ಥಿಯೋಸಾಫಿಕಲ್ ಕಾಲೇಜು ವಿದ್ಯಾರ್ಥಿನಿಯರ ಪಕ್ಷಿ ಪ್ರೇಮ
Team Udayavani, Mar 28, 2021, 7:31 PM IST
ಹೊಸಪೇಟೆ: ಕಲಿಕೆಯ ನಡುವೆಯೂ ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾಣಿ-ಪಕ್ಷಿಗಳಿಗೆ ಆಹಾರ-ನೀರು ಒದಗಿಸುವ ಮೂಲಕ ಪಕ್ಷಿ ಪ್ರೇಮಕ್ಕೆ ಸಾಕ್ಷಿಯಾಗಿದ್ದಾರೆ.
ಬೇಸಿಗೆಯಲ್ಲಿ ಪಕ್ಷಿಗಳ ನೀರಿನ ದಾಹ ತಣಿಸಲು ಮುಂದಾಗಿರುವ ವಿದ್ಯಾರ್ಥಿನಿಯರು, ಕಳೆದ ಏಳು ವರ್ಷದಿಂದ ಕಾಲೇಜ್ ಆವರಣದ ಗಿಡ-ಮರಗಳಲ್ಲಿ ಮಣ್ಣಿನ ಮಡಿಕೆಯಲ್ಲಿ ಆಹಾರ-ನೀರಿನ ವ್ಯವಸ್ಥೆ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.
ಕಾಲೇಜಿನ ಬಿಎ, ಬಿಕಾಂ, ಎನ್ ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ಈ ಸಮಾಜಮುಖೀ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಲೇಜಿನ ಮರಗಳಿಗೆ ಸುಮಾರು 30 ಮಣ್ಣಿನ ಮಡಿಕೆಗಳನ್ನು ನೇತು ಹಾಕಿ, ಪಕ್ಷಿಗಳಿಗೆ ನೀರು ಹಾಗೂ ಆಹಾರವನ್ನು ಕೈಗೆಟುಕುವಂತೆ ಮಾಡುತ್ತಿದ್ದಾರೆ.
ಹಣ ಸಂಗ್ರಹಣೆ: ಸಿದ್ಧಪಡಿಸಿರುವ ಕಾಣಿಕೆ ಹುಂಡಿಯಲ್ಲಿ ಸ್ವಯಂಪ್ರೇರಿತರಾಗಿ ವಿದ್ಯಾರ್ಥಿಗಳು ಹಾಕಿದ ಹಣದಿಂದ ಪಕ್ಷಿಗಳಿಗೆ ಆಹಾರ ಮತ್ತು ಕಾರ್ಯಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಹಣದಿಂದ ಖರೀದಿ ಮಾಡಲಾಗುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳು ಮನೆಯಿಂದ ತಂದ ದವಸ ಧಾನ್ಯಗಳು ಪಕ್ಷಿಗಳಿಗೆ ನಿತ್ಯದ ಆಹಾರವಾಗುತ್ತಿದೆ.
ಪಕ್ಷಿ ಸ್ನೇಹಿ ಕಾರ್ಯ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಕ್ಷಿಗಳಿಗಾಗಿ ಈ ಕಾರ್ಯ ಮಾಡುತ್ತಿಲ್ಲ. ಮನೆಯಲ್ಲೂ ಸಹ ನೀರು ಮತ್ತು ಆಹಾರವನ್ನು ಇಡುತ್ತಿದ್ದಾರೆ. ಇದು ಬೇಸಿಗೆ ಸಂದರ್ಭದಲ್ಲಿ ಪಕ್ಷಿಗಳಿಗೆ ಅನಕೂಲವಾಗಲಿದೆ. ಮಾರ್ಚ್, ಏಪ್ರಿಲ್, ಮೇ ಈ ಮೂರು ತಿಂಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರವನ್ನು ಕಾಲೇಜಿನಲ್ಲಿ ಒದಗಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.