ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಲು ಖಡಕ್ ಸೂಚನೆ
ಪ್ರತಿ ಮಗುವಿಗೂ ಆರೋಗ್ಯ ತಪಾಸಣೆ ಕಾರ್ಡ್ ನೀಡಿ, ಎರಡ್ಮೂರು ಅಂಗನವಾಡಿ ಸೇರಿಸಿ ಹೆಲ್ತ್ ಕ್ಯಾಂಪ್ ಮಾಡಿ
Team Udayavani, Jul 9, 2019, 10:04 AM IST
ಬಳ್ಳಾರಿ: ಡಿಸಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಎಸ್.ಎಸ್. ನಕುಲ್ ಮಾತನಾಡಿದರು.
ಬಳ್ಳಾರಿ: ಮುಂದಿನ ಒಂದು ತಿಂಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪ್ರತಿಯೊಬ್ಬ ಮೇಲ್ವಿಚಾರಕರು ಭೇಟಿ ನೀಡಬೇಕು. ಮಗುವಿನ ತೂಕ ಮತ್ತು ಅಪೌಷ್ಠಿಕತೆಯಿಂದ ಬಳಲುತ್ತಿರುವ ಹಾಗೂ ಆರೋಗ್ಯಯುತ ಮಕ್ಕಳ ಬಗ್ಗೆ ಪರಿಶೀಲನೆ ನಡೆಸಿ ಸಮಸ್ಯೆಗಳು ಹಾಗೂ ಸಲಹೆಗಳ ಸಮೇತ ಅಂಗನವಾಡಿವಾರು ಮಾಹಿತಿಗಳನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಆರೋಗ್ಯ ತಪಾಸಣೆಯನ್ನು ಗ್ರೇಡ್‌ವೈಸ್ ಮಾಡಬೇಕು ಮತ್ತು ಮಕ್ಕಳಿಗೆ ಏನಾದರೂ ಸಮಸ್ಯೆ ಇದೆಯೇ? ಮತ್ತು ಬೇರೆ ಯಾವುದಾದರೂ ಕಾಯಿಲೆ ಇದೆಯಾ? ಎಂಬುದನ್ನು ಪರಿಶೀಲಿಸಬೇಕು. ಎರಡ್ಮೂರು ಅಂಗನವಾಡಿ ಸೇರಿಸಿಕೊಂಡು ಹೆಲ್ತ್ ಕ್ಯಾಂಪ್ ಮಾಡಿಸಬೇಕು. ಪ್ರತಿ ಮಗುವಿಗೂ ಆರೋಗ್ಯ ತಪಾಸಣೆ ಮಾಡಿ ಅದರ ವಿವರ ಒಳಗೊಂಡ ಕಾರ್ಡ್ ನಿರ್ವಹಿಸಬೇಕು. ಇದರಿಂದ ಆ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ಹಿನ್ನೆಲೆ ತಿಳಿದು ಕ್ರಮವಹಿಸಲು ಅನುಕೂಲವಾಗುತ್ತದೆ ಎಂದರು.
ಸಿಡಿಪಿಒಗಳು ತಮ್ಮ ವ್ಯಾಪ್ತಿಯ ಮೇಲ್ವಿಚಾರಕರು ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಡಿಎಚ್ಒ ಅವರು ತಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಸಭೆ ಕರೆದು ಅವರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ ಏರ್ಪಡಿಸುವಂತೆ ತಿಳಿಸಬೇಕು ಎಂದರು.
ಅಂಗನವಾಡಿವಾರು ಸಮಗ್ರ ಮಾಹಿತಿ ಒದಗಿಸಬೇಕು ಎಂದ ಡಿಸಿ ನಕುಲ್, ನಾನು ಮತ್ತು ಜಿಪಂ ಸಿಇಒ ಅವರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಮೇಲ್ವಿಚಾರಕರು ಪರಿಶೀಲಿಸಬೇಕು ಮತ್ತು ಅವರ ಸಹಿ ಹಾಜರಾತಿಯಲ್ಲಿರಬೇಕು. ಇಲ್ಲದಿದ್ದಲ್ಲಿ ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದರು.
30 ಹೊಸ ಅಂಗನವಾಡಿ ಕೇಂದ್ರಗಳು: ಜಿಲ್ಲೆಯಲ್ಲಿ ಈ ವರ್ಷ ಹೊಸದಾಗಿ 30 ಅಂಗನವಾಡಿ ಕೇಂದ್ರಗಳು ಆರಂಭಿಸುವುದಕ್ಕೆ ಸರ್ಕಾರದಿಂದ ಮಂಜೂರಾತಿ ದೊರಕಿದ್ದು, ಅವುಗಳಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ನಕುಲ್ ಹೇಳಿದರು.
ಜಿಲ್ಲೆಯಲ್ಲಿ 2784 ಅಂಗನವಾಡಿ ಕೇಂದ್ರಗಳಿದ್ದು, ಅದರಲ್ಲಿ 561 ಕೇಂದ್ರಗಳು ಬಾಡಿಗೆಯಲ್ಲಿ ನಡೆಯುತ್ತಿವೆ. 241 ಕಟ್ಟಗಳು ನಿರ್ಮಾಣ ಹಂತದಲ್ಲಿರುವುದನ್ನು ಸಿಡಿಪಿಒ ಉಷಾ ಅವರಿಂದ ತಿಳಿದುಕೊಂಡ ಡಿಸಿ ನಕುಲ್, ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ ಬೇಕಿದ್ದರೇ ಮುತುವರ್ಜಿ ವಹಿಸಬೇಕು. ಸೈಟ್ ಸಮಸ್ಯೆ ಇದ್ದರೇ ಜಿಪಂ ಸಿಇಒ ಅವರನ್ನು ಭೇಟಿಯಾಗಿ ಬಗೆಹರಿಸಿಕೊಳ್ಳಬೇಕು ಎಂದರು.
ಈ ವರ್ಷ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ. 169 ಗುರಿ ನಿಗದಿಯಾಗಿದೆ ಎಂದು ವಿವರಿಸಿದ್ದಕ್ಕೆ ಅರ್ಜಿಗಳು ಬಂದ ನಂತರ ಶೀಘ್ರ ತೆಗೆದುಕೊಂಡು ಬನ್ನಿ ಹಂಚಿಕೆ ಮಾಡೋಣ ಎಂದು ಡಿಸಿ ನಕುಲ್ ಹೇಳಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ನಿತೀಶ್, ಪ್ರೊಬೆಷನರಿ ಐಎಎಸ್ ಈಶ್ವರ್, ಡಿಎಚ್ಒ ಶಿವರಾಜ ಹೆಡೆ, ವಾರ್ತಾಧಿಕಾರಿ ಬಿ.ಕೆ.ರಾಮಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಪ್ರತಿನಿಧಿಗಳು ಹಾಗೂ ವಿವಿಧ ತಾಲೂಕುಗಳ ಸಿಡಿಪಿಒಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.