ಕರ್ಫ್ಯೂ ಮೀರುವವರ ವಿರುದ್ಧ ಕ್ರಮ ಜರುಗಿಸಿ
Team Udayavani, Apr 1, 2020, 5:59 PM IST
ಹಗರಿಬೊಮ್ಮನಹಳ್ಳಿ: ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನಸಂದಣಿ ಸೇರುತ್ತಿರುವ ಹಿನ್ನೆಲೆಯಲ್ಲಿ ತರಕಾರಿ ಮಾರುಕಟ್ಟೆ ಸ್ಥಗಿತಗೊಳಿಸಿ ತಳ್ಳುಬಂಡಿಗಳಲ್ಲಿ ಮಾರಾಟ ನಡೆಸಬೇಕು ಎಂದು ಶಾಸಕ ಎಸ್.ಭೀಮಾನಾಯ್ಕ ತಿಳಿಸಿದರು.
ಪಟ್ಟಣದ ಸರ್ಕ್ನೂಟ್ ಹೌಸ್‌ನಲ್ಲಿ ನಡೆದ 3 ತಾಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರ ಅವರು ಮಾತನಾಡಿದರು. ಪ್ರಮುಖವಾಗಿ ಕೊಟ್ಟೂರು, ಮರಿಯಮ್ಮನಹಳ್ಳಿ ಮತ್ತು ಪಟ್ಟಣದಲ್ಲಿ ಸಂಚಾರ ತಡೆಗೆ ಕಾನೂನು ಕ್ರಮ ಕೈಗೊಳ್ಳಬೇಕು. ಕೊರೊನಾ ತಡೆ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ತುರ್ತುಕ್ರಮ ಅನುಸರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ರಚನೆಯಾದ ಟಾಸ್ಕ್ಫೋರ್ಸ್ ಕಾರ್ಯನಿರ್ವಹಣೆ ವಿಫಲವಾಗುತ್ತಿದೆ. ಕೂಡಲೇ ಸರಿಪಡಿಸಿ ಎಂದು ಆದೇಶಿಸಿದರು. ಪಟ್ಟಣವೂ ಸೇರಿ 3 ತಾಲೂಕುಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಸಂಚಾರ ತಡೆಗಟ್ಟಬೇಕು. ಅನಗತ್ಯವಾಗಿ ಮನೆಬಿಟ್ಟು ಹೊರಬರುವವರು ಎಷ್ಟೇ ದೊಡ್ಡವಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ಕೋವಿಡ್ 19 ಭೀತಿ ಹೆಚ್ಚುತ್ತಿರುವುದರಿಂದ ಯಾವ ಮುಲಾಜಿಲ್ಲದೆ ಕ್ರಮ ಜರುಗಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಸಿಪಿಐ ರಾಜೇಶ್ ಪ್ರತಿಕ್ರಿಯಿಸಿ ಈಗಾಗಲೇ ಬೈಕ್ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ಕೋವಿಡ್ 19 ನೆಪದಲ್ಲಿ ಕಿರಾಣಿ ಅಂಗಡಿಯವರು ಆಹಾರ ಸಾಮಾಗ್ರಿಗಳನ್ನು ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಆಶಪ್ಪ ಪೂಜಾರ್ ತಿಳಿಸಿದರು.
ಈಗಾಗಲೇ ಕಿರಾಣಿ ಅಂಗಡಿ ಮಾಲೀಕರಿಗೆ ಎಚ್ಚರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. 332 ನಿರಾಶ್ರಿತರಿಗೆ ಆಹಾರ ಪೂರೈಸುತ್ತಿರುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ| ದಿನೇಶ್ ತಿಳಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ| ಸುಲೋಚನಾ, ಕೊಟ್ಟೂರು ತಹಶೀಲ್ದಾರ್ ಅನಿಲ್‌ಕುಮಾರ್, ಜೆಸ್ಕಾಂ ಎಇಇ ತೇಜಾನಾಯ್ಕ, ಎಇಇ ಪ್ರಭಾಕರಶೆಟ್ಟಿ, ಕೊಟ್ಟೂರು ಸಿಪಿಐ ರವೀಂದ್ರ, ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ಎಚ್. ಎಫ್. ಬಿದರಿ, ಪುರಸಭೆ ಮುಖ್ಯಾಧಿ ಕಾರಿ ಕೃಷ್ಣನಾಯ್ಕ, ಎಡಿಎಚ್ ಡಾ| ಪರಮೇಶ್ವರ, ಪಿಎಸ್‌ಐಗಳಾದ ವಿ.ಲಕ್ಷ್ಮಣ, ಸರಳಾ, ಶಿವಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.