಮನವಿ ಮಾಡಿದರು.
ಸಂಡೂರು ಶಾಸಕ ಇ.ತುಕಾರಾಂ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು. ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಸೋಮಲಿಂಗಪ್ಪ, ಅಲ್ಲಂವೀರಭದ್ರಪ್ಪ, ಜಿಪಂ ಸಿಇಒ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಮಂಜುನಾಥ, ಡಿಎಚ್‌ಒ ಜನಾರ್ದನ್, ವಿಮ್ಸ್ ನಿರ್ದೇಶಕ ಡಾ| ದೇವಾನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ಜಿಂದಾಲ್‌ನ ಉಪವ್ಯವಸ್ಥಾಪಕ ನಿರ್ದೇಶಕ ವಿನೋದ್ ನೋವೆಲ್, ಉನ್ನತ ಅಧಿಕಾರಿಗಳಾದ ಮಂಜುನಾಥ ಪ್ರಭು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.