ಭಾನುವಾರದ ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲಿ ಉತ್ತಮ ಪ್ರತಿಕ್ರಿಯೆ
Team Udayavani, Jul 5, 2020, 8:46 AM IST
ಬಳ್ಳಾರಿ: ಕೋವಿಡ್ ಸೋಂಕಿತರ ಪ್ರಮಾಣ ಗಣನೀಯವಾಗಿ ಹೆಚ್ವುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಾರಿಗೊಳಿಸಿರುವ ಭಾನುವಾರ ಒಂದು ದಿನದ ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಬೆಂಗಳೂರು ರಸ್ತೆ, ಬ್ರಾಹ್ಮಣ ಬೀದಿ ರಸ್ತೆ, ಗಡಗಿ ಚನ್ನಪ್ಪ ವೃತ್ತ, ಮೋತಿ ವೃತ್ತ, ಸಂಗಮ್ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳು ವಾಹನ ಸಂಚಾರ ವಿಲ್ಲದೇ ಖಾಲಿಖಾಲಿಯಾಗಿದ್ದು, ವಾಣಿಜ್ಯ ಮಳಿಗೆಗಳು ಸಹ ಸಂಪೂರ್ಣ ಬಂದ್ ಮಾಡಿ ಲಾಕ್ ಡೌನ್ ಗೆ ಸಹಕಾರ ನೀಡಲಾಗಿದೆ.
ಹೂವು, ಹಣ್ಣು, ತರಕಾರಿ ಮಾರುಕಟ್ಟೆ, ಕಿರಾಣಿ ಅಂಗಡಿ, ಮಾಂಸದ ಅಂಗಡಿ ಸೇರಿ ಇತರೆ ಅಗತ್ಯ ವಸ್ತುಗಳ ಮಳಿಗೆಗಳು ಹೊರತುಪಡಿಸಿ ಇನ್ನುಳಿದ ಮದ್ಯದ ಅಂಗಡಿ ಸೇರಿ ಎಲ್ಲ ರೀತಿಯ ಮಳಿಗೆಗಳು ಬಂದ್ ಆಗಿವೆ.
ಪ್ರಯಾಣಿಕ ಆಟೋಗಳು ಆಲ್ಲೊಂದು, ಇಲ್ಲೊಂದು ಸಂಚರಿಸುತ್ತಿರುವುದು ಬಿಟ್ಟರೆ ಎಲ್ಲ ರೀತಿಯ ಪ್ರಯಾಣಿಕ ವಾಹನಗಳು ಸ್ಥಗಿತಗೊಂಡಿವೆ. ಸಾರಿಗೆ ಬಸ್ ಗಳು ಬಸ್ ನಿಲ್ದಾಣದಲ್ಲಿ ನಿಲುಗಡೆಯಾಗಿ ಸಂಚಾರ ಸ್ಥಗಿತಗೊಳಿಸಿವೆ.
ಇನ್ನು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದಕ್ಕಾಗಿ 5 ಡಿವೈಎಸ್ ಪಿ, 23 ಸಿಪಿಐ, ,66 ಪಿಎಸ್ಐ, 255 ಎಎಸ್ಐ, 701 ಹೆಡ್ ಕಾನಿಸ್ಟೇಬಲ್, 1198 ಪೊಲೀಸ್ ಪೇದೆ, 6 ಡಿಎಆರ್ ತುಕಡಿ, 250 ಗೃಹರಕ್ಷಕ ಸಿಬ್ಬಂದಿ ಸೇರಿ ಒಟ್ಟಿ 2000 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಸ್ ಪಿ ಸಿ.ಕೆ.ಬಾಬಾ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.