ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಲಾಭ ಪಡೆಯಿರಿ
ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ವಿಶೇಷ ಗ್ರಾಮ ಸಭೆ
Team Udayavani, Apr 25, 2022, 2:43 PM IST
ಸಿರುಗುಪ್ಪ: ರಾಜ್ಯದ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸುವ ಉದ್ದೇಶದಿಂದ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ವಿಶೇಷ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿದೆಂದು ತಾಲೂಕು ನರೇಗಾ ಯೋಜನೆ ನಿರ್ದೇಶಕಿ ರಾಜೇಶ್ವರಿ ತಿಳಿಸಿದರು.
ತಾಲೂಕಿನ ಕರೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಂಚಾಯಿತಿ ರಾಜ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯದೆ ಇರುವ ಅರ್ಹ ರೈತರಿಗೆ ಕ್ರೆಡಿಟ್ ಕಾರ್ಡ್ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ನಬಾರ್ಡ್ ಪ್ರತಿನಿ ಧಿಗಳು ಮತ್ತು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರತಿಯೊಬ್ಬ ರೈತರಿಗೆ ಈ ಯೋಜನೆ ಬಗ್ಗೆ ಮಾಹಿತಿ ನೀಡಲಾಗುತ್ತದೆಂದು ಹೇಳಿದರು.
ಕೃಷಿ ಅಧಿಕಾರಿ ಪರಮೇಶ್ವರ ರೆಡ್ಡಿ ಮಾತನಾಡಿ, ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ನ್ನು ಪಡೆಯಲು ಆಧಾರ ಕಾರ್ಡ್ ಮತ್ತು ಪಹಣಿ ದಾಖಲೆಗಳು ಬೇಕಾಗುತ್ತದೆ. ಸಿಸಿ ಸೇವಾ ಕೇಂದ್ರಗಳಲ್ಲಿ, ಬ್ಯಾಂಕ್‌ಗಳಲ್ಲಿ, ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿ ಕ್ರೆಡಿಟ್ ಕಾರ್ಡ್‌ನ್ನು ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದ ರೈತರ ಸಾಲಕ್ಕೆ ಬ್ಯಾಂಕ್‌ನಲ್ಲಿ ಶೇ. 2% ರಷ್ಟು ಬಡ್ಡಿದರದಲ್ಲಿ 3ಲಕ್ಷ ಸಾಲವನ್ನು ನೀಡಲಾಗುತ್ತಿದ್ದು, ಸಕಾಲಕ್ಕೆ ಈ ಸಾಲವನ್ನು ಮರುಪಾವತಿ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ, ಪಿಡಿಒ ಶಿವಪ್ಪ, ಸದಸ್ಯರು, ರೈತರು, ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.