ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನಕ್ಕೆ ಕೈಜೋಡಿಸಿ
Team Udayavani, Oct 28, 2020, 4:55 PM IST
ಬಳ್ಳಾರಿ: ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನ ಮಾಡಬೇಕು. ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷತೆ ದೃಷ್ಟಿಯಿಂದಾಗಿ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ವಿಮ್ಸ್‌ನ ವೈದ್ಯಶಾಸ್ತ್ರದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿ.ಎಂ.ಸುರೇಶ್ ಹೇಳಿದರು.
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ, ರೆಡ್ ಕ್ರಾಸ್, ರೋಟರಿ ಲಯನ್ಸ್ ಕ್ಲಬ್ ಹಾಗೂ ಇತರೆ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ “”ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನ, ಸಾಮರ್ಥ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ” ಕುರಿತು ವಿಶೇಷ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಇಂದಿನ ಯುವಕರು ತಂಬಾಕು ಹಾಗೂ ಇತರೆ ಮಾದಕ ವಸ್ತುಗಳಿಂದ ದೂರವಿದ್ದು, ತಮ್ಮ ಗುರಿಯನ್ನು ತಲುಪುವುದಕ್ಕೆ ಅಗತ್ಯ ಶ್ರಮವಹಿಸಿ ಸಾಧನೆ ಮಾಡಬೇಕು ಎಂದು ಹೇಳಿದ ಅವರು ತಂಬಾಕು ಸೇವನೆಯಿಂದ ಮಾನವ ಸಂಕುಲದ ಮೇಲೆ ಉಂಟಾಗುವಅನೇಕ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಿದರು. ಸಂಪನ್ಮೂಲ ವ್ಯಕ್ತಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕರ್ತ ಎಸ್. ಭೋಜರಾಜ್ ಅವರು ತಂಬಾಕು ಉತ್ಪನ್ನಗಳ ಅಧಿ ನಿಯಮ 2003ರ ಸೆಕ್ಷನ್ 4, 5, 6ಎ, 6ಬಿ, ಮತ್ತು 7 ರ ನಿಯಂತ್ರಣಾ ಕಾಯ್ದೆಯ ಬಗ್ಗೆ ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ಡಾ| ಎಚ್.ಎಲ್. ಜನಾರ್ಧನ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮದ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಮರಿಯಂಬಿ, ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎಂ.ಎ.ಷಕೀಬ್, ಲಯನ್ಸ್ ಕ್ಲಬ್ ಅಧ್ಯಕ್ಷ ಸಿಎ ರಾಜಶೇಖರ್, ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಂ.ಶಿವ ಕುಮಾರ್ ಸೇರಿದಂತೆ ಶಮೀಮ್ ಜಕಾಲಿ, ಖಾಜಾ ಮೈನುದ್ದೀನ್, ಶಿವಸಾಗರ್ ಮತ್ತು ಮಂಜುನಾಥ ಹಾಗೂ ಪೌರರಕ್ಷಣಾದಳ ಘಟಕಾಧಿಕಾರಿಗಳಾದ ಬಸವರಾಜ ಹಾಗೂ ಸಿಬ್ಬಂದಿ ವರ್ಗ, ಗೃಹ ರಕ್ಷಕದಳದ ಘಟಕಾಧಿಕಾರಿಗಳಾದ ಸುರೇಶ್ ಮತ್ತು ಬಸವಲಿಂಗ ಹಾಗೂ ಸಿಬ್ಬಂದಿ ವರ್ಗದವರು, ರೆಡ್ ಕ್ರಾಸ್ ಸ್ವಯಂಸೇವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.