ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ವಹಿಸಿ

Team Udayavani, Nov 18, 2020, 6:47 PM IST

ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ವಹಿಸಿ

ಹೊಸಪೇಟೆ: ಹಂಪಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮವಹಿಸಬೇಕು. ಈ ವೇಳೆ ಪಾರಂಪರಿಕ ಸ್ಮಾರಕಗಳಿಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು ಎಂದು ಹೊಸದಿಲ್ಲಿಯ ಭಾರತೀಯ ಪುರಾತತ್ವ ಇಲಾಖೆಯ ಡೈರೆಕ್ಟರ್‌ ಜನರಲ್‌ ವಿ. ವಿದ್ಯಾವತಿ ಹೇಳಿದರು.

ತಾಲೂಕಿನ ಕಮಲಾಪುರದ ಕ್ಲರ್ಕ್‌ ಇನ್‌ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಹಂಪಿ ಅಭಿವೃದ್ಧಿ ಕುರಿತ ಮಹತ್ವದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಂಪಿ ಅಭಿವೃದ್ಧಿಗೆ ಸಮಗ್ರ ನಿರ್ವಹಣಾ ಯೋಜನೆ (ಐಎಂಪಿ) ಜಾರಿ ಮಾಡಿದ್ದು, ಇದರನ್ವಯ ಕ್ರಮವಹಿಸಬೇಕು.ಹಂಪಿಯ ಸ್ಮಾರಕಗಳ ಬಳಿ 300 ಮೀಟರ್‌ ವ್ಯಾಪ್ತಿಯಲ್ಲಿ ಮೂಭೂತ ಸೌಕರ್ಯ ಒದಗಿಸಲು ಅಡ್ಡಿ ಇಲ್ಲ. ಆದರೆ, ಚಾರಿತ್ರಿಕ ಸ್ಮಾರಕಗಳಿಗೆಧಕ್ಕೆಯಾಗಬಾರದು. ಹಂಪಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರ ಹಿತದೃಷ್ಟಿಯಿಂದ ಪಾರ್ಕಿಂಗ್‌ ವ್ಯವಸ್ಥೆ, ಶೌಚಾಲಯ, ಕುಡಿವ ನೀರು ವ್ಯವಸ್ಥೆ ಮಾಡಬೇಕು. ಜತೆಗೆ ಪಾರಂಪರಿಕರಸ್ತೆಗಳನ್ನು ನಿರ್ಮಿಸಬೇಕು. ಹಂಪಿ ಸ್ಮಾರಕಗಳ ಸೊಬಗನ್ನು ಇಡೀ ವಿಶ್ವಕ್ಕೆ ಉಣ ಬಡಿಸುವ ಕೆಲಸದಲ್ಲಿ ಎಲ್ಲಾ ಇಲಾಖೆಗಳು ಒಂದೇ ಛತ್ರದಡಿ ಕೆಲಸ ಮಾಡಬೇಕು ಎಂದರು.

ಸ್ಮಾರಕಗಳ ಜೀರ್ಣೋದ್ಧಾರ ಮಾಡಿ: ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇಗುಲದ ರಥಬೀದಿಯಸಾಲು ಮಂಟಪಗಳ ಜಿರ್ಣೋದ್ಧಾರ ಕೆಲಸ ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಹಂಪಿಯಲ್ಲಿನ ಐತಿಹಾಸಿಕ ಸ್ಮಾರಕಗಳ ಜೀಣೋದ್ಧಾರಕ್ಕೆ ಕ್ರಮವಹಿಸಬೇಕು. ಹಂಪಿ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ. ಯೋಜನೆ ರೂಪಿಸಿ ವರದಿ ಕಳುಹಿಸಿದರೆ ಶೀಘ್ರವೇ ಮಂಜೂರಾತಿ ನೀಡಲಾಗುವುದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಭಾರತೀಯ ಪುರಾತತ್ವ ಇಲಾಖೆಯ ಜಂಟಿನಿರ್ದೇಶಕ ಜಾನ್ವಿತ್‌ ಶರ್ಮಾ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ರಮೇಶ್‌, ಬಳ್ಳಾರಿಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ, ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್‌ ವಿಕಾಸ ಕಿಶೋರ್‌, ಹಂಪಿ ನಿರ್ವಹಣಾ ಪ್ರಾಧಿಕಾರ ಪ್ರಭಾರ ಆಯುಕ್ತ ತನ್ವೀರ್‌ ಶೆಕ್‌ ಆಸಿಫ್‌, ಭಾರತೀಯ ಪುರಾತತ್ವ ಇಲಾಖೆಯ ಹಂಪಿ ವಲಯದ ಅಧಿಕಾರಿ ಕಾಳಿಮುತ್ತು, ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರು ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲ ಸೇರಿದಂತೆ ಹಂಪಿ ತುಂಗಭದ್ರಾ ನದಿ ಭಾಗಕ್ಕೆ ಭೇಟಿ ನೀಡಿ ಅಭಿವೃದ್ಧಿ ಕುರಿತು ಸಲಹೆ ನೀಡಿದರು.

ಟಾಪ್ ನ್ಯೂಸ್

Jaiswal in the Champions Trophy; debut in the England series?

Jaiswal: ಚಾಂಪಿಯನ್ಸ್‌ ಟ್ರೋಫಿಗೆ ಯಶಸ್ವಿ ಜೈಸ್ವಾಲ್;‌ ಇಂಗ್ಲೆಂಡ್‌ ಸರಣಿಯಲ್ಲೇ ಪದಾರ್ಪಣೆ?

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jaiswal in the Champions Trophy; debut in the England series?

Jaiswal: ಚಾಂಪಿಯನ್ಸ್‌ ಟ್ರೋಫಿಗೆ ಯಶಸ್ವಿ ಜೈಸ್ವಾಲ್;‌ ಇಂಗ್ಲೆಂಡ್‌ ಸರಣಿಯಲ್ಲೇ ಪದಾರ್ಪಣೆ?

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.