ಜೆಡಿಎಸ್‌ನಿಂದ ರಾಜಕಾರಣಕ್ಕೆ ಬಹುದೊಡ್ಡ ಕೊಡುಗೆ
Team Udayavani, Sep 1, 2017, 2:49 PM IST
ಹೂವಿನಹಡಗಲಿ: ಜನತಾ ಪರಿವಾರ ರಾಜ್ಯ ರಾಜಕಾರಣಕ್ಕೆ ಬಹು ದೊಡ್ಡ ಕೊಡುಗೆ ನೀಡಿದೆ. ಜನತಾ ಪರಿವಾರದಲ್ಲಿದ್ದ ರಾಜಕೀಯ ನಾಯಕರು ದೇಶದ ಪ್ರಧಾನಿ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಂತಹ ಬಹುದೊಡ್ಡ ಹುದ್ದೆ ಅಲಂಕರಿಸಿ ರಾಜ್ಯದ ಜನತೆಗೆ ಉತ್ತಮ ಸೇವೆ ನೀಡಿದ್ದಾರೆ ಎಂದು ಸೇವಾದಳದ ರಾಜ್ಯಾಧ್ಯಕ್ಷ ಬಸವರಾಜ ಪಾದಯಾತ್ರೆ ಅಭಿಪ್ರಾಯಪಟ್ಟರು.
ತಾಲೂಕ ಕ್ರೀಡಾಂಗಣದ ಹಿಂಭಾಗದಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಸ್ತುತ ಜನತೆ ನೀಡಿರುವ ಅಧಿಕಾರವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ದುರ್ಬಳಕೆ ಮಾಡಿಕೊಂಡು ವ್ಯಾಪಕ ಭ್ರಷ್ಟಾಚಾರ, ಸಂಪತ್ತು ಲೂಟಿ ಹೊಡೆದು ಜೈಲಿಗೆ ಹೋದಂತೆ ಜೆಡಿಎಸ್‌ನಲ್ಲಿ ಯಾರು ಜೈಲಿಗೆ ಹೋಗಿಲ್ಲ ಎಂದರು. ಬಳ್ಳಾರಿ ಜಿಲ್ಲಾ ರಾಜಕಾರಣ ಈ ಹಿಂದೆ ಗಣಿ ಧೂಳಿನಿಂದಾಗಿ ಕೊಳಕಾಯಿತು. ಅದನ್ನು ಕೊಡವಿ ಶುಬ್ರಗೊಳಿಸುವ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರೈತರಿಗಾಗಿ ಗ್ರಾಮ ವಾಸ್ತವ್ಯ, ಸಾಲ ಮನ್ನಾ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮ ಕೈಗೊಂಡು ಜನರಿಗೆ ಸಾಕಷ್ಟು ಅನುಕೂಲ ಮಾಡಿದ್ದರು. ನೇರ ನಿಷ್ಠುರ ಆಡಳಿತ ಮಾಡಿರುವ ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಉತ್ತಮ ಭವಿಷ್ಯವಿದೆ ಎಂದರು.
ಕಪ್ಪುಹಣದ ಹೆಸರಿನಲ್ಲಿ ಜನರ ಬದುಕಿನೊಂದಿಗೆ ಆಟವಾಡಿದ ಪ್ರಧಾನಿ ಮೋದಿ ಮಾಡಿದ ಘನ ಕಾರ್ಯ ಏನು ಇಲ್ಲ. ಅವರು ಎಷ್ಟು ಕಪ್ಪುಹಣ ತಂದರು ಎನ್ನುವುದನ್ನು ಜನರಿಗೆ ಲೆಕ್ಕ ಕೊಡಬೇಕಾಗಿದೆ. ನೋಟು ಬ್ಯಾನ್ ಮಾಡಿ ಬಡ ಜನರಿಗೆ ತೊಂದರೆ ಕೊಟ್ಟು ಆಂಬಾನಿಯಂಥ ದೊಡ್ಡ ದೊಡ್ಡ ಕಾರ್ಪೋರೆಟ್‌ಗಳಿಗೆ ಅನುಕೂಲ ಮಾಡಿದ್ದಾರೆ. ರಾಜ್ಯದಲ್ಲಿ ಹೆಚ್ಚು ಬಿಜೆಪಿ ಸಂಸದರಿದ್ದರೂ ಕಳಸ ಬಂಡೂರಿ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಆರೋಪಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಶಿವಣ್ಣ, ಹಾವೇರಿ ಜಿಲ್ಲಾ ರತ್ನ ಭಾರತ ರೈತ ಸಮಾಜ ಜಿಲ್ಲಾಧ್ಯಕ್ಷ ಮಹಾಂತೇಶ ಎಚ್.ಪಾಟೀಲ್, ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ಶಿವಕುಮಾರಿ, ಸೋಮನಗೌಡ ಮಾತನಾಡಿದರು. ತಾಲೂಕ ಜೆಡಿಎಸ್ ಅಧ್ಯಕ್ಷ ಟಿ.ನಾಗರಾಜ ಅಧ್ಯಕ್ಷತೆ ವಹಿಸಿದ್ದರು. ಕೋಡಬಾಳ ಚಂದ್ರಪ್ಪ, ವಸಂತ, ಮಲ್ಲಿಕಾರ್ಜುನ ಕಲ್ಲಿಕೋಟಿ, ಹಾವೇರಿ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಬೇವಿನ ಮರದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.