ಮಾಳಗಡ್ಡೆ ಬಡಾವಣೆಗೆ ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಹೋರಾಟ

ಮಾಳಗಡ್ಡೆ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ

Team Udayavani, Jun 16, 2020, 11:47 AM IST

ಮಾಳಗಡ್ಡೆ ಬಡಾವಣೆಗೆ ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಹೋರಾಟ

ಬಳ್ಳಾರಿ: ಮೂಲಸೌಲಭ್ಯಕ್ಕೆ ಆಗ್ರಹಿಸಿ ಮಾಳಗಡ್ಡೆ ಹೋರಾಟ ಸಮಿತಿ ವತಿಯಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ಮಾಳಗಡ್ಡೆ  ಬಡಾವಣೆಯಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಮಾಳಗಡ್ಡೆ ಹೋರಾಟ ಸಮಿತಿ ವತಿಯಿಂದ ನಗರದ ಜಿಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು. ಶ್ರೀಧರಗಡ್ಡೆ ಗ್ರಾಮದ ಮಾಳಗಡ್ಡೆ ಬಡವಣೆಯಲ್ಲಿ ಸುಮಾರು  150 ಮನೆಗಳಿವೆ. ಈ ಬಡಾವಣೆಯಲ್ಲಿ ವಾಸಮಾಡುತ್ತಿರುವ ಜನತೆ, ಕೃಷಿ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರಾಗಿರುತ್ತಾರೆ . ಇವರೆಲ್ಲರಿಗೂ 1981ರಲ್ಲಿ ಮತ್ತು 1991ರಲ್ಲಿ ಆಶ್ರಯ ಯೋಜನೆಯಡಿ ಹಾಗೂ 1995ರಲ್ಲಿ ಇಂದಿರಾ ಆವಾಸ್‌ ಯೋಜನೆಯಡಿ ಸರ್ಕಾರವು ಪಟ್ಟಾ ಮಂಜೂರು ಮಾಡಿದೆ. ವಿಪರ್ಯಾವೆಂದರೆ, ಈ ಬಡಾವಣೆಯಲ್ಲಿ ಪಂಚಾಯಿತಿ ಪ್ರಾಧಿಕಾರವು ಕಳೆದ 10-15 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ.

ಶೌಚಾಲಯ ನಿರ್ಮಿಸಲು ಯೋಜನೆಯಿದ್ದರೂ ಹಣ ನೀಡಿಲ್ಲ. ಸುಸಜ್ಜಿತ ರಸ್ತೆ ನಿರ್ಮಿಸಿಲ್ಲ. ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಜನತೆ ದಿನಂಪ್ರತಿ ಸಮಸ್ಯೆಗಳ ಸುಳಿಯಲ್ಲಿ ಜೀವನ ಮಾಡುತ್ತಿದ್ದಾರೆ. ಅನಾರೋಗ್ಯಕರ ವಾತಾವರಣದಲ್ಲಿ ಬದುಕು ಸಾಗಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾನಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಬದ್ದ ಹಕ್ಕುಗಳಿಂದ ವಂಚಿತರಾದ ಈ ಜನತೆಗೆ ಸರ್ಕಾರಿ ಯೋಜನೆಯಡಿ ಕೂಡಲೇ ಶೌಚಾಲಯ ನಿರ್ಮಿಸಿಕೊಡಬೇಕು. ಕುಡಿವ ನೀರು ಸರಬರಾಜು, ನಿಯಮಿತವಾಗಿ ಮಾಡಲು ಸೂಕ್ರ ಕ್ರಮ ಕೈಗೊಳ್ಳಬೇಕು. ಪೈಪ್‌ಲೈನ್‌ ಅಳವಡಿಸಿ ನೀರು ಸರಬರಾಜು ಮಾಡಬೇಕು. ಕೆಟ್ಟು ಹಾಳಾಗಿ ಹೋಗಿರುವ, ನೀರು ಹರಿಯದಂತಾಗಿ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿ ಅನೇಕ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಿರುವ ಒಳಚರಂಡಿಗಳನ್ನು ದುರಸ್ತಿ ಮಾಡಿ, ಪುನಃ ನಿರ್ಮಿಸಿಕೊಡಬೇಕು. ಬಡಾವಣೆಯಲ್ಲಿ ರಸ್ತೆಯೇ ಇಲ್ಲ, ಆದ್ದರಿಂದ ರಸ್ತೆ ನಿರ್ಮಿಸಿಕೊಡಬೇಕು. ಬೀದಿ ದೀಪಗಳನ್ನು ಅಳವಡಿಸಿಕೊಡಬೇಕು. ಕಳೆದ 10-15 ವರ್ಷಗಳಿಂದ ವಿನಾಃ ಕಾರಣ ಕಟ್ಟಿಸಿಕೊಳ್ಳದ ಮನೆ ತೆರಿಗೆಯನ್ನು ಈಗಿನಿಂದಲೇ ಕಟ್ಟಿಸಿಕೊಳ್ಳಬೇಕು. ಜತೆಗೆ ಸೂಕ್ತ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದವರು ಒತ್ತಾಯಿಸಿದ್ದಾರೆ. ಬಳಿಕ ಜಿಪಂ ಸಿಇಒ ಕೆ.ನಿತೀಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾಳಗಡ್ಡ ನಿವಾಸಿಗಳ ಹೋರಾಟ ಸಮಿತಿಯ ಶ್ರೀಧರಗಡ್ಡೆ ಸಂಚಾಲಕ ಇ.ಹನುಮಂತಪ್ಪ, ಆರ್‌. ಸೋಮಶೇಖರ್‌ಗೌಡ, ಎ.ದೇವದಾಸ್‌, ಎನ್‌.ಬಿ.ಬಾಬು ಹಾಗೂ ಸದಸ್ಯರಾದ ಚೆನ್ನಬಸಪ್ಪ, ಸುಂಕಪ್ಪ, ಈರಮ್ಮ, ಸಣ್ಣ ಹನುಮಪ್ಪ, ಪಂಪಾ ಇತರರು ಇದ್ದರು.

ಟಾಪ್ ನ್ಯೂಸ್

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.